Homeಮುಖಪುಟಇಂಡಿಯಾ ಮೈತ್ರಿಕೂಟವನ್ನು ಮಮತಾ ಬ್ಯಾನರ್ಜಿ ಮುನ್ನಡೆಸಲಿ : ಲಾಲು ಪ್ರಸಾದ್ ಯಾದವ್

ಇಂಡಿಯಾ ಮೈತ್ರಿಕೂಟವನ್ನು ಮಮತಾ ಬ್ಯಾನರ್ಜಿ ಮುನ್ನಡೆಸಲಿ : ಲಾಲು ಪ್ರಸಾದ್ ಯಾದವ್

- Advertisement -
- Advertisement -

ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಮುನ್ನಡೆಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರಿಗೆ ಅವಕಾಶ ನೀಡಬೇಕು ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮಂಗಳವಾರ (ಡಿ.10) ಹೇಳಿದ್ದಾರೆ.

ಬಿಜೆಪಿ-ವಿರೋಧಿ ಒಕ್ಕೂಟದ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಇಂಗಿತವನ್ನು ಮಮತಾ ಬ್ಯಾನರ್ಜಿ ವ್ಯಕ್ತಪಡಿಸಿದ ಬೆನ್ನಲ್ಲೇ ಲಾಲು ಪ್ರಸಾದ್ ಯಾದವ್ ಅವರ ಪರ ಬ್ಯಾಟ್ ಬೀಸಿದ್ದಾರೆ.

ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷವಾಗಿರುವ ಕಾಂಗ್ರೆಸ್ ಮಮತಾ ಬ್ಯಾರ್ಜಿಯವರನ್ನು ಒಕ್ಕೂಟದ ನಾಯಕಿ ಎಂದು ಒಪ್ಪಿಕೊಂಡರೆ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಲಾಲು ಪ್ರಸಾದ್ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ಸೇರಿದಂತೆ ಯಾವುದೇ ಹಿರಿಯ ನಾಯಕರು ಇಂಡಿಯಾ ಒಕ್ಕೂಟದ ನಾಯಕತ್ವ ವಹಿಸುವುದಾದರೆ ನಮ್ಮದೇನು ಅಭ್ಯಂತರ ಇಲ್ಲ. ಆದರೆ, ಒಮ್ಮತದ ಮೂಲಕ ನಿರ್ಧಾರಕ್ಕೆ ಬರಬೇಕು ಎಂದು ಈ ಹಿಂದೆ ಲಾಲು ಪ್ರಸಾದ್ ಯಾದವ್ ಅವರ ಮಗ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದರು.

ಡಿಸೆಂಬರ್ 6ರಂದು ಸಂದರ್ಶನವೊಂದರಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ ಇಂಡಿಯಾ ಒಕ್ಕೂಟದ ಕಾರ್ಯಾಚರಣೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ಅವಕಾಶ ನೀಡಿದರೆ ಒಕ್ಕೂಟದ ಜವಾಬ್ದಾರಿ ವಹಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಹುದ್ದೆಯ ಜೊತೆಗೆ ಪ್ರತಿಪಕ್ಷಗಳ ಒಕ್ಕೂಟವನ್ನು ಮುನ್ನಡೆಸುವ ಜವಬ್ದಾರಿಯನ್ನು ನಾನು ನಿಭಾಯಿಸಬಲ್ಲೆ ಎಂದಿದ್ದರು.

“ನಾನು ಇಂಡಿಯಾ ಒಕ್ಕೂಟ ರಚಿಸಿದ್ದೆ. ಅದನ್ನು ಮುನ್ನಡೆಸುವ ಜವಾಬ್ದಾರಿ ಈಗ ನಾಯಕತ್ವ ವಹಿಸಿರುವವರ ಮೇಲಿದೆ. ಅವರು ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಅಂದರೆ ಏನು ಮಾಡುವುದು? ನಾನು ಒಂದನ್ನು ಹೇಳಲು ಇಚ್ಚಿಸುತ್ತೇನೆ, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕಿದೆ” ಎಂದು ಬೆಂಗಾಲಿ ಸುದ್ದಿವಾಹಿನಿ ನ್ಯೂಸ್ 18 ಬಾಂಗ್ಲಾ ಜೊತೆಗಿನ ಸಂದರ್ಶನದಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದರು.

ಡಿಸೆಂಬರ್ 15 ರಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನಡೆಸಲು ಉದ್ದೇಶಿರುವ ರಾಜ್ಯವ್ಯಾಪಿ ಯಾತ್ರೆಯ ಕುರಿತು ಮಾತನಾಡಿರುವ ಲಾಲು ಪ್ರಸಾದ್ ಯಾದವ್ “ಅವರು ತಮ್ಮ ಕಣ್ಣುಗಳನ್ನು ರಿಫ್ರೆಶ್ ಮಾಡಲು ರಾಜ್ಯಾದ್ಯಂತ ಯಾತ್ರೆ ನಡೆಸುತ್ತಿದ್ದಾರೆ. ಆರ್‌ಜೆಡಿ ನೇತೃತ್ವದ ಸಮ್ಮಿಶ್ರ ಸರ್ಕಾರ 2025ರಲ್ಲಿ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ” ಎಂದಿದ್ದಾರೆ.

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಡಿಸೆಂಬರ್ 15 ರಿಂದ ರಾಜ್ಯಾದ್ಯಂತ ‘ಮಹಿಳಾ ಸಂವಾದ ಯಾತ್ರೆ’ ಎಂಬ ಹೆಸರಿನಲ್ಲಿ ಯಾತ್ರೆ ನಡೆಸಲಿದ್ದಾರೆ. ಈ ವೇಳೆ ಅವರು ರಾಜ್ಯ ಸರ್ಕಾರದ ಏಳು-ಪರಿಹಾರ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ ಮತ್ತು ಮಹಿಳೆಯರೊಂದಿಗೆ ಸಂವಾದದ ಮೂಲಕ ಜನರ ನಾಡಿಮಿಡಿತ ಅರಿಯಲಿದ್ದಾರೆ.

ಇದನ್ನೂ ಓದಿ : ಅದಾನಿ ಭ್ರಷ್ಟಾಚಾರ | ಕಪ್ಪು ಬ್ಯಾಗ್ ಹಿಡಿದು ಪ್ರತಿಭಟನೆ ನಡೆಸಿದ ವಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...