Homeಮುಖಪುಟಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

- Advertisement -
- Advertisement -

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು ‘ಬಿಜೆಪಿ ಕೇಡರ್’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ ‘ನಬನ್ನಾ’ ಮತ್ತು ರಾಜ್ಯಪಾಲರ ನಿವಾಸ ‘ಲೋಕ ಭವನ’ದ ನಡುವೆ ಸಂಘರ್ಷ ತೀವ್ರಗೊಳ್ಳುವ ಮುನ್ಸೂಚನೆ ನೀಡಿದ್ದಾರೆ.

ಮಾರ್ಚ್ 5, 2026ರಂದು ಸಿ.ವಿ ಆನಂದ್ ಬೋಸ್ ಅವರ ಹಠಾತ್ ರಾಜೀನಾಮೆಯ ನಂತರ, ಆರ್.ಎನ್ ರವಿ ಅವರನ್ನು ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಈ ನೇಮಕಾತಿಯನ್ನು ವಿರೋಧಿಸಿರುವ ಸಿಎಂ ಮಮತಾ ಬ್ಯಾನರ್ಜಿ, ರಾಜ್ಯ ಸರ್ಕಾರದೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ಕೈಗೊಂಡ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಸುಮಾರು 64 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದನ್ನು ವಿರೋಧಿಸಿ ಕೋಲ್ಕತ್ತಾದ ಎಸ್ಪ್ಲೇನೇಡ್ ಮೆಟ್ರೋ ಚಾನೆಲ್‌ನಲ್ಲಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹದ ಎರಡನೇ ದಿನವಾದ ಶನಿವಾರ ಟಿಎಂಸಿ ಬೆಂಬಲಿಗರನ್ನು ಉದ್ದೇಶಿಸಿ ಮಮತಾ ಬ್ಯಾನರ್ಜಿ ಮಾತನಾಡಿದರು.

ರಾಜ್ಯಪಾಲರಾಗಿದ್ದ ಸಿ. ವಿ. ಆನಂದ್ ಬೋಸ್ ಅವರ ಹಠಾತ್ ರಾಜೀನಾಮೆಯು, ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಹೇರಿದ ಒತ್ತಡದ ಫಲಿತಾಂಶವಾಗಿದೆ ಎಂದು ಮಮತಾ ಬ್ಯಾನರ್ಜಿ ತಮ್ಮ ಭಾಷಣದಲ್ಲಿ ಆರೋಪಿಸಿದ್ದಾರೆ.

ಏಪ್ರಿಲ್‌ನಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಕೇಂದ್ರ ಸರ್ಕಾರ ‘ಲೋಕ ಭವನ’ವನ್ನು (ರಾಜಭವನ) ರಾಜಕೀಯ ಕೇಂದ್ರವನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

“ಸಿ.ವಿ ಆನಂದ್ ಬೋಸ್ ಅವರನ್ನು ಹೇಗೆ ತೆಗೆದು ಹಾಕಲಾಯಿತು ಎಂಬುವುದು ನಿಮಗೆ ಗೊತ್ತಾ? ನನಗೆ ಎಲ್ಲವೂ ಗೊತ್ತು. ಅವರು ಲೋಕಭವನದಿಂದ ಹಣ ಹಂಚಲು ಬಯಸಿದ್ದಾರೆ. ಅವರು ಲೋಕಭವನವನ್ನು ಬಿಜೆಪಿ ಪಕ್ಷದ ಕಚೇರಿಯನ್ನಾಗಿ ಪರಿವರ್ತಿಸಲು ಬಯಸಿದ್ದಾರೆ. ಆದರೆ ಎಲ್ಲರೂ ದೆಹಲಿಯ ಇಂತಹ ಹುಚ್ಚಾಟಗಳನ್ನು ಒಪ್ಪದಿರಬಹುದು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಹೊಸ ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ನೆನಪಿಡಿ ಬಂಗಾಳ ಟಫ್ ಟರ್ಫ್” ಎಂದು ಗುಡುಗಿದ್ದಾರೆ.

ತಮಿಳುನಾಡು ರಾಜ್ಯಪಾಲರಾಗಿಯೂ ಇರುವ ಆರ್.ಎನ್. ರವಿ ಅವರ ಉದಾಹರಣೆ ನೀಡಿದ ಮಮತಾ ಬ್ಯಾನರ್ಜಿ, “ಅವರು ಅಲ್ಲಿನ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೂ ತೊಂದರೆ ಕೊಟ್ಟಿದ್ದಾರೆ. ಅವರೊಬ್ಬ ಬಿಜೆಪಿಯ ಕೇಡರ್. ಆ ಪಕ್ಷ ನಡೆಸುವ ಸಭೆಗಳಲ್ಲಿ ಭಾಗವಹಿಸಿದವರಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ರವಿ ಅವರು ಬಿಹಾರ ಕೇಡರ್‌ನ 1976ರ ಬ್ಯಾಂಚ್‌ನ ನಿವೃತ್ತ ಐಪಿಎಸ್ ಅಧಿಕಾರಿಯಾಗಿದ್ದು, ತಮ್ಮ ವೃತ್ತಿಜೀವನದಲ್ಲಿ ಕೇಂದ್ರ ಗುಪ್ತಚರ ದಳ ಮತ್ತು ಕೇಂದ್ರೀಯ ತನಿಖಾ ದಳದಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...