Homeಮುಖಪುಟಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿ ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟ್ವೀಟ್ ಮಾಡಿದ್ದಾರೆ.

“ಕೇಂದ್ರ ಸಚಿವಾಲಯವು ಭಾರತದಲ್ಲಿನ ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಯ ಎಲ್ಲಾ ಬ್ಯಾಂಕ್ ಖಾತೆಗಳನ್ನು ಕ್ರಿಸ್‌ಮಸ್‌ನಲ್ಲಿ ಸ್ಥಗಿತಗೊಳಿಸಿದೆ ಎಂದು ಕೇಳಿ ಆಘಾತವಾಯಿತು!” ಎಂದು ಟ್ವೀಟ್‌ ಮಾಡಿರುವ ಅವರು, “ಕಾನೂನು ಅತ್ಯುನ್ನತವಾಗಿದ್ದರೂ, ಮಾನವೀಯ ಪ್ರಯತ್ನಗಳಲ್ಲಿ ರಾಜಿ ಮಾಡಿಕೊಳ್ಳಬಾರದು” ಎಂದು ತಿಳಿಸಿದ್ದಾರೆ.

ಕಲ್ಕತ್ತಾದ ಆರ್ಚ್‌ಡಯಾಸಿಸ್‌ನ ಫಾದರ್ ಡೊಮಿನಿಕ್ ಗೋಮ್ಸ್ ಅವರು ಹೇಳಿಕೆ ನೀಡಿದ್ದು, “ಬಡವರಿಗೆ ಕ್ರೂರ ಕ್ರಿಸ್ಮಸ್ ಉಡುಗೊರೆ ಇದು” ಎಂದು ಹೇಳಿದ್ದಾರೆ.

ಸಂಸ್ಥೆಯ ಚಟುವಟಿಕೆಗಳ ಫಲಾನುಭವಿಗಳು ಸೇರಿದಂತೆ 22,000 ಜನರ ಮೇಲೆ ಸರ್ಕಾರದ ನಿರ್ಧಾರ ಪರಿಣಾಮ ಬೀರುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ಮಿಷನರೀಸ್ ಆಫ್ ಚಾರಿಟಿ ಹೇಳಿಕೆ ನೀಡಿದ್ದು, “ಕ್ರಿಶ್ಚಿಯನ್ ಸಮುದಾಯ ಮತ್ತು ಅವರ ಸಾಮಾಜಿಕ ಪ್ರಭಾವದ ಮೇಲಿನ ಈ ಇತ್ತೀಚಿನ ದಾಳಿಯು ಭಾರತದ ಬಡ ಬಡವರ ಮೇಲಿನ ದಾಳಿಗಿಂತ ಹೆಚ್ಚು ಭೀಕರವಾಗಿದೆ” ಎಂದು ಹೇಳಿದೆ.

“ಕ್ರಿಶ್ಚಿಯನ್ ಸಂಘಟನೆಗಳು ಅನ್ಯಧರ್ಮಿಯರನ್ನು ಮತಾಂತರ ಮಾಡುತ್ತವೆ ಎಂದು ಆರೋಪಿಸಿ ಇಂತಹ ಘಟನೆಗಳನ್ನು ಸಮರ್ಥಿಸಿಕೊಳ್ಳಲಾಗುತ್ತದೆ. ಈ ಆರೋಪವು ಸುಳ್ಳಾಗಿದೆ. ಮತಾಂತರ ನಿಜವಾಗಿದ್ದರೆ, ಪ್ರಸ್ತುತ ಭಾರತದಲ್ಲಿ ಶೇ. 2.3ಕ್ಕಿಂತ ಹೆಚ್ಚು ಕ್ರಿಶ್ಚಿಯನ್ನರು ಇರುತ್ತಿದ್ದರು” ಎಂದು ತಿಳಿಸಿದ್ದಾರೆ.

ಗುಜರಾತ್‌ನ ವಡೋದರಾ ನಗರದಲ್ಲಿ ಬಾಲಕಿಯರ ಚಾರಿಟಿ ಹೋಮ್‌ನಲ್ಲಿ ಬಲವಂತದ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಈ ತಿಂಗಳ ಆರಂಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಹುಡುಗಿಯರಿಗೆ ಬೈಬಲ್ ಓದಲು ಹೇಳಲಾಗುತ್ತಿದೆ. ಇತರ ಸಮುದಾಯಗಳಿಗೆ ಸೇರಿದವರ ಕೆಲವು ವಿವಾಹಗಳನ್ನು ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆಸಲಾಗುತ್ತಿದೆ ಎಂಬ ಆರೋಪಗಳನ್ನು ಪೊಲೀಸರು ಮಾಡಿದ್ದರು. ಆದರೆ, ಇನ್‌ಸ್ಟಿಟ್ಯೂಟ್‌ನಲ್ಲಿ ಕೆಲಸ ಮಾಡುತ್ತಿರುವ ಸನ್ಯಾಸಿನಿಯೊಬ್ಬರು ಆರೋಪಳನ್ನು ಅಲ್ಲಗಳೆದಿದ್ದರು.

ಸ್ಥಗಿತ ಮಾಡಿಲ್ಲ: ಗೃಹ ಸಚಿವಾಲಯ ಸ್ಪಷ್ಟನೆ

“ಮಿಷನರೀಸ್ ಆಫ್ ಚಾರಿಟಿಯ ಯಾವುದೇ ಖಾತೆಗಳನ್ನು ಸ್ಥಗಿತ ಮಾಡಿಲ್ಲ. ಮಿಷನರೀಸ್ ಆಫ್ ಚಾರಿಟಿ ಸ್ವತಃ ತನ್ನ ಖಾತೆಗಳನ್ನು ಸ್ಥಗಿತ ಮಾಡಲು ಎಸ್‌ಬಿಐಗೆ ವಿನಂತಿಯನ್ನು ಕಳುಹಿಸಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ” ಎಂದು ಹೇಳಿಕೆ ಗೃಹ ಸಚಿವಾಲಯ ಹೇಳಿದೆ.

“ಮಿಷನರೀಸ್ ಆಫ್ ಚಾರಿಟಿಯ ನವೀಕರಣ ಅರ್ಜಿಯನ್ನು ಅನುಮೋದಿಸಲಾಗಿಲ್ಲ. ಮಿಷನರೀಸ್ ಆಫ್ ಚಾರಿಟಿಯ ನೋಂದಣಿಯು ಡಿಸೆಂಬರ್ 31, 2021 ರವರೆಗೆ ಮಾನ್ಯವಾಗಿದೆ” ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.


ಇದನ್ನೂ ಓದಿರಿ: ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...