Homeಮುಖಪುಟಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬರುವ ಮೊದಲ ರಾಜ್ಯ ಪಶ್ಚಿಮ ಬಂಗಾಳವಾಗಲಿದೆ: ಬಿಜೆಪಿ

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬರುವ ಮೊದಲ ರಾಜ್ಯ ಪಶ್ಚಿಮ ಬಂಗಾಳವಾಗಲಿದೆ: ಬಿಜೆಪಿ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬರುವ ಮೊದಲ ರಾಜ್ಯ ಪಶ್ಚಿಮ ಬಂಗಾಳವಾಗಲಿದೆ. ಮಮತಾ ಬ್ಯಾನರ್ಜಿ ಈ ಕಾಯ್ದೆಯನ್ನು ಜಾರಿಗೊಳಿಸದಂತೆ ತಡೆಯಲು ಸಾಧ್ಯವಿಲ್ಲ ಎಂದು ಭಾರತೀಯ ಜನತಾ ಪಕ್ಷದ ಬಂಗಾಳ ಘಟಕದ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯ ಕಟು ವಿರೋಧಿಗಳಲ್ಲೊಬ್ಬರಾದ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿನ್ನೆ ತಾನೇ “ಯಾವುದೇ ಪರಿಸ್ಥಿತಿಯಲ್ಲಿಯೂ ಸಹ ನಮ್ಮ ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಗೆ ತರಲು ಎಂದು ಸವಾಲು ಹಾಕಿದ್ದರು.

ಅಷ್ಟು ಮಾತ್ರವಲ್ಲದೇ ಕೇರಳ, ಪಂಜಾಬ್‌, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಛತ್ತಿಸಘಡ ಸೇರಿದಂತೆ ಹಲವು ರಾಜ್ಯಗಳು ಕಾಯ್ದೆಯ ಜಾರಿಗೆ ನಕಾರ ಸೂಚಿಸಿದ್ದವು. ಆದರೆ ಕಾನೂನಿಯಲ್ಲಿ ಅದಕ್ಕೆ ಅವಕಾಶವಿಲ್ಲ ಎಂದು ಹಲವರು ಸ್ಪಷ್ಟಪಡಿಸಿದ್ದಾರೆ.

“ಈ ಮೊದಲು, 370 ನೇ ವಿಧಿಯನ್ನು ರದ್ದುಗೊಳಿಸುವುದನ್ನು ಮಮತಾ ಬ್ಯಾನರ್ಜಿ ವಿರೋಧಿಸಿದ್ದರು. ಆದರೆ ಕೇಂದ್ರ ಸರ್ಕಾರವು ಅದನ್ನು ಕಾರ್ಯಗತಗೊಳಿಸುವುದನ್ನು ಅವರಿಮದ ತಡೆಯಲಾಗಲಿಲ್ಲ. ಈ ಸಂದರ್ಭದಲ್ಲಿ, ರಾಜ್ಯದಲ್ಲಿ ಹೊಸ ಪೌರತ್ವ ಕಾಯ್ದೆಯನ್ನು ಕಾರ್ಯಗತಗೊಳಿಸುವ ಮೊದಲ ರಾಜ್ಯ ಬಂಗಾಳವಾಗಲಿದೆ, ಅದನ್ನು ಸಹ ತಡೆಯಲು ಅವರಿಂದ ಸಾಧ್ಯವಿಲ್ಲ ಎಂದು ಘೋಷ್‌ ಹೇಳಿದ್ದಾರೆ.

“ರಾಜ್ಯದಲ್ಲಿ ತನ್ನ ಮತ ಬ್ಯಾಂಕ್ ಕಳೆದುಕೊಳ್ಳುವ ಭೀತಿಯಿಂದಾಗಿ ಅವರು ಹೀಗೆ ಮಾತಾಡುತ್ತಿದ್ದಾರೆ ಎಂದು ಪ್ರಶ್ನಿಸಿರುವ ದಿಲೀಪ್‌ ಘೋಷ್‌, ನಾವು ಒಂದು ವಿಷಯವನ್ನು ಬಹಳ ಸ್ಪಷ್ಟಪಡಿಸುತ್ತೇನೆ. ಪೌರತ್ವ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು, ಬ್ಯಾನರ್ಜಿ ಅಥವಾ ಅವರ ಪಕ್ಷ ಅದನ್ನು ತಡೆಯಲು ಸಾಧ್ಯವಾಗುವುದಿಲ್ಲ ”ಎಂದು ಅವರು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಕೇವಲ ಅಕ್ರಮ ವಲಸಿಗರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳುತ್ತಾರೆ ಆದರೆ ಹಿಂದೂ ನಿರಾಶ್ರಿತರ ಬಗ್ಗೆ ಅಲ್ಲ ಎಂದು ಘೋಷ್ ಆರೋಪಿಸಿದ್ದಾರೆ.

“ಬಂಗಾಳದಲ್ಲಿ ನಡೆದ ಪ್ರತಿಭಟನೆಯ ಹಿಂದೆ ಇರುವ ಅಕ್ರಮ ವಲಸಿಗರ ವಿರುದ್ಧ ಮಮತಾ ಬ್ಯಾನರ್ಜಿ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ? ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅವರು ಜನಸಾಮಾನ್ಯರನ್ನು ಪ್ರಚೋದಿಸುತ್ತಿದ್ದಾರೆ. ನುಸುಳುಕೋರರ ಬಗ್ಗೆ ಆಕೆಗೆ ತುಂಬಾ ಕಾಳಜಿ ಇದ್ದರೆ, ಹಿಂದೂ ನಿರಾಶ್ರಿತರ ಬಗ್ಗೆ ಅವಳು ಯಾಕೆ ಏನನ್ನೂ ಹೇಳುತ್ತಿಲ್ಲ?” ಎಂದು ಬಿಜೆಪಿ ಕೈಲಾಶ್‌ ವಿಜಯವರ್ಗಿಯಾ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....