Homeಮುಖಪುಟವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಕೇರಳದ ಕೋಝಿಕ್ಕೋಡ್ ಪೊಲೀಸರು ಬಂಧಿಸಿದ್ದಾರೆ.

42 ವರ್ಷದ ಸೇಲ್ಸ್ ಮ್ಯಾನೇಜರ್ ಯು ದೀಪಕ್ ಅವರ ಆತ್ಮಹತ್ಯೆಗೆ ಪ್ರಚೋದಿಸಿ ಆರೋಪದಲ್ಲಿ ಶಿಮ್ಜಿತಾ ಮುಸ್ತಫಾ ಅವರನ್ನು ವಡಗರದ ಸಂಬಂಧಿಕರ ಮನೆಯಿಂದ ಬುಧವಾರ (ಜ.21) ವಶಕ್ಕೆ ಪಡೆಯಲಾಗಿದೆ.

ವರದಿಗಳ ಪ್ರಕಾರ, ಶಿಮ್ಜಿತಾ ದೇಶ ಬಿಟ್ಟು ಪಲಾಯನ ಮಾಡುವುದನ್ನು ತಡೆಯಲು ಪೊಲೀಸರು ಲುಕ್‌ಔಟ್‌ ನೋಟಿಸ್ ಹೊರಡಿಸಿದ್ದರು. ಮತ್ತೊಂದೆಡೆ ಆಕೆಗಾಗಿ ಹುಡುಕಾಟ ನಡೆಸುತ್ತಿದ್ದರು.

ಜನವರಿ 16 ರಂದು ದೀಪಕ್ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನಲ್ಲಿ ಕೆಲಸಕ್ಕಾಗಿ ಕೋಝಿಕ್ಕೋಡ್‌ನಿಂದ ಕಣ್ಣೂರಿಗೆ ತೆರಳುತ್ತಿದ್ದಾಗ, ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಶಿಮ್ಜಿತಾ, ದೀಪಕ್ ಅವರ ಮೊಣಕೈ ತನ್ನ ದೇಹಕ್ಕೆ ತಾಗಿದೆ. ಅವರು ದುರುದ್ದೇಶದಿಂದ ಕೃತ್ಯವೆಸಗಿದ್ದಾರೆ ಎಂದು ವಿಡಿಯೋ ರೆಕಾರ್ಡ್ ಮಾಡಿ ಹಂಚಿಕೊಂಡಿದ್ದರು. ದೀಪಕ್ ತನ್ನ ದೇಹಕ್ಕೆ ಉದ್ಧೇಶಪೂರ್ವಕವಾಗಿ ಕೈ ತಾಗಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಮನನೊಂದು ಕೋಝಿಕ್ಕೋಡ್‌ನ ಗೋವಿಂದಪುರಂನ ಮನೆಯಲ್ಲಿ ಜನವರಿ 18ರಂದು ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ಕೇರಳ ಮಾತ್ರವಲ್ಲದೆ ದೇಶದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ದೀಪಕ್ ಸಾವಿಗೆ ಸಂಬಂಧಿಸಿದಂತೆ ಅವರ ತಾಯಿ ಕನ್ಯಕ ಪೊಲೀಸರಿಗೆ ದೂರು ನೀಡಿದ್ದರು. ನನ್ನ ಮಗ ನಿರಪರಾಧಿ, ಶಿಮ್ಜಿತಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಸುಳ್ಳಾರೋಪ ಮಾಡಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ಮೂಲಕ ನನ್ನ ಮಗನ ಮಾನಹಾನಿ ಮಾಡಿ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದರು.

ದೂರು ಸ್ವೀಕರಿಸಿದ ಪೊಲೀಸರು ಶಿಮ್ಜಿತಾ ವಿರುದ್ದ ಬಿಎಎನ್‌ಎಸ್ ಸೆಕ್ಷನ್ 108ರ ಅಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ಕೈಗೊಂಡ ಪೊಲೀಸರು ಮೊದಲು ಚೋರೋಡ್‌ನಲ್ಲಿರುವ ಶಿಮ್ಜಿತಾಳ ಮನೆಯಲ್ಲಿ ಪರಿಶೀಲನೆ ನಡೆಸಿದ್ದರು. ಆಕೆ ಅಲ್ಲಿ ಇಲ್ಲ ಎಂದು ತಿಳಿದು ಹುಡುಕಾಟ ಆರಂಭಿಸಿದ್ದರು. ಬುಧವಾರ ವಡಗರದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಬುಧವಾರ ಬೆಳಿಗ್ಗೆ 10:30ರ ಸುಮಾರಿಗೆ ವಿಶೇಷ ಪೊಲೀಸ್ ತಂಡ ಶಿಮ್ಜಿತಾ ಅವರನ್ನು ವಶಕ್ಕೆ ಪಡೆದಿದೆ. ನಂತರ ಸಾರ್ವಜನಿಕರು ಮತ್ತು ಮಾಧ್ಯಮದವರ ಕಣ್ಣು ತಪ್ಪಿಸಿ ರಹಸ್ಯವಾಗಿ ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕೊಯಿಲಾಂಡಿ ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಮುಂದಿನ ಕ್ರಮವಾಗಿ ಪೊಲೀಸರು ಶಿಮ್ಜಿತಾಳ ಮೊಬೈಲ್ ಫೋನ್ ವಶಕ್ಕೆ ಪಡೆದು ಅದರಲ್ಲಿ ವೈರಲ್ ವಿಡಿಯೋ ಮತ್ತು ಅದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಲಿದ್ದಾರೆ.

ಶಿಮ್ಜಿತಾಳ ಬಂಧನ ವಿಷಯ ತಿಳಿದು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಜನರು, ಆಕೆಯ ಮೇಲೆ ಕೊಲೆ ಸೇರಿದಂತೆ ಕಠಿಣ ಅಪರಾಧ ಪ್ರಕರಣಗಳನ್ನು ದಾಖಲಿಸಿ ಗರಿಷ್ಠ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ ಕೂಡ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದೆ. ಒಂದು ವಾರದೊಳಗೆ ತನಿಖೆಯ ಸಮಗ್ರ ವರದಿಯನ್ನು ಸಲ್ಲಿಸುವಂತೆ ಉತ್ತರ ವಲಯದ ಉಪ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ.

ಕಾನೂನು ಕ್ರಮ ಜರುಗಿಸಲು ಅಗತ್ಯವಾದ ಡಿಜಿಟಲ್ ಸಾಕ್ಷ್ಯಗಳನ್ನು ಪಡೆದುಕೊಳ್ಳಲು ಅಧಿಕಾರಿಗಳು ಶಿಮ್ಜಿತಾಳನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಕಾನೂನು-ಸುವ್ಯವಸ್ಥೆ ಹದೆಗಡೆದಂತೆ ನೋಡಿಕೊಳ್ಳಲು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಪೊಲೀಸರು ಶಿಮ್ಜಿತಾಳನ್ನು ನೇರವಾಗಿ ಕುನ್ನಮಂಗಲಂ ನ್ಯಾಯಾಲಯಕ್ಕೆ ಕರೆದೊಯ್ದು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...