Homeಮುಖಪುಟಪಶ್ಚಿಮ ಬಂಗಾಳದಲ್ಲಿ ನಾವು ಬಂಧನ ಕೇಂದ್ರಗಳನ್ನು ಸ್ಥಾಪಿಸುವುದಿಲ್ಲ : ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ನಾವು ಬಂಧನ ಕೇಂದ್ರಗಳನ್ನು ಸ್ಥಾಪಿಸುವುದಿಲ್ಲ : ಮಮತಾ ಬ್ಯಾನರ್ಜಿ

- Advertisement -
- Advertisement -

“ನಾನು ಸಂವಿಧಾನವನ್ನು ಅನುಸರಿಸುತ್ತೇನೆ, ಜಾತ್ಯತೀತ ರಾಜಕೀಯ ಮಾಡುತ್ತೇನೆ. ನಮ್ಮ ಸರ್ಕಾರ ರಾಜ್ಯದಲ್ಲಿ ಬಂಧನ ಕೇಂದ್ರಗಳನ್ನು ಸ್ಥಾಪಿಸುವುದಿಲ್ಲ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಡಿ.2) ಹೇಳಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಿಂದ (ಎಸ್‌ಐಆರ್‌) ಸಾರ್ವಜನಿಕರು ತೊಂದರೆ ಅನುಭವಿಸುವುದು ನಮಗೆ ಇಷ್ಟವಿಲ್ಲ. ಹಾಗಾಗಿ, ‘ಬ್ರಿಟಿಷರಂತೆ’ ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಬಲವಂತದ ಸೂಚನೆಗಳನ್ನು ನೀಡಬೇಡಿ ಎಂದು ಕೇಂದ್ರ ಸರ್ಕಾರವನ್ನು ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನೀವು ಸೂಚನೆಗಳನ್ನು ನೀಡುವುದಾದರೆ ರಾಜ್ಯ ಸರ್ಕಾರಕ್ಕೆ ನೀಡಿ, ಅಧಿಕಾರಿಗಳಿಗೆ ನೀಡಬೇಡಿ. ಇಲ್ಲದಿದ್ದರೆ ನಾವು ನಮ್ಮ ಅಧಿಕಾರಿಗಳನ್ನು ರಕ್ಷಿಸಬೇಕಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಎರಡನೇ ಹಂತದಲ್ಲಿ ಮೂರು ಕೇಂದ್ರಾಡಳಿತ ಪ್ರದೇಶಗಳು ಮತ್ತು ಒಂಭತ್ತು ರಾಜ್ಯಗಳಲ್ಲಿ ಭಾರತೀಯ ಚುನಾವಣಾ ಆಯೋಗ ಎಸ್‌ಐಆರ್ ನಡೆಸುತ್ತಿದೆ. 9 ರಾಜ್ಯಗಳಲ್ಲಿ ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ಒಳಗೊಂಡಿದೆ. ಈ ರಾಜ್ಯಗಳು ಚುನಾವಣಾ ಆಯೋಗದ ಕ್ರಮವನ್ನು ತೀವ್ರವಾಗಿ ವಿರೋಧಿಸಿವೆ.

ತಮಿಳುನಾಡು, ಕೇರಳ ಎಸ್‌ಐಆರ್ ವಿರುದ್ದ ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳದಲ್ಲಿ ಬೂತ್‌ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಸರಣಿ ಸಾವು ಈ ರಾಜ್ಯಗಳ ಎಸ್‌ಐಆರ್‌ ವಿರೋಧಿ ವಾದಕ್ಕೆ ಪುಷ್ಠಿ ನೀಡಿದೆ.

2019ರಲ್ಲಿ ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ನಡೆಸಲಾಗಿದೆ. ಈ ವೇಳೆ ಸುಮಾರು 19 ಲಕ್ಷ ಜನರನ್ನು ಭಾರತೀಯ ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿದೆ. ಇದೇ ರೀತಿ ಪಶ್ಚಿಮ ಬಂಗಾಳದಲ್ಲೂ ಎನ್‌ಆರ್‌ಸಿ ನಡೆಸಲು ಕೇಂದ್ರ ಸರ್ಕಾರ ಯೋಜಿಸಿದೆ ಎನ್ನಲಾಗ್ತಿದೆ.

ಅಸ್ಸಾಂನಲ್ಲಿ ಎನ್‌ಆರ್‌ಸಿ ಬಳಿಕ ಅನೇಕ ಜನರನ್ನು ಬಂಧನ ಕೇಂದ್ರಗಳಲ್ಲಿ ಇರಿಸಲಾಗಿದೆ. ಪಶ್ಚಿಮ ಬಂಗಾಳದಲ್ಲೂ ಅದೇ ಆತಂಕ ಎದುರಾಗಿದೆ. ಅಸ್ಸಾಂ, ಪಶ್ಚಿಮ ಬಂಗಾಳ ಮಾತ್ರವಲ್ಲದೆ ಎಲ್ಲಾ ರಾಜ್ಯಗಳು ಬಂಧನ ಕೇಂದ್ರಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಈ ಸೂಚನೆಯನ್ನು ನಾವು ಪಾಲಿಸುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...