Homeಮುಖಪುಟಕಾರು ಅಪಘಾತ; ಪ.ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

ಕಾರು ಅಪಘಾತ; ಪ.ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

- Advertisement -
- Advertisement -

ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳದ ಸಿಎಂ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಕಾರು ಬುಧವಾರ ಅಪಘಾತಕ್ಕೀಡಾಗಿದ್ದು, ಮಮತಾ ಬ್ಯಾನರ್ಜಿ ಅವರು ಸಣ್ಣಪುಟ್ಟ ಗಾಯದಿಂದ ಅಪಾಯದಿಂದ ಪಾರಾಗಿದ್ದಾರೆ.

ಪೂರ್ವ ಬುರ್ದ್ವಾನ್‌ನಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಕೋಲ್ಕತ್ತಾಗೆ ಹಿಂತಿರುಗುತ್ತಿದ್ದಾಗ ಅಪಘಾತವಾಗಿದ್ದು. ಅಪಘಾತದಲ್ಲಿ ಮಮತಾ ಬ್ಯಾನರ್ಜಿಯ ತಲೆಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಮಳೆ, ದಟ್ಟ ಮಂಜು ಹಾಗೂ ಕಡಿಮೆ ಗೋಚರತೆಯ ಕಾರಣ ಮತ್ತೊಂದು ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬ್ಯಾನರ್ಜಿ ಅವರ ಕಾರು ಇದ್ದಕ್ಕಿದ್ದಂತೆ ಬ್ರೇಕ್‌ ಹಾಕಿದೆ. ಹಠಾತ್ ಬ್ರೇಕ್‌ ಹಾಕಿದ ಕಾರಣ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಬೆಂಗಾವಲು ಪಡೆಯ ಮುಂದೆ ಕಾರೊಂದು ಹಠಾತ್ತನೆ ಬಂದಿತ್ತು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕಾರು ಚಾಲಕ ಈ ವೇಳೆ ಬ್ರೇಕ್ ಹಾಕಿದ್ದಾನೆ ಎಂದು ತಿಳಿದು ಬಂದಿದೆ. ಕೆಟ್ಟ ಹವಾಮಾನದ ಕಾರಣ ಬ್ಯಾನರ್ಜಿ ಅವರು ಹೆಲಿಕಾಪ್ಟರ್ ಬದಲು ಕಾರಿನಲ್ಲಿ ಸಂಚರಿಸುತ್ತಿದ್ದರು ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಬುರ್ದ್ವಾನ್‌ನಲ್ಲಿ ಸಭೆಯಲ್ಲಿ ಪಾಲ್ಗೊಳ್ಳಲು ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ಮೂಲಕ ತೆರಳಿದ್ದರು ಎಂದು ಹೇಳಲಾಗಿದೆ. ಅವರು ಯಾವಾಗಲೂ ಕಾರಿನಲ್ಲಿ ಮುಂಭಾಗದ ಸೀಟಿನಲ್ಲಿ ಕುಳಿತುಕೊಳ್ಳುತ್ತಾರೆ. ಕಾರು ಬ್ರೇಕ್‌ ಹಾಕಿದಾಗ ತಲೆಯು ವಿಂಡ್ ಶೀಲ್ಡ್ಗೆ ಅಪ್ಪಳಿಸಿತ್ತು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಮಮತಾಗೆ ಯಾವುದೇ ಗಂಭೀರ ಗಾಯವಾಗಿರಲಿಲ್ಲ. ಮಮತಾ ಬ್ಯಾನರ್ಜಿ ವೈದ್ಯಕೀಯ ಚಿಕಿತ್ಸೆ ಪಡೆಯದೆ ಕೋಲ್ಕತ್ತಾಗೆ ತೆರಳಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...