Homeಮುಖಪುಟಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ ಚುನಾವಣಾ ಆಯೋಗಕ್ಕೆ ತಿಳಿಸಿದೆ.

ಫೆಬ್ರವರಿ 4ರಂದು ಸುಪ್ರೀಂ ಕೋರ್ಟ್‌ನಲ್ಲಿ ಎಸ್‌ಐಆರ್ ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ವೇಳೆಯೂ ಮಮತಾ ಬ್ಯಾನರ್ಜಿ ಮೈಕ್ರೋ ಅಬ್ಸರ್ವರ್ಸ್ ಕುರಿತು ಪ್ರಮುಖವಾಗಿ ಉಲ್ಲೇಖಿಸಿದ್ದರು. ಕೇಂದ್ರ ಸರ್ಕಾರದ ಉದ್ಯೋಗಿಗಳನ್ನೇ ಮೈಕ್ರೋ ಅಬ್ಸರ್ವರ್ಸ್‌ಗಳಾಗಿ ಚುನಾವಣಾ ಆಯೋಗ ನೇಮಿಸಿಕೊಂಡಿದೆ. ಇವರು ಬೇಕಾಬಿಟ್ಟು ಮತದಾರರ ಪಟ್ಟಿಯಿಂದ ಜನರ ಹೆಸರುಗಳನ್ನು ತೆಗೆದು ಹಾಕುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು.

ಚುನಾವಣಾ ಆಯೋಗದ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಎಸ್‌ಐಆರ್ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇವಲ 80 ಗ್ರೇಡ್ 2 ಅಧಿಕಾರಿಗಳನ್ನು (ಉದಾಹರಣೆಗೆ ಎಸ್‌ಡಿಎಂಗಳು) ಮಾತ್ರ ಒದಗಿಸಿದೆ ಎಂದಿದ್ದರು.

ಅಂಗನವಾಡಿ, ಆಶಾ ಸೇರಿದಂತೆ ಕೆಲ ಹಂತದ ಸಿಬ್ಬಂದಿಯನ್ನು ಮಮತಾ ಸರ್ಕಾರ ಒದಗಿಸಿದೆ ಎಂದು ದೂರಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಮಮತಾ ಬ್ಯಾನರ್ಜಿ, “ಚುನಾವಣಾ ಆಯೋಗ ಏನು ಕೇಳಿದೆಯೋ, ಅದನ್ನು ನಾವು ಒದಗಿಸಿದ್ದೇವೆ” ಎಂದಿದ್ದರು.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್. ವಿ ಅಂಜಾರಿಯಾ ಅವರನ್ನೊಳಗೊಂಡ ನ್ಯಾಯಪೀಠವು ಸೋಮವಾರ (ಫೆ.9) ಮಮತಾ ಬ್ಯಾನರ್ಜಿ ಮತ್ತು ಇತರರು ಎಸ್‌ಐಆರ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಮುಂದುವರಿಸಲಿದೆ.

ಫೆ.4ರಂದು ತನ್ನ ಅರ್ಜಿಯ ಪರ ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಖುದ್ದು ವಾದ ಮಂಡಿಸಿದ್ದರು. ಈ ಮೂಲಕ ಭಾರತ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಹಾಲಿ ಮುಖ್ಯಮಂತ್ರಿಯೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಖ್ಯಾತಿಗೆ ಮಮತಾ ಬ್ಯಾನರ್ಜಿ ಪಾತ್ರರಾಗಿದ್ದಾರೆ. ಸೋಮವಾರ ಅವರು ಮತ್ತೆ ವಾದ ಮಂಡಿಸುವ ಸಾಧ್ಯತೆ ಇದೆ.

ಅದಕ್ಕು ಮುನ್ನ 8 ಸಾವಿರಕ್ಕೂ ಹೆಚ್ಚು ರಾಜ್ಯ ಸರ್ಕಾರದ ಸಿಬ್ಬಂದಿಯನ್ನು ಎಸ್‌ಐಆರ್ ಪ್ರಕ್ರಿಯೆಗೆ ಒದಗಿಸುವುದಾಗಿ ಮಮತಾ ಸರ್ಕಾರ ಚುನಾವಣಾ ಆಯೋಗಕ್ಕೆ ತಿಳಿಸಿದೆ. ಈ ಮೂಲಕ ಕೇಂದ್ರದ ಅನತಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಆರೋಪ ಹೊತ್ತಿರುವ ಮೈಕ್ರೋ ಅಬ್ಸರ್ವರ್ಸ್‌ಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಉಳಿಸಲು ಮಧ್ಯ ಪ್ರವೇಶಿಸುವಂತೆ ಫೆ.4ರಂದು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ಗೆ ಕೋರಿಕೊಂಡಿದ್ದಾರೆ. ರಾಜ್ಯವನ್ನು ಗುರಿಯಾಗಿಸಲಾಗುತ್ತಿದೆ. ನಮ್ಮ ಜನರ ಮೇಲೆ ಚುನಾವಣಾ ಆಯೋಗ ‘ಬುಲ್ಡೋಝರ್’ ಪ್ರಹಾರ ನಡೆಸುತ್ತಿದೆ ಎಂದಿದ್ದಾರೆ. ಚುನಾವಣೆಯ ಹೊಸ್ತಿಲ್ಲಲ್ಲಿ ಇದ್ದರೂ ಬಿಜೆಪಿ ಆಡಳಿತ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

ಒಂದು ಹಂತದಲ್ಲಿ ಮಮತಾ ಬ್ಯಾನರ್ಜಿಯ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ನೈಜ ಮತದಾರರ ಹೆಸರು ಕೈಬಿಟ್ಟು ಹೋಗಬಾರದು ಎಂದಿದೆ.

ಕೇಂದ್ರ ಚುನಾವಣಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಆಧಿಕಾರಿಗೆ ನೋಟಿಸ್ ಜಾರಿ ಮಾಡಿರುವ ಸುಪ್ರೀಂ ಕೋರ್ಟ್, ಫೆ.9ರ ಒಳಗೆ ಉತ್ತರ ನೀಡುವಂತೆ ಸೂಚಿಸಿದೆ.

ಹೆಸರುಗಳ ಹೊಂದಾಣಿಕೆಯಾಗದ ಕಾಗುಣಿತ ಮುಂತಾದ ಸಣ್ಣಪುಟ್ಟ ವ್ಯತ್ಯಾಸಗಳ ಆಧಾರದ ಮೇಲೆ ನೋಟಿಸ್‌ಗಳನ್ನು ನೀಡುವಾಗ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಮತದಾರರ ಪಟ್ಟಿ ಅಧಿಕಾರಿಗಳು ಹೆಚ್ಚು ಸೂಕ್ಷ್ಮವಾಗಿರಲು ಸೂಚಿಸುವಂತೆಯೂ ಪೀಠವು ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...