Homeಮುಖಪುಟಪ್ರತಿಭಟನಾ ನಿರತ ವೈದ್ಯರ ಬೇಡಿಕೆಗೆ ಮಣಿದ ಮಮತಾ ಸರ್ಕಾರ!

ಪ್ರತಿಭಟನಾ ನಿರತ ವೈದ್ಯರ ಬೇಡಿಕೆಗೆ ಮಣಿದ ಮಮತಾ ಸರ್ಕಾರ!

- Advertisement -
- Advertisement -

ಆರ್‌ಜಿ ಕರ್ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಅವರನ್ನು ಬದಲಿಸಿ ಹಿರಿಯ ಐಪಿಎಸ್ ಅಧಿಕಾರಿ ಮನೋಜ್ ಕುಮಾರ್ ವರ್ಮಾ ಅವರನ್ನು ನೇಮಿಸಿದೆ. ಈ ಮೂಲಕ ಕೊಲ್ಕತ್ತಾ ಅತ್ಯಾವಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಜಯಸಿಕ್ಕಿದೆ.ಪ್ರತಿಭಟನಾ ನಿರತ ವೈದ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ನಿರ್ವಹಣೆಯ ಬಗ್ಗೆ ತೀವ್ರ ಟೀಕೆಗೆ ಒಳಗಾದ ಗೋಯಲ್ ಅವರನ್ನು ಪದಚ್ಯುತಗೊಳಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ರಾತ್ರಿ ಧರಣಿ ನಿರತ ವೈದ್ಯರೊಂದಿಗೆ ಭೇಟಿಯಾದ ನಂತರ ಪ್ರಕಟಿಸಿದರು.

1994 ರ ಬ್ಯಾಚ್‌ನ ಗೋಯಲ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್‌ನ ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್) ಎಡಿಜಿ ಮತ್ತು ಐಜಿಪಿಯನ್ನಾಗಿ ಮಾಡಲಾಯಿತು. 1998 ರ ಬ್ಯಾಚ್‌ನ ಅಧಿಕಾರಿ ವರ್ಮಾ ಅವರು ತಮ್ಮ ಕೊನೆಯ ನಿಯೋಜನೆಯಲ್ಲಿ ಎಡಿಜಿ ಮತ್ತು ಐಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಆಗಿದ್ದರು. 1995 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಜಾವೇದ್ ಶಮೀಮ್ ಅವರನ್ನು ಎಡಿಜಿ ಮತ್ತು ಐಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸ್ಥಾನಕ್ಕೆ ನೇಮಿಸಲಾಗಿದೆ.

ಇದನ್ನೂಓದಿ: ಅಕ್ಟೋಬರ್ 1 ರವರೆಗೆ ದೇಶದಾದ್ಯಂತ ಬುಲ್ಡೋಜರ್ ದಾಳಿ ನಿಲ್ಲಿಸಿ: ಸುಪ್ರೀಂಕೋರ್ಟ್ ಆದೇಶ

ಅಲ್ಲದೆ, ಸರ್ಕಾರವು ಡಾ.ಕೌಸ್ತವ್ ನಾಯಕ್ ಮತ್ತು ಡಾ.ದೇಬಾಶಿಶ್ ಹಾಲ್ಡರ್ ಅವರನ್ನು ಕ್ರಮವಾಗಿ ವೈದ್ಯಕೀಯ ಶಿಕ್ಷಣದ ನಿರ್ದೇಶಕ (DME) ಮತ್ತು ಆರೋಗ್ಯ ಸೇವೆಗಳ ನಿರ್ದೇಶಕ (DHS) ಸ್ಥಾನದಿಂದ ತೆಗೆದುಹಾಕಿದೆ ಎಂದು ಆರೋಗ್ಯ ಇಲಾಖೆ ಆದೇಶ ತಿಳಿಸಿದೆ. ಡಾ ಸ್ವಪನ್ ಸೊರೆನ್ ಅವರನ್ನು ಆರೋಗ್ಯ ಸೇವೆಗಳ ಹೊಸ ಪ್ರಭಾರಿ ನಿರ್ದೇಶಕರಾಗಿ ಮತ್ತು ವೈದ್ಯಕೀಯ ಶಿಕ್ಷಣದ ವಿಶೇಷ ಕರ್ತವ್ಯದ ಅಧಿಕಾರಿ ಡಾ ಸುಪರ್ಣಾ ದತ್ತಾ ಅವರನ್ನು ನೇಮಿಸಲಾಗಿದೆ ಎಂದು ಅದು ಹೇಳಿದೆ.

ನಾಯಕ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ನಿರ್ದೇಶಕರನ್ನಾಗಿ ನೇಮಿಸಲಾಯಿತು ಮತ್ತು ಹಾಲ್ದರ್ ಅವರನ್ನು ಸ್ವಾಸ್ಥ್ಯ ಭವನದಲ್ಲಿ ಸಾರ್ವಜನಿಕ ಆರೋಗ್ಯದ ವಿಶೇಷ ಕರ್ತವ್ಯದ ಅಧಿಕಾರಿಯಾಗಿ ನೇಮಿಸಲಾಯಿತು.

ಕಳೆದ 39 ದಿನಗಳಿಂದ ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಪ್ರಶಿಕ್ಷಣಾರ್ಥಿ ವೈದ್ಯೆಯ ಅತ್ಯಾಚಾರ ಕೊಲೆಯನ್ನು ಪ್ರತಿಭಟಿಸಿ ಕಿರಿಯ ವೈದ್ಯರು ‘ಕೆಲಸ ನಿಲ್ಲಿಸಿ’ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಆರೋಗ್ಯ ಕ್ಷೇತ್ರದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಆರೋಗ್ಯ ಕಾರ್ಯದರ್ಶಿ, ಆರೋಗ್ಯ ಸೇವೆಗಳ ನಿರ್ದೇಶಕರು, ವೈದ್ಯಕೀಯ ಶಿಕ್ಷಣ ನಿರ್ದೇಶಕರು ಮತ್ತು ನಿರ್ದೇಶಕರನ್ನು ವಜಾಗೊಳಿಸುವಂತೆ ವೈದ್ಯರು ಒತ್ತಾಯಿಸಿದ್ದರು.ಪ್ರತಿಭಟನಾ ನಿರತ ವೈದ್ಯ

ವಿಡಿಯೊ ನೋಡಿ: ಗದ್ದರ್ ಪ್ರಥಮ ಪರಿನಿಬ್ಬಾಣ: ಗದ್ದರ್‌ ಜೊತೆಗಿನ ಒಡನಾಟದ ನೆನಪು ಹಂಚಿಕೊಂಡ ಪಿಚ್ಚಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...