HomeಮುಖಪುಟINDIA ಒಕ್ಕೂಟ: ದೀದಿ ಹೇಳಿಕೆ ಬಳಿಕವೂ ಪ್ರತಿಪಕ್ಷಗಳಲ್ಲಿದೆ 'ಮೈತ್ರಿ' ಆಶಾಭಾವನೆ?

INDIA ಒಕ್ಕೂಟ: ದೀದಿ ಹೇಳಿಕೆ ಬಳಿಕವೂ ಪ್ರತಿಪಕ್ಷಗಳಲ್ಲಿದೆ ‘ಮೈತ್ರಿ’ ಆಶಾಭಾವನೆ?

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಇದರ ಬೆನ್ನಲ್ಲಿ ಪಂಜಾಬ್‌ನಲ್ಲಿ ಎಎಪಿ ಕೂಡ ಏಕಾಂಗಿಯಾಗಿ ಕಣಕ್ಕಿಳಿಯಲಿದೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ. ಟಿಎಂಸಿ ನಾಯಕಿಯ ಹೇಳಿಕೆ ಬಳಿಕ ಕಾಂಗ್ರೆಸ್‌ ನಾಯಕರು ಮೈತ್ರಿಯ ಬಗ್ಗೆ ಆಶಾಭಾವನೆಯನ್ನು ವ್ಯಕ್ತಪಡಿಸಿದ್ದು, ಅಂತಿಮವಾಗಿ ಎರಡೂ ಪಕ್ಷಗಳ ರಾಷ್ಟ್ರೀಯ ನಾಯಕರು ಮಾತುಕತೆ ನಡೆಸುವ ಸಾಧ್ಯತೆ ಇದೆ. ಆದರೆ ಪಂಜಾಬ್‌ನಲ್ಲಿ ಎಎಪಿಯ ಘೋಷಣೆ ನಿರೀಕ್ಷಿತವೇ ಆಗಿದ್ದು, ಕಾಂಗ್ರೆಸ್‌ ಮತ್ತು ಎಎಪಿಯ ರಾಜ್ಯ ನಾಯಕತ್ವವು ಮೊದಲಿನಿಂದಲೇ ಪಂಜಾಬ್‌ನಲ್ಲಿ ಮೈತ್ರಿಗೆ ವಿರೋಧಿಸಿತ್ತು.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸುವ ಒಂದು ದಿನದ ಮೊದಲು ಮತ್ತು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಮಮತಾ ಬ್ಯಾನರ್ಜಿ ಜೊತೆ ಸಂಬಂಧ ಉತ್ತಮವಾಗಿದೆ ಎಂದು ಹೇಳಿಕೆ ಕೊಟ್ಟ ಒಂದು ದಿನದ ನಂತರ ಮಮತಾ ಏಕಾಂಗಿ ಸ್ಪರ್ಧೆ ಹೇಳಿಕೆ ಕೊಟ್ಟಿದ್ದರು. ಆದರೆ ಮಮತಾ-ಜಿ ಇಲ್ಲದೆ INDIA ನ್ನು ಊಹಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ ಮತ್ತು ವಿರೋಧ ಪಕ್ಷದ ಒಕ್ಕೂಟವು ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಒಂದಾಗಿ ಹೋರಾಡಲಿದೆ ಎಂದು ಹೇಳಿಕೊಂಡಿದೆ.

ನಾವು ಬಿಜೆಪಿಯನ್ನು ಸೋಲಿಸಲು ಬಯಸುತ್ತೇವೆ ಮತ್ತು ಬಿಜೆಪಿಯನ್ನು ಸೋಲಿಸಲು ನಾವು ಏನು ಬೇಕಾದರೂ ಮಾಡುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಮಮತಾ ಜಿ ಮತ್ತು ಟಿಎಂಸಿ ಭಾರತದ ಮೈತ್ರಿಯ ಅತ್ಯಂತ ಬಲವಾದ ಆಧಾರ ಸ್ತಂಭವಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅಸ್ಸಾಂನ ಬೊಂಗೈಗಾಂವ್‌ನಲ್ಲಿ ಮಾತನಾಡಿ, ಮಮತಾ ಜೀ ಇಲ್ಲದ INDIA ಮೈತ್ರಿಯನ್ನು ನಾವು ಊಹಿಸಲು ಸಾಧ್ಯವಿಲ್ಲ. INDIA ಮೈತ್ರಿಯಂತೆಯೇ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ, ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ನಾನು ಯಾವಾಗಲೂ ಹೇಳುತ್ತೇನೆ. ನಮ್ಮದು ಜಾತ್ಯತೀತ ಪಕ್ಷ ಮತ್ತು ಬಂಗಾಳದಲ್ಲಿ ನಾವು ಏಕಾಂಗಿಯಾಗಿ ಬಿಜೆಪಿಯನ್ನು ಸೋಲಿಸುತ್ತೇವೆ. ನಾನು ಅನೇಕ ಪ್ರಸ್ತಾಪಗಳನ್ನು ನೀಡಿದ್ದೇನೆ ಆದರೆ ಅವರು ಅವುಗಳನ್ನು ಮೊದಲಿನಿಂದಲೂ ತಿರಸ್ಕರಿಸಿದರು. ರಾಹುಲ್ ಗಾಂಧಿಯವರ ನ್ಯಾಯ ಯಾತ್ರೆಯು ಬಂಗಾಳದ ಮೂಲಕ ಹಾದುಹೋಗುವ ಬಗ್ಗೆ ತನಗೆ ತಿಳಿಸಲಾಗಿಲ್ಲ. ನಾನು ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದರೂ ಸೌಜನ್ಯಕ್ಕಾಗಿ ಪಶ್ಚಿಮ ಬಂಗಾಳಕ್ಕೆ ಬರುವುದಾಗಿ ಅವರು ನನಗೆ ತಿಳಿಸಿಲ್ಲ, ಹಾಗಾಗಿ ಬಂಗಾಳದ ಮಟ್ಟಿಗೆ ನನಗೆ ಯಾವುದೇ ಸಂಬಂಧವಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು. ಆದರೆ ಅಖಿಲ ಭಾರತ ಮಟ್ಟದಲ್ಲಿ ಏನು ಮಾಡಬೇಕೆಂದು ನಾವು ನಿರ್ಧರಿಸುತ್ತೇವೆ. ನಮ್ಮದು ಜಾತ್ಯತೀತ ಪಕ್ಷ ಎಂದು ಹೇಳಿದ್ದರು. ಇದರರ್ಥ ಮೈತ್ರಿಯಿಂದ ಸಂಪೂರ್ಣವಾಗಿ ಟಿಎಂಸಿ ಹೊರಗೆ ಬಂದಿಲ್ಲ ಎನ್ನುವುದು ಸ್ಪಷ್ಟವಾಗಿದೆ.

ಕಾಂಗ್ರೆಸ್ ನಾಯಕಿ ದೀಪಾ ದಾಸ್ಮುನ್ಸಿ ಹೈದರಾಬಾದ್‌ನಲ್ಲಿ ಮಮತಾ ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಆದರೆ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಮತ್ತು ಮಮತಾ-ವಿಮರ್ಶಕ ಅಧೀರ್ ರಂಜನ್ ಚೌಧರಿ ಅವರು ಕೇಂದ್ರ ನಾಯಕತ್ವದ ಅಂಗಳಕ್ಕೆ ಸೀಟು ಹಂಚಿಕೆ ಚೆಂಡನ್ನು ಎಸೆದಿದ್ದಾರೆ. ಕಾಂಗ್ರೆಸ್‌ನ ಉನ್ನತ ನಾಯಕರು ಶೀಘ್ರದಲ್ಲೇ ಮಮತಾ ಅವರನ್ನು ಸಂಪರ್ಕಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಪಂಜಾಬ್‌ ಸಿಎಂ ಭಗವಂತ್‌ ಮಾನ್‌, ಎಎಪಿ ಪಂಜಾಬ್‌ನಲ್ಲಿ ಯಾವುದೇ ಮೈತ್ರಿಯನ್ನು ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಎಎಪಿ ದೆಹಲಿಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ.

ಸೀಟು ಹಂಚಿಕೆಯ ಕಸರತ್ತಿನ ವಿಳಂಬ, ಅಸಮಂಜಸ ಬೇಡಿಕೆಗಳು ಮತ್ತು ಮುಖ್ಯಮಂತ್ರಿ ವಿರುದ್ಧ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿಯವರ ಹೇಳಿಕೆಗಳು ಮಮತಾ ಅವರು ಮೈತ್ರಿ ವಿರುದ್ಧ ಘೋಷಣೆಗೆ ಕಾರಣವಾಗಿದೆ ಎಂದು ಟಿಎಂಸಿ ಮೂಲಗಳು ತಿಳಿಸಿದೆ.

ಪಂಜಾಬ್‌ನಲ್ಲಿ ಎಎಪಿಯ ನಿಲುವು ಕಾಂಗ್ರೆಸ್‌ಗೆ ಆಶ್ಚರ್ಯ ತಂದಿಲ್ಲ. ಎರಡೂ ಪಕ್ಷಗಳ ರಾಜ್ಯ ಘಟಕಗಳು ರಾಜ್ಯದಲ್ಲಿ ಮೈತ್ರಿಯನ್ನು ವಿರೋಧಿಸಿದ್ದವು. ಖರ್ಗೆ ಮತ್ತು ರಾಹುಲ್ ಭೇಟಿ ವೇಳೆ ಸ್ವತಃ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಈ ಬಗ್ಗೆ ಸೂಚಿಸಿದ್ದರು. ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕತ್ವ ಎಎಪಿ ಜೊತೆಗೆ  ಪಂಜಾಬ್‌ನಲ್ಲಿ ಮೈತ್ರಿ ಬಗ್ಗೆ ಮಾತುಕತೆಗೆ ನಿರಾಕರಿಸಿತ್ತು. ಆದರೆ ದೆಹಲಿಯಲ್ಲಿ ಸೀಟು ಹಂಚಿಕೆಯನ್ನು ಚರ್ಚಿಸಲಾಗುವುದು ಎಂದು ಹೇಳಿತ್ತು.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...