HomeಮುಖಪುಟBJP ವಿರುದ್ಧ ಕೈಜೋಡಿಸಲು ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

BJP ವಿರುದ್ಧ ಕೈಜೋಡಿಸಲು ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಭಾರತದ ಒಕ್ಕೂಟ ರಚನೆಯ ಮೇಲೆ ದಾಳಿ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ದೇಶದ ಒಕ್ಕೂಟ ರಚನೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿ ಬಿಜೆಪಿಯೇತರ ಆಡಳಿತವಿರುವ ಎಲ್ಲಾ ರಾಜ್ಯಗಳು ಮತ್ತು ಹಿರಿಯ ವಿರೋಧ ಪಕ್ಷದ ನಾಯಕರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಂಗಳವಾರ ಪತ್ರ ಬರೆದಿದ್ದಾರೆ. ಒಕ್ಕೂಟ ಸರ್ಕಾರವು ತನ್ನ ನಡೆಗಳಿಗೆ ಜವಾಬ್ದಾರರಾಗಿರಬೇಕು ಮತ್ತು ವಿರೋಧ ಪಕ್ಷಗಳು ಬಿಜೆಪಿ ವಿರುದ್ಧ ಕೈಜೋಡಿಸಬೇಕೆಂದು ಮಮತಾ ಬ್ಯಾನರ್ಜಿ ತನ್ನ ಪತ್ರದಲ್ಲಿ ಬರೆದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ದೇಶದ ನ್ಯಾಯಾಂಗದ ಕೆಲವು ವಿಭಾಗದ ಮೇಲೆ ಪ್ರಭಾವ ಬೀರುತ್ತಿದೆ ಎಂದು ಪತ್ರದಲ್ಲಿ ಮಮತಾ ಆರೋಪಿಸಿದ್ದಾರೆ. ಭಿನ್ನಾಭಿಪ್ರಾಯದ ಧ್ವನಿಗಳನ್ನು ಹತ್ತಿಕ್ಕುವುದನ್ನು ಎದುರಿಸುವುದು ಟಿಎಂಸಿ ಸೇರಿದಂತೆ ವಿರೋಧ ಪಕ್ಷಗಳ ಸಾಂವಿಧಾನಿಕ ಕರ್ತವ್ಯವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
ಭಾರತದ ಸಾಂಸ್ಥಿಕ ಪ್ರಜಾಪ್ರಭುತ್ವದ ಮೇಲೆ ಆಡಳಿತಾರೂಢ ಬಿಜೆಪಿಯ ದಾಳಿಯ ಬಗ್ಗೆ ನನಗೆ ತೀವ್ರ ಕಳವಳವಿದೆ ಎಂದು ಅವರು ಹೇಳಿದ್ದಾರೆ. ಕೇಂದ್ರೀಯ ತನಿಖಾ ಸಂಸ್ಥೆಗಳಾದ ಇಡಿ, ಸಿಬಿಐ, ಸೆಂಟ್ರಲ್ ವಿಜಿಲೆನ್ಸ್ ಕಮಿಷನ್ (ಸಿವಿಸಿ) ಮತ್ತು ಆದಾಯ ತೆರಿಗೆ ಇಲಾಖೆಗಳು ಒಕ್ಕೂಟ ಸರ್ಕಾರಕ್ಕೆ ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು, ಕಿರುಕುಳ ನೀಡಲು ಮತ್ತು ಮೂಲೆಗುಂಪು ಮಾಡಲು ಸಾಧನಗಳಾಗಿವೆ ಎಂದು ಮಮತಾ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಐದು ರಾಜ್ಯಗಳ ಚುನಾವಣಾ ಫಲಿತಾಂಶ ಹೇಳುವುದೇನು?

ಪ್ರತಿಪಕ್ಷಗಳು ಹೊರನಡೆದರೂ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಒಕ್ಕೂಟ ಸರ್ಕಾರವು ದೆಹಲಿ ವಿಶೇಷ ಪೊಲೀಸ್ (ತಿದ್ದುಪಡಿ) ಮಸೂದೆ-2021 ಮತ್ತು CVC (ತಿದ್ದುಪಡಿ) ಮಸೂದೆ-2021 ಯನ್ನು ಬಲವಂತವಾಗಿ ಅಂಗೀಕರಿಸಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹೊಸ ಕಾನೂನುಗಳು ಇಡಿ ಮತ್ತು ಸಿಬಿಐ ನಿರ್ದೇಶಕರ ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಲು ಸರ್ಕಾರಕ್ಕೆ ಅನುವು ಮಾಡಿಕೊಡುತ್ತದೆ, ಇದು ಸುಪ್ರೀಂ ಕೋರ್ಟ್ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದ್ದಾರೆ.

ಚುನಾವಣೆ ಸಮೀಪಿಸುತ್ತಿರುವಾಗ ಬಿಜೆಪಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ನಿಯೋಜಿಸುತ್ತದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ, ಪಕ್ಷವು ಈ ಏಜೆನ್ಸಿಗಳ ಬೆಂಬಲವನ್ನು ಪಡೆದು, ಅವರ ಪೊಳ್ಳು ಆಡಳಿತವನ್ನು ಮರೆಮಾಚುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ನ್ಯಾಯಾಂಗದ ನಿರ್ದೇಶನಗಳನ್ನು ಧಿಕ್ಕರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಪಕ್ಷಪಾತದ ರಾಜಕೀಯ ಹಸ್ತಕ್ಷೇಪಗಳಿಂದಾಗಿ ನಾಗರಿಕರು ತಮಗೆ ದೊರೆತ ನ್ಯಾಯವನ್ನು ಪಡೆಯುತ್ತಿಲ್ಲ ಮತ್ತು ಇದು ಪ್ರಜಾಪ್ರಭುತ್ವದಲ್ಲಿ ಅಪಾಯಕಾರಿ ಪ್ರವೃತ್ತಿಯಾಗಿದೆ ಎಂದು ಅವರು ಪತ್ರದಲ್ಲಿ ಎಚ್ಚರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...