Homeಮುಖಪುಟಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

- Advertisement -
- Advertisement -

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ.

ಅಕೋಲಾದಿಂದ 20 ಕಿ.ಮೀ ದೂರದಲ್ಲಿರುವ ಅನ್ವಿ ಮಿರ್ಜಾಪುರ ಗ್ರಾಮದ 55 ವರ್ಷದ ಮಾಜಿ ಸರಪಂಚ್ ಶಂಕರರಾವ್ ಶಿರಸಾಟ್ ಮೃತ ವ್ಯಕ್ತಿ. ಇವರು ಶನಿವಾರ (ಮಾ.28) ಮಧ್ಯಾಹ್ನ ಸುಡುಬಿಸಿಲಿನಲ್ಲಿ ಅಕೋಲಾ ನಗರದ ಮಲ್ಕಾಪುರ ಪ್ರದೇಶದ ಗ್ಯಾಸ್ ಏಜೆನ್ಸಿಯೊಂದ ಮುಂಭಾಗ ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿಯಲ್ಲಿ ನಿಂತಿದ್ದರು. ಈ ವೇಳೆ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ವಿದರ್ಭ ಪ್ರದೇಶದ ವಿವಿಧ ಸ್ಥಳಗಳ ಪೈಕಿ ಶನಿವಾರ ಅಕೋಲಾ ನಗರದಲ್ಲಿ ಅತಿ ಹೆಚ್ಚು (41.2) ತಾಪಮಾನ ದಾಖಲಾಗಿದೆ ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಶಂಕರರಾವ್ ಅಕೋಲಾದಲ್ಲಿ ವಾಸಿಸುತ್ತಿರುವ ತಮ್ಮ ವಿಧವೆ ಸೊಸೆಯನ್ನು ಭೇಟಿ ಮಾಡಲು ಹೋಗಿದ್ದರು. ಈ ವೇಳೆ ಎಲ್‌ಪಿಜಿ ಸಿಲಿಂಡರ್ ಸಿಗದೆ ಆಕೆ ಸಂಕಷ್ಟ ಎದುರಿಸುತ್ತಿರುವುದು ಅವರಿಗೆ ಗೊತ್ತಾಗಿದೆ. ಹಾಗಾಗಿ, ಸೊಸೆಗೆ ಗ್ಯಾಸ್ ತೆಗೆದು ಕೊಡಲು ಬೆಳಿಗ್ಗೆ ಸುಮಾರು 9 ಗಂಟೆಗೆ ಗ್ಯಾಸ್ ಏಜೆನ್ಸಿಗೆ ಹೋಗಿ ಸರತಿಯಲ್ಲಿ ನಿಂತಿದ್ದರು. ಮಧ್ಯಾಹ್ನ ಸುಮಾರು 1.30ರ ವೇಳೆಗೆ ಅವರಿಗೆ ತಲೆಸುತ್ತು ಬಂದು ಕುಸಿದು ಬಿದ್ದಿದ್ದಾರೆ. ಜನರು ಪರಿಶೀಲಿಸಿ ನೋಡಿದಾಗ ಶಂಕರರಾವ್ ಸ್ಥಳದಲ್ಲೇ ಕೊನೆಯುಸಿರೆಳೆದಿರುವುದು ಗೊತ್ತಾಗಿದೆ. ಈ ಘಟನೆ ಸ್ಥಳೀಯ ನಿವಾಸಿಗಳಲ್ಲಿ ಆಘಾತ ಮತ್ತು ಆಕ್ರೋಶವನ್ನು ಉಂಟುಮಾಡಿದೆ.

ಘಟನೆಯ ಬಳಿಕ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಎದುರಾಗುತ್ತಿರುವ ತೊಂದರೆಗಳ ಬಗ್ಗೆ ಆಡಳಿತ ಸಿದ್ಧತೆ ಮತ್ತು ಸ್ಪಂದನೆಯನ್ನು ನಾಗರಿಕರು ಪ್ರಶ್ನಿಸಿದ್ದಾರೆ. ಎಲ್‌ಪಿಜಿ ಪೂರೈಕೆಯು ನಿಯಮಿತವಾಗಿ ಇರುವಂತೆ ಖಚಿತಪಡಿಸಿಕೊಳ್ಳಲು ಆಡಳಿತವು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ವಂಚಿತ್ ಬಹುಜನ್ ಆಘಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, “ಸರ್ಕಾರ ಸೂಕ್ತ ವ್ಯವಸ್ಥೆಗಳನ್ನು ಮಾಡುವಲ್ಲಿ ವಿಫಲವಾಗಿದೆ. ಸಮಯಕ್ಕೆ ಸರಿಯಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರೆ, ಶಂಕರರಾವ್ ಶಿರಸಾಟ್ ಅವರ ಪ್ರಾಣ ಉಳಿಸಬಹುದಿತ್ತು” ಎಂದು ಹೇಳಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...