Homeಮುಖಪುಟಉತ್ತರಪ್ರದೇಶ: ಗೋಹತ್ಯೆ ಪ್ರಕರಣದ ಆರೋಪಿಯ ಎನ್‌ಕೌಂಟರ್‌

ಉತ್ತರಪ್ರದೇಶ: ಗೋಹತ್ಯೆ ಪ್ರಕರಣದ ಆರೋಪಿಯ ಎನ್‌ಕೌಂಟರ್‌

- Advertisement -
- Advertisement -

ಗೋಹತ್ಯೆ ಪ್ರಕರಣದ ಆರೋಪಿಯೋರ್ವನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ರಾಮ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಸಾಜಿದ್ (23) ಹತ್ಯೆಯಾದ ಯುವಕ. ಘಟನೆಯಲ್ಲಿ ಬಬ್ಲು ಎಂಬಾತ ಗಾಯಗೊಂಡಿದ್ದಾನೆ.

ರಾಮ್‌ಪುರ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಗೋಹತ್ಯೆ ಪ್ರಕರಣದ ಆರೋಪಿ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ಹೇಳಿದ್ದಾರೆ.

ಪಟ್ವಾಯಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗೋಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದಾಗ, ಆರೋಪಿಗಳು ಶನಿವಾರ ತಡರಾತ್ರಿ ಮೊರಾದಾಬಾದ್‌ಗೆ ವಾಹನದಲ್ಲಿ ಬರುತ್ತಾರೆ ಎಂಬ ಮಾಹಿತಿ ನಮಗೆ ಬಂದಿತ್ತು. ಇದರಿಂದಾಗಿ ಪಟ್ವಾಯಿ ಪೊಲೀಸರು ಚೆಕ್‌ಪಾಯಿಂಟ್ ನಿರ್ಮಿಸಿ ಕಾರುಗಳನ್ನು ಪರಿಶೀಲಿಸುತ್ತಿದ್ದರು. ಈ ವೇಳೆ ಮೊರಾದಾಬಾದ್‌ನಿಂದ ಅತಿವೇಗದಲ್ಲಿ ವಾಹನ ಬರುತ್ತಿರುವುದನ್ನು ಗಮನಿಸಿದ್ದಾರೆ. ಚೆಕ್‌ಪಾಯಿಂಟ್ ನೋಡಿದ ನಂತರ ಕಾರು ವಾಪಾಸ್ಸು ಹೋಗಿದೆ. ಅವರನ್ನು ಬೆನ್ನಟ್ಟಿ ಪೊಲೀಸ್ ವಾಹನ ತೆರಳಿದೆ. ಈ ವೇಳೆ ವೇಗವಾಗಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮಿಲಾಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಲ್ಟಿಯಾಗಿದೆ. ಇಬ್ಬರು ಆರೋಪಿಗಳು ಕಾರಿನಿಂದ ಹೊರಬಂದು ಪೊಲೀಸ್ ಅಧಿಕಾರಿಗಳ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದರು. ಆತ್ಮರಕ್ಷಣೆಗೆ ಪೊಲೀಸರು ಗುಂಡಿನ ಪ್ರತಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಆರೋಪಿಗಳು ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಸಾಜಿದ್ (23) ಮೃತಪಟ್ಟಿದ್ದಾರೆ. ಮತ್ತೋರ್ವ ಆರೋಪಿ ಬಬ್ಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಎಸ್ಪಿ ರಾಜೇಶ್ ದ್ವಿವೇದಿ ತಿಳಿಸಿದ್ದಾರೆ.

ಸಾಜಿದ್ ಮತ್ತು ಬಬ್ಲು ಇಬ್ಬರೂ ಮೊರಾದಾಬಾದ್ ನಿವಾಸಿಗಳಾಗಿದ್ದು, ಅಪರಾಧ ಹಿನ್ನೆಲೆಯನ್ನು ಹೊಂದಿದ್ದಾರೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 307 ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅವರಿಂದ ಕಾರು, ದೇಶೀಯ ನಿರ್ಮಿತ ಪಿಸ್ತೂಲ್‌ಗಳು, ಮದ್ದುಗುಂಡುಗಳು, ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಗೋಹತ್ಯೆಗೆ ಬಳಸಿದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಇದನ್ನು ಓದಿ: ವಿಶ್ವಕಪ್‌ನಲ್ಲಿ ಭಾರತಕ್ಕೆ ಸೋಲು: ಮೋದಿ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷದ ನಾಯಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...