Homeಮುಖಪುಟಸಿಪಿಐ(ಎಂ) ಬೆನ್ನಲ್ಲೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ತಿರಸ್ಕರಿಸಿದ ಟಿಎಂಸಿ!

ಸಿಪಿಐ(ಎಂ) ಬೆನ್ನಲ್ಲೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ತಿರಸ್ಕರಿಸಿದ ಟಿಎಂಸಿ!

- Advertisement -
- Advertisement -

ಅಯೋಧ್ಯೆಯಲ್ಲಿನ ರಾಮಮಂದಿರದ ಉದ್ಘಾಟನೆ ಆಹ್ವಾನವನ್ನು ಸಿಪಿಐಎಂ ತಿರಸ್ಕರಿಸಿದ್ದ ಬೆನ್ನಲ್ಲೇ ಇದೀಗ ಟಿಎಂಸಿ ಕೂಡ ರಾಮಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿಕೊಂಡಿದೆ.

ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಥವಾ ಪಶ್ಚಿಮ ಬಂಗಾಳ ಸರ್ಕಾರ ಅಥವಾ ಪಕ್ಷದ ಯಾವುದೇ ಪ್ರತಿನಿಧಿಗಳು ಹಾಜರಾಗುವುದಿಲ್ಲ ಎಂದು ಟಿಎಂಸಿ ಮೂಲಗಳು ಹೇಳಿಕೊಂಡಿದೆ.

ಈ ಕುರಿತು ಟಿಎಂಸಿ ನಾಯಕರೋರ್ವರು ಹೇಳಿಕೆಯನ್ನು ನೀಡಿದ್ದು, ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆಗೆ ಮಮತಾ ಬ್ಯಾನರ್ಜಿ ಅಥವಾ ಟಿಎಂಸಿಯ ಯಾವುದೇ ಪ್ರತಿನಿಧಿಗಳು ಭಾಗವಹಿಸುತ್ತಾರಾ ಎಂಬ ಪ್ರಶ್ನೆ ಇದೆ. ನಾವು ಯಾರೂ ಭಾಗವಹಿಸುವುದಿಲ್ಲ. ಧರ್ಮದೊಂದಿಗೆ ರಾಜಕೀಯ ಬೆರೆಸುವುದರಲ್ಲಿ ನಮಗೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.

ಜ.22ರಂದು ರಾಮಮಂದಿರ ಉದ್ಘಾಟನೆಯಾಗಲಿದ್ದು, ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ, ದಲೈ ಲಾಮಾ, ನಟರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್ ಮತ್ತು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ ಸೇರಿದಂತೆ ಹಲವು ಪ್ರಮುಖ ನಾಯಕರು, ಉದ್ಯಮಿಗಳಿಗೆ ಆಹ್ವಾನವನ್ನು ನೀಡಲಾಗಿದೆ. 4,000 ಸಂತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 2,200ಕ್ಕೂ ಅಧಿಕ ಅತಿಥಿಗಳು ಭಾಗವಹಿಸಲಿದ್ದಾರೆ.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನೀಡಿದ ಆಹ್ವಾನವನ್ನು ತಿರಸ್ಕರಿಸಿದ್ದರು. ಪಕ್ಷವು ತಮ್ಮ ಆಯ್ಕೆಯ ಯಾವುದೇ ಧರ್ಮವನ್ನು ನಂಬುವ ಮತ್ತು ಆಚರಿಸುವ ಪ್ರತಿಯೊಬ್ಬರ ಹಕ್ಕನ್ನು ಗೌರವಿಸುತ್ತದೆ ಎಂದು  ಹೇಳಿದ್ದರು.

ಸಿಪಿಐ(ಎಂ) ನೀತಿಯು, ಧಾರ್ಮಿಕ ಭಾವನೆಗಳನ್ನು ಗೌರವಿಸುವುದು ಮತ್ತು ಪ್ರತಿಯೊಬ್ಬ ವ್ಯಕ್ತಿಗೆ ಅವರ ನಂಬಿಕೆಯನ್ನು ಆಚರಿಸುವ ಹಕ್ಕನ್ನು ಕಾಪಾಡುವ ಗುರಿಯನ್ನು ಹೊಂದಿದೆ. ಧರ್ಮವು ವೈಯಕ್ತಿಕ ಆಯ್ಕೆಯಾಗಿದೆ ಮತ್ತು ಅದನ್ನು ರಾಜಕೀಯ ಲಾಭದ ಸಾಧನವಾಗಿ ಪರಿವರ್ತಿಸಬಾರದು ಎಂದು ಪಕ್ಷವು ನಂಬುತ್ತದೆ. ಆದ್ದರಿಂದ ನಾವು ಈ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ. ಬಿಜೆಪಿ ಮತ್ತು ಆರೆಸ್ಸೆಸ್ ಧಾರ್ಮಿಕ ಕಾರ್ಯಕ್ರಮವನ್ನು ಹೇಗೆ ಸರಕಾರ ಪ್ರಾಯೋಜಿತ ಕಾರ್ಯಕ್ರಮವಾಗಿ  ಪರಿವರ್ತಿಸಿದೆ ಎಂಬುದನ್ನು ಪ್ರಕಟಣೆಯಲ್ಲಿ ಹೇಳಲಾಗಿತ್ತು. ಬಿಜೆಪಿ ಮತ್ತು ಆರೆಸ್ಸೆಸ್‌ ಈ ಧಾರ್ಮಿಕ ಸಮಾರಂಭವನ್ನು ಪ್ರಧಾನಮಂತ್ರಿ, ಯುಪಿ ಮುಖ್ಯಮಂತ್ರಿ ಮತ್ತು ಇತರ ಸರ್ಕಾರಿ ಅಧಿಕಾರಿಗಳನ್ನು ನೇರವಾಗಿ ಒಳಗೊಂಡ ಸರಕಾರದ ಕಾರ್ಯಕ್ರಮವನ್ನಾಗಿ ಪರಿವರ್ತಿಸಿರುವುದು ಅತ್ಯಂತ ದುರದೃಷ್ಟಕರ. ಸರಕಾರಕ್ಕೆ ಯಾವುದೇ ಧಾರ್ಮಿಕ ಒಲವುಗಳು ಇರಬಾರದು. ಇದು ಸಂವಿಧಾನ ಬಾಹಿರವಾಗಿದೆ. ಕಾರ್ಯಕ್ರಮದ ಆಯೋಜನೆ ವೇಳೆ ಈ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಸಿಪಿಐಎಂ ಹೇಳಿತ್ತು.

ಇದಕ್ಕೂ ಮೊದಲು ಮಾತನಾಡಿದ್ದ ಬೃಂದಾ ಕಾರಟ್, ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಭಾಗವಹಿಸುವುದಿಲ್ಲ ಎಂದು ಹೇಳಿದ್ದರು. ನಮ್ಮ ಪಕ್ಷವು ಧಾರ್ಮಿಕ ನಂಬಿಕೆಗಳನ್ನು ಗೌರವಿಸಲಿದೆ. ಧರ್ಮದೊಂದಿಗೆ ರಾಜಕೀಯ ಬೆರೆಸುವುದು ಸರಿಯಲ್ಲ. ಬಿಜೆಪಿ ರಾಮ ಮಂದಿರ ಉದ್ಘಾಟನೆಯನ್ನು ಸಂಪೂರ್ಣವಾಗಿ ರಾಜಕೀಯಗೊಳಿಸುತ್ತಿದೆ ಎಂದು ಹೇಳಿದ್ದರು.

ಇದನ್ನು ಓದಿ: ‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

0
ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅನಾರ್ ಭಾರತದಲ್ಲಿ ನಾಪತ್ತೆಯಾದ ಎಂಟು ದಿನಗಳ ನಂತರ ಕೋಲ್ಕತ್ತಾ ಪೊಲೀಸರು ಅವರ ತುಂಡರಿಸಿದ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಕೋಲ್ಕತ್ತಾ ಪೊಲೀಸರು ಹತ್ಯೆಯು ಪೂರ್ವ ನಿಯೋಜಿತ ಎಂದು ಹೇಳಿಕೊಂಡಿದ್ದಾರೆ. ಅನಾರ್...