Homeಮುಖಪುಟನಟಿ ಪಾರ್ವತಿ ತಿರುವೋತ್ ಅವರನ್ನು ನಿರಂತರ ಹಿಂಬಾಲಿಸಿ ಕಿರುಕುಳ ನೀಡಿದ ವ್ಯಕ್ತಿ ಬಂಧನ

ನಟಿ ಪಾರ್ವತಿ ತಿರುವೋತ್ ಅವರನ್ನು ನಿರಂತರ ಹಿಂಬಾಲಿಸಿ ಕಿರುಕುಳ ನೀಡಿದ ವ್ಯಕ್ತಿ ಬಂಧನ

- Advertisement -
- Advertisement -

ಮಲಯಾಳಂ ನಟಿ ಪಾರ್ವತಿ ತಿರುವೋತ್ ಅವರನ್ನು ಪದೇ ಪದೇ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಎರ್ನಾಕುಲಂನಲ್ಲಿ 35 ವರ್ಷದ ವ್ಯಕ್ತಿಯನ್ನು ಮರಡು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಡಿ (ಹಿಂಬಾಲಿಸುವಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮರಡು ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಅಪರಿಚಿತ ಆರೋಪಿಯು ಎರ್ನಾಕುಲಂ ಮತ್ತು ಕೋಯಿಕ್ಕೋಡ್‌ನಲ್ಲಿರುವ ನಟಿಯ ನಿವಾಸಗಳಿಗೆ ಪದೇ ಪದೇ ಭೇಟಿ ನೀಡಿದ್ದನು. ಇದರಿಂದಾಗಿ ನಟಿಯು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಮಾಧ್ಯಮ ವರದಿಗಳು ಆರೋಪಿಸಿವೆ.

ಇದನ್ನೂ ಓದಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಕೋಝಿಕ್ಕೋಡ್‌ನಲ್ಲಿರುವ ಪಾರ್ವತಿ ಅವರ ಕುಟುಂಬದ ಮನೆಗೆ ಪ್ರವೇಶಿಸಲು ಆರೋಪಿಯು ಹಲವಾರು ಪ್ರಯತ್ನಗಳನ್ನು ಮಾಡಿದ್ದಾನೆ ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ. ಪ್ರತಿ ಬಾರಿ ಆಹಾರದ ಪೊಟ್ಟಣಗಳೊಂದಿಗೆ ಆಗಮಿಸಿಸುವ ಆರೋಪಿಯು, ಅವರನ್ನು ಮನೆ ಪ್ರವೇಶಿಸಲು ಬಿಡದ ಭದ್ರತಾ ಅಧಿಕಾರಿಯೊಂದಿಗೆ ಜಗಳವಾಡುತ್ತಿದ್ದನು ಎಂದು ವರದಿಯಾಗಿದೆ.

ಪಾರ್ವತಿ ಈ ಹಿಂದೆ ಕೂಡಾ ವಕೀಲರೆಂದು ಹೇಳಿಕೊಳ್ಳುವ ವ್ಯಕ್ತಿಯಿಂದ ಹಿಂಬಾಲಿಸಲ್ಪಟ್ಟಿದ್ದರು. ಇದರ ನಂತರ ಪಾಲಕ್ಕಾಡ್‌ನ ನೆನ್ಮಾರಾ ಮೂಲದ 48 ವರ್ಷದ ಕಿಶೋರ್ ಬಾಲನ್ ಅವರನ್ನು ಡಿಸೆಂಬರ್ 2019 ರಲ್ಲಿ ಪೊಲೀಸರು ಬಂಧಿಸಿದ್ದರು. ಅಂದು ಬಂಧನಕ್ಕೆ ಒಳಗಾಗಿದ್ದ ಕಿಶೋರ್, ಈ ಹಿಂದೆ ವಂಚನೆ ಪ್ರಕರಣಗಳಲ್ಲಿ ಸಿಕ್ಕಿಬಿದ್ದಿದ್ದ ಎಂದು ಪೊಲೀಸರು ತಿಳಿಸಿದ್ದರು.

ನಟಿ ಪಾರ್ವತಿ ಅವರು ಈ ಹಿಂದೆಯೆ, “ಹಿಂಬಾಲಿಸುವುದು ಗಂಭೀರ ಅಪರಾಧ, ಇದು ಅನೇಕ ಮಹಿಳೆಯರ ಮೇಲೆ ಪರಿಣಾಮ ಬೀರಿದೆ. ಆದರೆ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಪಾರ್ವತಿ ತಿರುವೋತು ಅಭಿನಯದ JNU ಪ್ರತಿಭಟನೆ ಆಧಾರಿತ ಚಿತ್ರಕ್ಕೆ ತಡೆಯೊಡ್ಡಿದ ಸೆನ್ಸಾರ್ ಮಂಡಳಿಯ ಬಿಜೆಪಿ ಮುಖಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...