Homeಮುಖಪುಟಮಮತಾ v/s BJP - ಮಾಜಿ ಮುಖ್ಯಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ ಕೇಂದ್ರ!

ಮಮತಾ v/s BJP – ಮಾಜಿ ಮುಖ್ಯಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ ಕೇಂದ್ರ!

- Advertisement -
- Advertisement -

ಬಂಗಾಳದಲ್ಲಿ ಯಾಸ್ ಚಂಡಮಾರುತದ ಕುರಿತು ಪ್ರಧಾನಿ ಮೋದಿ ಅವರ ಸಭೆಗೆ ಗೈರುಹಾಜರಾಗಿರುವುದನ್ನು ವಿವರಿಸುವಂತೆ ಪಶ್ಚಿಮ ಬಂಗಾಳದ ನಿವೃತ್ತ ಮುಖ್ಯ ಕಾರ್ಯದರ್ಶಿ ಅಲಪನ್ ಬಂಧೋಪಾಧ್ಯಾಯ ಅವರಿಗೆ ಕೇಂದ್ರ ಸರ್ಕಾರ ಶೋಕಾಸ್‌ ನೋಟಿಸ್ ನೀಡಿದೆ. ಕೇಂದ್ರವು ವಿಪತ್ತು ನಿರ್ವಹಣಾ ಕಾಯ್ದೆಯಡಿ ಈ ನೋಟಿಸ್ ನೀಡಿದ್ದು, ಸೋಮವಾರದೊಳಗೆ ಪ್ರತಿಕ್ರಿಯಿಸುವಂತೆ ಬಂದೋಪಾಧ್ಯಾಯ ಅವರನ್ನು ಕೇಳಿದೆ.

ಅಲಪನ್‌ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆಗೆ ಮೋದಿಯನ್ನು ಭೇಟಿ ಮಾಡಿ ಯಾಸ್‌ ಚಂಡಮಾರುತದಿಂದ ಉಂಟಾದ ಹಾನಿ ಕುರಿತಾಗಿ ವರದಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ ಕೇಂದ್ರವು ಕರೆದಿದ್ದ ಪುನರ್‌ ಪರಿಶೀಲಿನೆ ಸಭೆಗೆ ಅವರು ಗೈರಾಗಿದ್ದರು. ಇದರ ಬೆನ್ನಲ್ಲೆ ಅವರನ್ನು ಕೇಂದ್ರಕ್ಕೆ ವಾಪಾಸ್ ಕಳುಹಿಸಬೇಕು ಎಂದು ಕೇಂದ್ರವು ರಾಜ್ಯವನ್ನು ಕೇಳಿಕೊಂಡಿತ್ತು.

ಇದನ್ನೂ ಓದಿ: ಕೇಂದ್ರಕ್ಕೆ ಮುಖ್ಯ ಕಾರ್ಯದರ್ಶಿಯನ್ನು ಕಳುಹಿಸಲ್ಲ: ಮಮತಾ ಬ್ಯಾನರ್ಜಿ

ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು, ಮುಖ್ಯ ಕಾರ್ಯದರ್ಶಿಯನ್ನು ವಾಪಸ್ ಕರೆಸಿಕೊಳ್ಳುವ ಕೇಂದ್ರದ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಕೋರಿದ್ದರು. ಜೊತೆಗೆ ಅವರನ್ನು ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದಿಲ್ಲ ಎಂದು ತಿಳಿಸಿದ್ದರು. ಆದರೆ ಕೇಂದ್ರ ಸರ್ಕಾರವು ವರ್ಗಾವಣೆ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗೆ ಪ್ರತ್ಯುತ್ತರಿಸಿತ್ತು.

ಅಲಪನ್‌ ಅವರ ಸ್ಥಾನಕ್ಕೆ ಹೆ.ಕೆ. ದ್ವಿವೇದಿಯವರು ಪಶ್ಚಿಮ ಬಂಗಾಳದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಸೋಮವಾರ ಬೆಳಗ್ಗೆ 10 ಗಂಟೆಯ ಒಳಗೆ ಪಶ್ಚಿಮ ಬಂಗಾಳದ ರಾಜ್ಯ ಸರ್ಕಾರದ ಸೇವೆಯಿಂದ ಬಿಡುಗಡೆಗೊಂಡು ಕೇಂದ್ರ ಸರ್ಕಾರದ ಸೇವೆಗೆ ವರದಿ ಮಾಡಿಕೊಳ್ಳಬೇಕಿದ್ದ ಅಲಪನ್‌ ಬಂದೋಪಾದ್ಯಾಯ್‌ ತಮ್ಮ ಉದ್ಯೋಗದಿಂದಲೇ ನಿವೃತ್ತಿಗೊಂಡಿದ್ದಾರೆ. ಜೊತೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬಂದೋಪಾದ್ಯಾಯ ಅವರನ್ನು ತಮ್ಮ ಮಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ಹುದ್ದೆಗೆ ನಿವೃತ್ತಿ – ಸಿಎಂ ಮಮತಾ ಬ್ಯಾನರ್ಜಿಯವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡ ಅಲಪಾನ್‌ ಬಂದೋಪಾದ್ಯಾಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...