Homeಮುಖಪುಟಸೂರತ್-ಕೋಲ್ಕತ್ತಾ ವಿಮಾನದಲ್ಲಿ ಬೀಡಿ ಸೇದಿದ ವ್ಯಕ್ತಿ; ಟೇಕ್ ಆಫ್ ಆಗುವ ಮುನ್ನವೇ ಬಂಧನ

ಸೂರತ್-ಕೋಲ್ಕತ್ತಾ ವಿಮಾನದಲ್ಲಿ ಬೀಡಿ ಸೇದಿದ ವ್ಯಕ್ತಿ; ಟೇಕ್ ಆಫ್ ಆಗುವ ಮುನ್ನವೇ ಬಂಧನ

- Advertisement -
- Advertisement -

ಸೂರತ್-ಕೋಲ್ಕತ್ತಾ ವಿಮಾನದಲ್ಲಿದ್ದ ಪ್ರಯಾಣಿಕನೊಬ್ಬ ಗುರುವಾರ ಟೇಕ್ ಆಫ್ ಆಗುವ ಮುನ್ನ ವಿಮಾನದ ಶೌಚಾಲಯದೊಳಗೆ ಬೀಡಿ ಸೇದುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಅಶೋಕ್ ಬಿಶ್ವಾಸ್ ಎಂದು ಗುರುತಿಸಲಾದ ಪ್ರಯಾಣಿಕ ಪಶ್ಚಿಮ ಬಂಗಾಳದ ಮೂಲದವನಾಗಿದ್ದು, ಕೆಲಸೂರತ್-ಕೋಲ್ಕತ್ತಾ ವಿಮಾನಸದ ನಿಮಿತ್ತ ಗುಜರಾತ್‌ನ ನವಸಾರಿಯಲ್ಲಿ ವಾಸಿಸುತ್ತಿದ್ದಾರೆ.

ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ತಪಾಸಣೆಯ ಹೊರತಾಗಿಯೂ, ಬಿಶ್ವಾಸ್ ಬೀಡಿ ಮತ್ತು ಬೆಂಕಿಕಡ್ಡಿಯನ್ನು ವಿಮಾನಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾದರು. ತಾಂತ್ರಿಕ ಸಮಸ್ಯೆಗಳಿಂದಾಗಿ ವಿಳಂಬವಾದ ಕಾರಣ, ವಿಮಾನವು ಇನ್ನೂ ಟೇಕ್ ಆಫ್ ಆಗಿರಲಿಲ್ಲ. ಆದರೆ, ಗಗನ ಸಖಿಯೊಬ್ಬರು ಶೌಚಾಲಯದಿಂದ ಹೊಗೆಯ ವಾಸನೆ ಬರುತ್ತಿರುವುದನ್ನು ಗಮನಿಸಿ, ಅವರು ತಕ್ಷಣ ವಿಮಾನ ನಿಲ್ದಾಣದ ಹಿರಿಯ ಕಾರ್ಯನಿರ್ವಾಹಕರಿಗೆ ಮಾಹಿತಿ ನೀಡಿದರು.

ಸಿಬ್ಬಂದಿ ದೂರಿನ ಬಳಿಕ ಪರಿಶೀಲಿಸಿದಾಗ, ಬಿಶ್ವಾಸ್ ಅವರ ಬ್ಯಾಗ್‌ನಲ್ಲಿ ಬೀಡಿ ಮತ್ತು ಬೆಂಕಿಕಡ್ಡಿ ಪೆಟ್ಟಿಗೆ ಕಂಡುಬಂದಿದೆ. ನಂತರ, ಪ್ರಯಾಣಿಕನ್ನು ವಿಮಾನದಿಂದ ಕೆಳಗಿಳಿಸಲಾಯಿತು. ವಿಮಾನಯಾನ ಸಂಸ್ಥೆಯು ಘಟನೆಯನ್ನು ಡುಮಸ್ ಪೊಲೀಸರಿಗೆ ವರದಿ ಮಾಡಿತು, ಅವರು ಪ್ರಯಾಣಿಕನನ್ನು ಬಂಧಿಸಿದರು.

ಪೊಲೀಸ್ ಅಧಿಕಾರಿಗಳ ಪ್ರಕಾರ, ವಿಮಾನವು ಸಂಜೆ 4.35 ಕ್ಕೆ ಹೊರಡಬೇಕಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದಾಗಿ ವಿಳಂಬವಾಯಿತು. ಸಂಜೆ 5.30 ರ ಸುಮಾರಿಗೆ, ಗಗನಸಖಿ ಹೊಗೆಯ ವಾಸನೆಯನ್ನು ಗಮನಿಸಿ ತನ್ನ ಹಿರಿಯ ಅಧಿಕಾರಿಗೆ ಮಾಹಿತಿ ನೀಡಿದರು. ಹೆಚ್ಚಿನ ತಪಾಸಣೆ ನಡೆಸಿದಾಗ, 15ಎ ನಲ್ಲಿ ಕುಳಿತಿದ್ದ ಬಿಶ್ವಾಸ್ ನಿಷೇಧಿತ ವಸ್ತುಗಳನ್ನು ಹೊತ್ತೊಯ್ಯುತ್ತಿರುವುದು ಕಂಡುಬಂದಿದೆ.

ಇತರ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಕ್ಕಾಗಿ ಪೊಲೀಸರು ಪ್ರಯಾಣಿಕನ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 125 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಿಮಾನಯಾನ ಸಂಸ್ಥೆಯಿಂದ ಯಾವುದೇ ಅಧಿಕೃತ ಹೇಳಿಕೆ ನೀಡಲಾಗಿಲ್ಲವಾದರೂ, ಅದರ ಹಿರಿಯ ಕಾರ್ಯನಿರ್ವಾಹಕರು ಅಧಿಕಾರಿಗಳಿಗೆ ಔಪಚಾರಿಕ ದೂರು ದಾಖಲಿಸಿದ್ದಾರೆ.

ಛತ್ತೀಸ್‌ಗಢ| ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 16 ನಕ್ಸಲರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...