Homeಮುಖಪುಟಫೆ.21ರಂದು ಮಮತಾ ಬ್ಯಾನರ್ಜಿ ಪಂಜಾಬ್‌ಗೆ ಭೇಟಿ; ಕೇಜ್ರಿವಾಲ್, ಭಗವಂತ್ ಮಾನ್ ಜತೆ ಮಾತುಕತೆ

ಫೆ.21ರಂದು ಮಮತಾ ಬ್ಯಾನರ್ಜಿ ಪಂಜಾಬ್‌ಗೆ ಭೇಟಿ; ಕೇಜ್ರಿವಾಲ್, ಭಗವಂತ್ ಮಾನ್ ಜತೆ ಮಾತುಕತೆ

- Advertisement -
- Advertisement -

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಫೆಬ್ರವರಿ 21 ರಂದು ಪಂಜಾಬ್‌ಗೆ ಭೇಟಿ ನೀಡಲಿದ್ದು, ದೆಹಲಿ ಮತ್ತು ಪಂಜಾಬ್ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಹಾಗೂ ಭಗವಂತ್ ಮಾನ್ ಅವರನ್ನು ಭೇಟಿ ಮಾಡಬಹುದು ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ತೃಣಮೂಲ ಕಾಂಗ್ರೆಸ್ ವರಿಷ್ಠರು ಅಮೃತ್ ಸರ ಗೋಲ್ಡನ್ ಟೆಂಪಲ್‌ನಲ್ಲಿ ಪ್ರಾರ್ಥನೆ ಸಲ್ಲಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

‘ಮುಖ್ಯಮಂತ್ರಿ ಫೆಬ್ರವರಿ 21 ರಂದು ಪಂಜಾಬ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಅವರ ಭೇಟಿಯ ಸಮಯದಲ್ಲಿ, ಅವರು ಅಮೃತಸರದ ಗೋಲ್ಡನ್ ಟೆಂಪಲ್‌ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ಈ ಭೇಟಿಯ ಸಮಯದಲ್ಲಿ ಅವರು ದೆಹಲಿ ಮುಖ್ಯಮಂತ್ರಿ ಮತ್ತು ಪಂಜಾಬ್ ಮುಖ್ಯಮಂತ್ರಿಯನ್ನು ಭೇಟಿಯಾಗುವ ಹೆಚ್ಚಿನ ಸಾಧ್ಯತೆಗಳಿವೆ’ ಹಿರಿಯ ಅಧಿಕಾರಿಯೊಬ್ಬರು ರಾಷ್ಟ್ರೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆ ಮತ್ತು ಪ್ರತಿಪಕ್ಷಗಳ ಒಕ್ಕೂಟದ ರಚನೆಯ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಉನ್ನತ ನಾಯಕರೊಂದಿಗಿನ ಬ್ಯಾನರ್ಜಿಯ ಸಭೆ ಮಹತ್ವ ಪಡೆದುಕೊಂಡಿದೆ ಎಂದು ಪರಿಗಣಿಸಲಾಗಿದೆ. ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸುತ್ತಿರುವ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪಂಜಾಬ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ.

ಬ್ಯಾನರ್ಜಿ ಈಗಾಗಲೇ ರೈತರಿಗೆ ತಮ್ಮ ಬೆಂಬಲವನ್ನು ನೀಡಿದ್ದಾರೆ ಮತ್ತು ಅವರು ನವದೆಹಲಿಗೆ ಮೆರವಣಿಗೆ ಮಾಡಲು ಪ್ರಯತ್ನಿಸುತ್ತಿದ್ದಾಗ ಪ್ರತಿಭಟನಾಕಾರರ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ; ಮೂರನೆ ದಿನಕ್ಕೆ ಕಾಲಿಟ್ಟ ‘ದೆಹಲಿ ಚಲೋ’ ರೈತರ ಮೆರವಣಿಗೆ; ಇಂದು ಮತ್ತೊಂದು ಸುತ್ತಿನ ಸಭೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

0
ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅನಾರ್ ಭಾರತದಲ್ಲಿ ನಾಪತ್ತೆಯಾದ ಎಂಟು ದಿನಗಳ ನಂತರ ಕೋಲ್ಕತ್ತಾ ಪೊಲೀಸರು ಅವರ ತುಂಡರಿಸಿದ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಕೋಲ್ಕತ್ತಾ ಪೊಲೀಸರು ಹತ್ಯೆಯು ಪೂರ್ವ ನಿಯೋಜಿತ ಎಂದು ಹೇಳಿಕೊಂಡಿದ್ದಾರೆ. ಅನಾರ್...