Homeಮುಖಪುಟಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣಾ ಕಣ ರಂಗೇರಿದ್ದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇತರ ಬಿಜೆಪಿ ನಾಯಕರು ಚುನಾವಣಾ ಪ್ರಚಾರಕ್ಕಾಗಿ ಬಂಗಾಳ ಪ್ರವಾಸ ಕೈಗೊಂಡಿದ್ದಾರೆ ಎಂದು ಪ್ರತಿಪಾದಿಸಿದ್ದು, ಅವರನ್ನು “ದುರ್ಯೋಧನ ಮತ್ತು ದುಶ್ಯಾಶನ” ಎಂದು ಉಲ್ಲೇಖಿಸಿದ್ದಾರೆ. ತನ್ನ ಮಾಜಿ ಆಪ್ತ, ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಸುವೆಂದು ಅಧಿಕಾರಿಯನ್ನು “ಮಿರ್ ಜಾಫರ್” ಎಂದು ಕರೆದಿದ್ದಾರೆ.

“ಬಿಜೆಪಿಗೆ ವಿದಾಯ ಹೇಳಿ, ನಮಗೆ ಬಿಜೆಪಿ ಬೇಡ. ಮೋದಿಯವರ ಮುಖವನ್ನು ನೋಡಲು ನಾವು ಬಯಸುವುದಿಲ್ಲ. ಗಲಭೆಗಳು, ಲೂಟಿಕೋರರು, ದುರ್ಯೋಧನ, ದುಶ್ಯಾಶನ… ಮಿರ್ ಜಾಫರ್ ನಮಗೆ ಬೇಡ. ಮಾರ್ಚ್ 27 ರಂದು ‘ಖೇಲಾ ಹೊಬೆ’ (ಆಟ ಚಾಲೂ), ಬಿಜೆಪಿಯನ್ನು ಬೌಲ್ಡ್‌ ಮಾಡಬೇಕಾಗಿದೆ” ಎಂದು ಮಿಡ್ನಾಪೊರ್‌‌ನಲ್ಲಿ ಜರುಗಿದ ರ್‍ಯಾಲಿಯಲ್ಲಿ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

ತಾನು ಪೂರ್ಣವಾಗಿ ನಂಬಿದ್ದ ಸುವೆಂದು ತನಗೆ ದ್ರೋಹ ಎಸಗಿದರು ಎಂದು ಮಮತಾ ಬ್ಯಾನರ್ಜಿ ಡಿಸೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾದ ತನ್ನ ಮಾಜಿ ಆಪ್ತ ಸುವೆದು ಅಧಿಕಾರಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗುರುವಾರದಂದು ಪುರುಲಿಯಾದಲ್ಲಿ ಪ್ರಚಾರ ಮಾಡಿದ್ದ ಪ್ರಧಾನಿ ವಿರುದ್ದ ದಾಳಿ ಮಾಡಿದ ಮಮತಾ ಬ್ಯಾನರ್ಜಿ, ತನ್ನ ಘೋಷಣೆಯಾದ “ಖೇಲಾ ಹೊಬೆ” ಯನ್ನು ತನ್ನ ವಿರುದ್ದವೆ ಬಳಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ಪ್ರಧಾನಿಯನ್ನು ಕಾಪಿ ಕ್ಯಾಟ್ ಎಂದು ಕರೆದ್ದಾರೆ.

“ಮೋದಿ ಟೆಲಿಪ್ರೊಂಪ್ಟರ್ ಬಳಸಿ ‘ಕೆಮನ್ ಆಚೊ ಬಾಂಗ್ಲಾ’ (ಹೇಗಿದ್ದಿ ಬಂಗಾಳ) ಎಂದು ಹೇಳುತ್ತಾರೆ, ನಾವು ‘ಬಾಂಗ್ಲಾ ಭಾಲೋ ಆಚೆ’ (ಬಂಗಾಳ ತುಂಬಾ ಚೆನ್ನಾಗಿದೆ) ಎಂದು ಹೇಳುತ್ತೇವೆ. ‘ಪೊರಿಬೋರ್ತನ್’ ನನ್ನ ಘೋಷಣೆಯಾಗಿದೆ. ಕಾಪಿಕ್ಯಾಟ್, ನನ್ನ ಘೋಷಣೆಯನ್ನು ನೀವು ಏಕೆ ಕದಿಯುತ್ತೀರಿ? ಎಂದು ಅವರು ಪ್ರಧಾನಿಯ ವಿರುದ್ದ ಹರಿಹಾಯ್ದಿದ್ದಾರೆ.

ಮಾರ್ಚ್ 27 ರಿಂದ ಪಶ್ಚಿಮ ಬಂಗಾಳದಲ್ಲಿ ಎಂಟು ಸುತ್ತಿನ ಮತದಾನ ಪ್ರಾರಂಭವಾಗಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ನಾಳೆ ಶಿವಮೊಗ್ಗದಲ್ಲಿ ‌ದಕ್ಷಿಣ ಭಾರತದ ಮೊದಲ ಐತಿಹಾಸಿಕ ರೈತ ಮಹಾಪಂಚಾಯತ್; ಸಿದ್ದತೆ ಹೇಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...