Homeಮುಖಪುಟನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ...

ನಂದಿಗ್ರಾಮ ಫಲಿತಾಂಶ: ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ನಡೆಸುತ್ತಿರುವ ಜಸ್ಟೀಸ್ ಕೌಶಿಕ್ ಚಂದ ಬಗ್ಗೆ ಟಿಎಂಸಿ ಅಸಮಾಧಾನ

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಫಲಿತಾಂಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋಲ್ಕತ್ತಾ ಹೈಕೋರ್ಟ್ ಜೂನ್ 24ಕ್ಕೆ ಮುಂದೂಡಿದೆ. ಬಿಜೆಪಿ ಅಭ್ಯರ್ಥಿಯಾಗಿ ಸುವೇಂದು ಅಧಿಕಾರಿ ಗೆಲುವು ಪಡೆದಿದ್ದರು.

ಕೋಲ್ಕತ್ತಾ ಹೈಕೋರ್ಟ್‌‌ನಲ್ಲಿ ಸಲ್ಲಿಸಿಲಾಗಿದ್ದ ಅರ್ಜಿ ವಿಚಾರಣೆಯನ್ನು ಜಸ್ಟೀಸ್ ಕೌಶಿಕ್ ಚಂದ ನಡೆಸುತ್ತಿದ್ದು, ನ್ಯಾಯಮೂರ್ತಿ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಕಾನೂನು ಸಲಹೆಗಾರರಾಗಿದ್ದ ಕೌಶಿಕ್ ಚಂದ ಅವರು ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾರೆ. ಅವರ ಮುಂದೆ ಮಮತಾ ಬ್ಯಾನರ್ಜಿಯವರ ನಂದಿಗ್ರಾಮ ಚುನಾವಣೆ ಫಲಿತಾಂಶದ ಅರ್ಜಿ ಇದೆ ಎಂದು ಟಿಎಂಸಿ ನಾಯಕರು ಟ್ವೀಟ್ ಮಾಡುತ್ತಿದ್ದಾರೆ.

ಟಿಎಂಸಿ ಸಂಸದ ಡೆರೆಕ್ ಒಬ್ರಿಯನ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಜಸ್ಟೀಸ್ ಕೌಶಿಕ್ ಚಂದ ಬಿಜೆಪಿ ಕಾನೂನು ಘಟಕದಲ್ಲಿದರು ಎಂದು ಛಾಯಾಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಘೋಷ್‌ ಮಾತ್ತು ಕೌಶಿಕ್ ಚಂದ ಅವರ ಚಿತ್ರಗಳನ್ನು ಶೇರ್‌ ಮಾಡಿ, ಇವರೇನಾ ಈಗೀನ ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಗಳು..? ಇವರ ಮುಂದೆ ಮಮತಾ ಬ್ಯಾನರ್ಜಿ ಸಲ್ಲಿಸಿರುವ ನಂದಿಗ್ರಾಮ ಚುನಾವಣೆ ಪ್ರಕರಣದ ಅರ್ಜಿ ವಿಚಾರಣೆ..? ನ್ಯಾಯಾಂಗ ಇಷ್ಟು ಕೆಳಮಟ್ಟಕ್ಕೆ ಇಳಿಯುವುದೆ..? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ – ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

ಟಿಎಂಸಿ ಸಂಸದೆ ಮಹುವಾ ಮೊಹಿತ್ರಾ ಕೂಡ ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ನಂದಿಗ್ರಾಮ ಪ್ರಕರಣವನ್ನು ಕೌಶಿಕ್ ಚಂದ ಅವರ ವಿಚಾರಣೆಗೆ ವಹಿಸಿರುವುದನ್ನು ಖಂಡಿಸಿ, ನ್ಯಾಯಾಂಗವನ್ನು ಉಳಿಸಿ ಎಂದಿದ್ದಾರೆ.

ಬಿಜೆಪಿಯ ಕಾನೂನು ವಿಭಾ‌ಗದ ಸದಸ್ಯ ಮತ್ತು ವಕೀಲರಾಗಿದ್ದ ಜಸ್ಟೀಸ್ ಕೌಶಿಕ್ ಚಂದ, ಮಮತಾ ಬ್ಯಾನರ್ಜಿಯವರ ನಂದಿಗ್ರಾಮದ ಅರ್ಜಿ ವಿಚಾರಣೆಯನ್ನು ನಡೆಸಲಿದ್ದಾರೆ. ನಮ್ಮ ನ್ಯಾಯಾಂಗವನ್ನು ಉಳಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ವಿಧಾನಸಭಾ ಕ್ಷೇತ್ರ ನಂದಿಗ್ರಾಮದ ಮತ ಏಣಿಕೆಯಲ್ಲಿ ಮೊದಲಿನಿಂದಲೂ ಮುನ್ನಡೆಯಲ್ಲಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೊನೆಯಲ್ಲಿ ಸೋಲು ಕಂಡಿದ್ದಾರೆ ಎಂದು ಘೋಷಿಸಲಾಯಿತು. ಬಿಜೆಪಿಯ ಸುವೇಂಧು ಅಧಿಕಾರಿಗೆ ಗೆಲುವು ಎನ್ನಲಾಯಿತು. ಹಲವು ಗೊಂದಲಗಳಿಗೆ ಕಾರಣವಾದ ಫಲಿತಾಂಶದ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು.

ನಂದಿಗ್ರಾಮದ ಫಲಿತಾಂಶವನ್ನು ಪ್ರಶ್ನಿಸಿ, ಮರು ಮತ ಏಣಿಕೆ ನಡೆಸುವಂತೆ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಚುನಾವಣಾ ಆಯೋಗ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಕುರಿತು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಚಾರಣೆಯನ್ನು ಜಸ್ಟೀಸ್ ಕೌಶಿಕ್ ಚಂದ ಅವರು ನಡೆಸಲಿದ್ದು, ಇವರು ಬಿಜೆಪಿ ಬೆಂಬಲಿತರು ಎಂದು ಟಿಎಂಸಿ ಆರೋಪಿಸುತ್ತಿದೆ.

 


ಇದನ್ನೂ ಓದಿ: ಯಾಸ್ ಚಂಡಮಾರುತ: ಕೇಂದ್ರದಿಂದ ಯಾವುದೇ ನೆರವು ಬಂದಿಲ್ಲ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...