Homeಮುಖಪುಟಪಿಎಂ ಕೇರ್ಸ್‌ಗೆ 2.5 ಲಕ್ಷ ದೇಣಿಗೆ ನೀಡಿದ್ದವನ ತಾಯಿಗೆ ಸಿಗಲಿಲ್ಲ ಬೆಡ್, ಮತ್ತೆಷ್ಟು ದೇಣಿಗೆ ನೀಡಲಿ...

ಪಿಎಂ ಕೇರ್ಸ್‌ಗೆ 2.5 ಲಕ್ಷ ದೇಣಿಗೆ ನೀಡಿದ್ದವನ ತಾಯಿಗೆ ಸಿಗಲಿಲ್ಲ ಬೆಡ್, ಮತ್ತೆಷ್ಟು ದೇಣಿಗೆ ನೀಡಲಿ ಎಂದ ವ್ಯಕ್ತಿ

- Advertisement -
- Advertisement -

ದೇಶದಲ್ಲಿ ಉಲ್ಬಣವಾಗುತ್ತಿರುವ ಕೊರೊನಾ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಫಂಡ್‌ ಸ್ಥಾಪಿಸಿತ್ತು. ಹಲವು ಬೆಳವಣಿಗೆಗಳ ಬಳಿಕ ಅದೊಂದು ಸರ್ಕಾರೇತರ ಸಂಸ್ಥೆ ಎಂದು ಸರ್ಕಾರ ಘೋಷಿಸಿ, ಅದರ ವಿವರ ನೀಡಲಾಗುವುದಿಲ್ಲ ಎಂದಿದೆ.

ದೇಧ-ವಿದೇಶಗಳ ಕೋಟ್ಯಾಂತರ ಮಂದಿ ಪಿಎಂ ಕೇರ್ಸ್ ಫಂಡ್‌ಗೆ ಕೋಟಿ-ಕೋಟಿ ದೇಣಿಗೆ ನೀಡಿದ್ದಾರೆ. ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ದೇಣಿಗೆ ನೀಡಿದ್ದು, ಜನರಿಗೆ ಸಹಾಯ ಮಾಡಲು ತಿಳಿಸಿದ್ದಾರೆ. ಆದರೆ, ಇದ್ಯಾವುದು ಜನರಿಗೆ ದೊರಕುತ್ತಿಲ್ಲ ಎಂದು ಹಲವು ಟೀಕೆಗಳು ಕೇಳಿಬಂದಿವೆ. ಇವುಗಳ ಜೊತೆಗೆ ಅಹ್ಮದಾಬಾದ್‌ನ ವ್ಯಕ್ತಿಯೊಬ್ಬರು ಟ್ವೀಟ್ ಮಾಡಿ ಈ ಟೀಕೆಗೆ ಪುಷ್ಠಿ ನೀಡಿದ್ದಾರೆ.

ಅಹ್ಮದಾಬಾದ್‌ನ ವಿಜಯ್ ಪರಿಕ್ ಎಂಬುವವರು ಪಿಎಂ ಕೇರ್ಸ್ ಫಂಡ್‌ಗೆ 2 ಲಕ್ಷದ 51 ಸಾವಿರ ರೂಪಾಯಿಗಳನ್ನು ದೇಣಿಗೆ ನೀಡಿರುವುದಾಗಿ ತಿಳಿಸಿದ್ದಾರೆ. ಇಷ್ಟು ದೇಣಿಗೆ ನೀಡಿದ್ದರು ನನ್ನ ತಾಯಿಗೆ ಒಂದು ಬೆಡ್ ಸಿಗಲಿಲ್ಲ. ಅವರು ಸಾವನ್ನಪ್ಪಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪಿಎಂ ಕೇರ್ಸ್ ನಿಧಿ ಮಾಹಿತಿ ಬಹಿರಂಗ ಪಡಿಸಿ ಎಂದು ಸುಪ್ರೀಂಗೆ ಪಿಐಎಲ್ ಸಲ್ಲಿಕೆ

“2.51 ಲಕ್ಷ ದೇಣಿಗೆಯಿಂದಾಗಿಯೂ ನನ್ನ ಸಾಯುತ್ತಿರುವ ತಾಯಿಗೆ ಹಾಸಿಗೆ ದೊರಕಲಿಲ್ಲ. ಇನ್ನು ಮುಂದೆ ಬರುತ್ತಿರುವ 3ನೇ ಕೊರೊನಾ ಅಲೆಯಲ್ಲಿ ಬೆಡ್ ಕಾಯ್ದಿರಿಸಲು ನಾನು ಎಷ್ಟು ಹೆಚ್ಚು ದೇಣಿಗೆ ನೀಡಬೇಕೆಂದು ದಯವಿಟ್ಟು ಸಲಹೆ ನೀಡಿ, ನಾನು ಮತ್ತಷ್ಟು ಮನೆಯ ಸದಸ್ಯರನ್ನು ಕಳೆದುಕೊಳ್ಳಲು ಬಯಸುವುದಿಲ್ಲ” ಎಂದು ನೋವಿನಲ್ಲಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್‌ನಾಥ್‌ ಸಿಂಗ್, ಸ್ಮೃತಿ ಇರಾನಿ, ರಾಷ್ಟ್ರಪತಿ ಭವನವನ್ನು ಟ್ಯಾಗ್ ಮಾಡಿದ್ದಾರೆ. ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುತ್ತಿದ್ದಾರೆ.

ಪಿಎಂ ಕೇರ್ಸ್ ಫಂಡ್‌ನ ಪ್ರಸ್ತುತ ಸ್ಥಿತಿ ಮತ್ತು ಭಾರತ ಸರ್ಕಾರದೊಂದಿಗಿನ ಸಂಬಂಧಗಳ ಬಗ್ಗೆ ವಿವರಗಳನ್ನು ಬಹಿರಂಗ ಪಡಿಸುವಂತೆ ನಿರ್ದೇಶನ ಕೋರಿ ಉನ್ನತ ನ್ಯಾಯಾಲಯಕ್ಕೆ ಸಾಮಾಜಿಕ ಕಾರ್ಯಕರ್ತ, ಮಾಜಿ ಪತ್ರಕರ್ತ ಸಾಕತ್ ಗೋಖಲೆ ಪಿಐಎಲ್ ಸಲ್ಲಿಸಿದ್ದಾರೆ.


ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...