Homeಮುಖಪುಟವಲಸೆ ಕಾರ್ಮಿಕರಿಗೆ ತಲಾ 10 ಸಾವಿರ ನೀಡಿ: ಮಮತಾ ಬ್ಯಾನರ್ಜಿ ಮನವಿ

ವಲಸೆ ಕಾರ್ಮಿಕರಿಗೆ ತಲಾ 10 ಸಾವಿರ ನೀಡಿ: ಮಮತಾ ಬ್ಯಾನರ್ಜಿ ಮನವಿ

- Advertisement -
- Advertisement -

ಕೋವಿಡ್-19 ಬಿಕ್ಕಟ್ಟಿನ ನಡುವೆ ವಲಸೆ ಕಾರ್ಮಿಕರಿಗೆ ತಲಾ 10 ಸಾವಿರ ರೂಗಳ ನೆರವನ್ನು ಒಂದೇ ಬಾರಿಗೆ ನೀಡುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಲಾಕ್ ಡೌನ್ ನಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಅಸಂಘಟಿತ ವಲಯದಲ್ಲಿ ಕೆಲಸದಲ್ಲಿ ತೊಡಗಿರುವವರಿಗೆ ನೆರವು ನೀಡಬೇಕೆಂದು ಅವರು ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.

ಪ್ರಧಾನಮಂತ್ರಿಗಳು ನಾಗರಿಕ ಸಹಾಯಕ ಮತ್ತು ತುರ್ತುಪರಿಸ್ಥಿತಿಗಳ ನಿಧಿ (PM-CARES) ಯಲ್ಲಿನ ಪರಿಹಾರದ ಒಂದು ಭಾಗವನ್ನು ಈ ಉದ್ದೇಶಕ್ಕಾಗಿ ಬಳಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ಜನರು ಸಾಂಕ್ರಾಮಿಕ ರೋಗದಿಂದ ಸಹಿಸಲಾರದ ಪ್ರಮಾಣದಲ್ಲಿ ಆರ್ಥಿಕ ನಷ್ಟವನ್ನು ಎದುರಿಸುತ್ತಿದ್ದಾರೆ ಹಾಗಾಗಿ ಜನರ ನೆರವಿಗೆ ಕೇಂದ್ರ ಸರ್ಕಾರ ಬರಬೇಕೆಂದು ಹೇಳಿದ್ದಾರೆ.

ಅಸಂಘಟಿತ ವಲಯದ ಜನರು ಸೇರಿದಂತೆ ವಲಸೆ ಕಾರ್ಮಿಕರಿಗೆ ಒಂದೇ ಬಾರಿ ನೆರವಿನಂತೆ ತಲಾ 10 ಸಾವಿರ ರೂಪಾಯಿಗಳನ್ನು ಕಾರ್ಮಿಕರ ಖಾತೆಗೆ ನೇರ ವರ್ಗಾವಣೆ ಮಾಡುವಂತೆ ಮನವಿ ಮಾಡಿದ್ದಾರೆ.

ಕೊರೊನ ಸಂದರ್ಭದಲ್ಲಿ ಜನರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಇದನ್ನು ಆರ್ಥ ಮಾಡಿಕೊಂಡು ಸಂತ್ರಸ್ತರ ನೆರವಿಗೆ ಬರಬೇಕೆಂದು ಅವರು ಕೋರಿದ್ದಾರೆ.


ಇದನ್ನೂ ಓದಿ: 20 ಲಕ್ಷ ಕೋಟಿ ಪ್ಯಾಕೇಜ್‌‌ ಘೋಷಿಸಿದರೂ 35% ಸಣ್ಣ ಉದ್ಯಮ ಸ್ಥಗಿತದತ್ತ: ಸಮೀಕ್ಷೆ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದ್ದು, ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...