Homeಮುಖಪುಟಮಾಧ್ಯಮಗಳು ಕಣ್ಮುಚ್ಚಿ, ನಿಶಬ್ದವಾಗಿ ಕುಳಿತಿವೆ: ಮಮತಾ ಬ್ಯಾನರ್ಜಿ ಆಕ್ರೋಶ

ಮಾಧ್ಯಮಗಳು ಕಣ್ಮುಚ್ಚಿ, ನಿಶಬ್ದವಾಗಿ ಕುಳಿತಿವೆ: ಮಮತಾ ಬ್ಯಾನರ್ಜಿ ಆಕ್ರೋಶ

ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ಸತತವಾಗಿ ಹೆಚ್ಚಿಸುವ ಮೂಲಕ ಭಾರತದ ಜನತೆಯನ್ನು ಹಿಂಸಿಸುತ್ತಿದೆ- ಮಮತಾ ಬ್ಯಾನರ್ಜಿ

- Advertisement -
- Advertisement -

ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆಗಳನ್ನು ಸತತವಾಗಿ ಹೆಚ್ಚಿಸುವ ಮೂಲಕ ಭಾರತದ ಜನತೆಯನ್ನು ಹಿಂಸಿಸುತ್ತಿದೆ. ಆದರೆ ಇದನ್ನು ಕಂಡು ಕಾಣದಂತೆ ಮಾಧ್ಯಮಗಳು ಕಣ್ಮುಚ್ಚಿ, ನಿಶಬ್ದವಾಗಿ ಕುಳಿತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂ ಏರಿಕೆಯಾದ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಕಿಡಿಕಾರಿರುವ ಅವರು, “ಕೇಂದ್ರ ಸರಕಾರ ಕೂಡಲೇ ಭಾರತದ ಜನತೆಯನ್ನು ಹಿಂಸಿಸುವುದನ್ನು ನಿಲ್ಲಿಸಬೇಕು. ತೈಲಬೆಲೆ, ಗ್ಯಾಸ್ ಬೆಲೆ ಮತ್ತು ದಿನಬಳಕೆಯ ವಸ್ತುಗಳ ಬೆಲೆಯನ್ನು ಪದೇ ಪದೇ ಹೆಚ್ಚಿಸುವ ಮೂಲಕ ಬಿಜೆಪಿ ಸರ್ಕಾರ ಭಾರತದ ಮಹಾನ್ ಲೂಟಿ ನಡೆಸುತ್ತಿದೆ” ಎಂದು ಹೇಳಿದ್ದಾರೆ.

ಸರ್ಕಾರ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದೆ. ಆದರೆ ಮಾಧ್ಯಮಗಳು ಈ ಕುರಿತು ವರದಿ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಗೃಹಬಳಕೆಯ ಅಡುಗೆ ಅನಿಲ (LPG) ದರದಲ್ಲಿ ಮತ್ತೆ 50 ರೂ. ಏರಿಕೆ ಮಾಡಲಾಗಿದೆ. ಹಾಗಾಗಿ 14.2 ಕೆಜಿ ಸಬ್ಸಿಡಿ ಸಿಲಿಂಡರ್ ಬೆಲೆ ಈಗ ದೆಹಲಿಯಲ್ಲಿ 1000 ರೂ ಮುಟ್ಟಿದೆ.

ಈ ವರ್ಷದ ಮಾರ್ಚ್ 22ರಂದು ಅನಿಲ ದರದಲ್ಲಿ 50 ರೂ ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೆ 50 ರೂ ಹೆಚ್ಚಳ ಮಾಡಿದ್ದು ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಲಿದೆ.

ಇದೇ ತಿಂಗಳು ವಾಣಿಜ್ಯ ಬಳಕೆಯ ಸಿಲಿಂಡರ್ ಮೇಲೆಯೂ ಸಹ 102.50 ರೂ ಏರಿಕೆ ಮಾಡಲಾಗಿತ್ತು. 19 ಕೆಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಈಗ ದೆಹಲಿಯಲ್ಲಿ 2,355ರೂ ತಲುಪಿದೆ.

ಇದನ್ನೂ ಓದಿ : ಬಣ್ಣದ ರಿಸ್ಟ್ ಬ್ಯಾಂಡುಗಳ ಮೂಲಕ ತಮಿಳುನಾಡು ಶಾಲೆಗಳಲ್ಲಿ ಮಾರಕವಾದ ಜಾತಿ ತಾರತಮ್ಯ!

ಪೆಟ್ರೋಲ್-ಡೀಸೆಲ್ ಮತ್ತು ಅಡುಗೆ ಅನಿಲದ ದರ ಏರಿಕೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ ಮಾಲೀಕರು ಊಟ-ತಿಂಡಿಯ ಬೆಲೆ ಸಹ 10% ಏರಿಕೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...