Homeಮುಖಪುಟವೈದ್ಯೆ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್‌ಮೇಲ್: ಆರೋಪಿ ಬಂಧನ

ವೈದ್ಯೆ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್‌ಮೇಲ್: ಆರೋಪಿ ಬಂಧನ

- Advertisement -
- Advertisement -

ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಬ್ಲ್ಯಾಕ್‌ಮೇಲ್‌ ಮಾಡಿರುವ ಆರೋಪದ ಮೇಲೆ 38 ವರ್ಷದ ವ್ಯಕ್ತಿಯನ್ನು ಮುಂಬೈ ಪೊಲೀಸ್ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ದಕ್ಷಿಣ ಮುಂಬೈನ ಗಾಮದೇವಿ ಪೊಲೀಸ್ ಠಾಣೆಯಲ್ಲಿ ವೈದ್ಯೆ ಕಳೆದ ವಾರ ನೀಡಿದ ದೂರಿನ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ಹೇಳಿದೆ.

ಆರೋಪಿ, ತಾರದೇವ ಪ್ರದೇಶದಲ್ಲಿ ಬ್ಯಾಡ್ಮಿಂಟನ್ ಸೆಷನ್ ವೇಳೆ ಪರಿಚಯವಾಗಿ ವೈದ್ಯೆಯ ಸ್ನೇಹ ಸಂಪಾದಿಸಿದ್ದ ಎಂದು ಹೇಳಲಾಗಿದೆ. ಈ ಅವಧಿಯಲ್ಲಿ ಮಹಿಳೆ, ವೈಮನಸ್ಯದಿಂದಾಗಿ ಪತಿಯ ಜತೆ ವಾಸಿಸುತ್ತಿರಲಿಲ್ಲ ಎನ್ನಲಾಗಿದೆ. ಆಗ ಆರೋಪಿ, ವೈದ್ಯೆಯ ವೈಯಕ್ತಿಕ ಬದುಕಿನ ಬಗ್ಗೆ ಗಾಸಿಪ್‌ಗಳನ್ನು ಹರಡಿರುವ ಬಗ್ಗೆ ಮಹಿಳೆ ಪ್ರಶ್ನಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾತುಕತೆ ನಡೆಸಲು ಆಗಸ್ಟ್ 20ರಂದು ವೈದ್ಯೆಯನ್ನು ಆಹ್ವಾನಿಸಿದ್ದ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಮೆರೈನ್ ಡ್ರೈವ್ ಪ್ರದೇಶದ ಕ್ಲಬ್ ನಲ್ಲಿ ಭೇಟಿಯ ಸಂದರ್ಭದಲ್ಲಿ ವೈದ್ಯೆಗೆ ಮದ್ಯಪಾನ ಮಾಡಿಸಿದ್ದ ಎಂದು ದೂರಿನಲ್ಲಿ ವಿವರಿಸಲಾಗಿದೆ. ಮಹಿಳೆಯನ್ನು ಕಾರಿನಲ್ಲಿ ಮನೆಗೆ ಕರೆದೊಯ್ದು ಬಳಿಕ ಮತ್ತಷ್ಟು ವೈನ್ ಕುಡಿಸಿದ ಮದ್ಯದ ಅಮಲಿನಲ್ಲಿದ್ದಾಗ ಅತ್ಯಾಚಾರ ಎಸಗಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.

ಅಕ್ಟೋಬರ್‌ನಲ್ಲಿ ವೈದ್ಯೆಯಿಂದ ಹಣ ಕೇಳಿದ್ದಾನೆ, ಆಗ ಅವರು ಹಣ ನೀಡಲು ನಿರಾಕರಿಸಿದಾಗ, ಅತ್ಯಾಚಾರದ ವಿಡಿಯೊ, ಚಿತ್ರಗಳು ಮತ್ತು ಸಂಭಾಷಣೆ ವಿವರಗಳನ್ನು ಪತಿ ಹಾಗೂ ಸ್ನೇಹಿತರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿ 3.33 ಲಕ್ಷ ರೂಪಾಯಿ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.

ಅದೇ ವಿಚಾರ ಇಟ್ಟುಕೊಂಡು ಪದೇ ಪದೇ ಹಣಕ್ಕಾಗಿ ಬೇಡಿಕೆ ಇಟ್ಟಾಗ ವೈದ್ಯೆ ಪೊಲೀಸರನ್ನು ಸಂಪರ್ಕಿಸಿದ್ದಾರೆ.

ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ 376 (ಅತ್ಯಾಚಾರ) ಮತ್ತು 384 (ಸುಲಿಗೆ) ಅಡಿಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಆಗ್ರಾ: ಹೋಟೆಲ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...