Homeಮುಖಪುಟರಾಹುಲ್ ಗಾಂಧಿ ಪ್ರತಿಷ್ಠೆಗೆ ಧಕ್ಕೆ ತರಲು ಮಮತಾ ಬ್ಯಾನರ್ಜಿ-ಮೋದಿ ಒಪ್ಪಂದ: ಸಂಸದ ಚೌಧರಿ ಆರೋಪ

ರಾಹುಲ್ ಗಾಂಧಿ ಪ್ರತಿಷ್ಠೆಗೆ ಧಕ್ಕೆ ತರಲು ಮಮತಾ ಬ್ಯಾನರ್ಜಿ-ಮೋದಿ ಒಪ್ಪಂದ: ಸಂಸದ ಚೌಧರಿ ಆರೋಪ

- Advertisement -
- Advertisement -

ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ನ ಪ್ರತಿಷ್ಠೆಗೆ ಧಕ್ಕೆ ತರಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಸೋಮವಾರ ಆರೋಪಿಸಿದ್ದಾರೆ.

ಎಎನ್‌ಐ ಜೊತೆ ಮಾತನಾಡಿರುವ ಚೌಧರಿ, ”ಮಮತಾ ಬ್ಯಾನರ್ಜಿ ಅವರು ಪ್ರಧಾನಿಯವರ ನಿರ್ದೇಶನದ ಮೇರೆಗೆ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ನ ಮಾನಹಾನಿ ಮಾಡಲು ಪ್ರಧಾನಿ ಮತ್ತು ‘ದೀದಿ’ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.”

”ಇಡಿ-ಸಿಬಿಐ ದಾಳಿಯಿಂದ ತನ್ನನ್ನು ತಾನು ಉಳಿಸಿಕೊಳ್ಳಲು ದೀದಿ ಬಯಸುತ್ತಾರೆ, ಅದಕ್ಕಾಗಿಯೇ ಅವರು ಕಾಂಗ್ರೆಸ್ ವಿರುದ್ಧ ಮಾತನಾಡಿ, ಈ ಪ್ರಧಾನಿಯೊಂದಿಗೆ ಸಂತೋಷವಾಗಿರುತ್ತಾರೆ” ಎಂದು ಚೌಧರಿ ಹೇಳಿದರು.

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ಮೇ ಮತ್ತು ಜೂನ್ ನಲ್ಲಿ ನಡೆಯುವ ಸಾಧ್ಯತೆ ಇದೆ. ಸುಮಾರು 2,000 ಟಿಎಂಸಿ, ಬಿಜೆಪಿ ಕಾರ್ಯಕರ್ತರು ಇಲ್ಲಿನ ಬಹರಂಪುರ ಕಚೇರಿಯಲ್ಲಿ ಪಕ್ಷದ ಧ್ವಜ ಹಿಡಿದು, ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು ಎಂದು ಚೌಧರಿ ಭಾನುವಾರ ಹೇಳಿದರು.

ಇದನ್ನೂ ಓದಿ: ಬಿಜೆಪಿ ರಾಹುಲ್ ಗಾಂಧಿಯನ್ನು ‘ಹೀರೋ’ ಮಾಡುತ್ತಿದೆ: ಮಮತಾ ಬ್ಯಾನರ್ಜಿ ವಾಗ್ದಾಳಿ

ಭಾನುವಾರ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಪಕ್ಷದ ಆಂತರಿಕ ಸಭೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಬಿಜೆಪಿಯು “ಹೀರೋ” ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆ. ಈ ಮೂಲಕ ಪ್ರಸ್ತುತ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಲಂಡನ್‌ನಲ್ಲಿ ನೀಡಿದ ಅವರ ಹೇಳಿಕೆಗಳ ವಿಚಾರವಾಗಿ ಸಂಸತ್ತಿನ ಕಲಾಪಗಳನ್ನು ಸ್ಥಗಿತಗೊಳಿಸಿದ್ದಾರೆ” ಎಂದು ಹೇಳಿದ್ದಾರೆ.

”ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ವಿಫಲವಾಗಿದೆ ಮತ್ತು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಕೇಸರಿ ಪಕ್ಷದ ನಡುವೆ ಅಘೋಷಿತ ಒಪ್ಪಂದವಿದೆ” ಎಂದು ಆರೋಪ ಮಾಡಿದ್ದಾರೆ.

”ವಿರೋಧ ಪಕ್ಷಗಳು ಜನರ ಬಗ್ಗೆ ಕಾಳಜಿ ವ್ಯಕ್ತಪಡಿಸುವುದನ್ನು ತಡೆಯುವ ಮೂಲಕ ಬಿಜೆಪಿ ಲಾಭ ಮಾಡಿಕೊಳ್ಳುವ ಗುರಿಯನ್ನು ಹೊಂದಿದೆ” ಎಂದು ಅವರು ಹೇಳಿದರು.

ಕಾಂಗ್ರೆಸ್ ವಿರೋಧ ಪಕ್ಷದ “ಬಿಗ್ ಬಾಸ್” ಅಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಮೂಲಕ ಎಲ್ಲ ವಿರೋಧ ಪಕ್ಷಗಳು ಒಗ್ಗೂಡಿ 2024ರ ಲೋಕಾಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ವಿಚಾರದಿಂದ ದೂರ ಉಳಿದಿದ್ದಾರೆ.

ಕಾಂಗ್ರೆಸ್ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿರುವುದು ಮುಂದುವರೆದಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...