Homeಕರ್ನಾಟಕಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ 2 ವರ್ಷ ಜೈಲು ಶಿಕ್ಷೆ: ರೂ. 5 ಕೋಟಿ ಪರಿಹಾರ ಕೋರಿ...

ಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ 2 ವರ್ಷ ಜೈಲು ಶಿಕ್ಷೆ: ರೂ. 5 ಕೋಟಿ ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

- Advertisement -
- Advertisement -

ಹೆಂಡತಿಯನ್ನು ಕೊಲೆಗೈದ ಸುಳ್ಳಾರೋಪದಲ್ಲಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿ, ನಂತರ ಖುಲಾಸೆಗೊಂಡಿದ್ದ ಕುಶಾಲನಗರದ ಸುರೇಶ್, ತನಗೆ ನೀಡಲಾದ ಪರಿಹಾರದ ಮೊತ್ತವನ್ನು ರೂ. 1 ಲಕ್ಷದಿಂದ 5 ಕೋಟಿಗೆ ಹೆಚ್ಚಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಸುರೇಶ್‌ ಅವರನ್ನು ಮೈಸೂರಿನ 5ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯವು ‘ನಿರಪರಾಧಿ’ ಎಂದು ಘೋಷಿಸಿ ಕಳೆದ ಏಪ್ರಿಲ್ 23ರಂದು ‘ಗೌರವಯುತವಾಗಿ’ ಖುಸಲಾಸೆಗೊಳಿಸಿತ್ತು.

ಪ್ರಕರಣ ಸಂಬಂಧ, ಪೊಲೀಸ್‌ ದಾಖಲೆಗಳಲ್ಲಿ ಸುರೇಶ್ ಅವರ ಹೆಸರನ್ನು ತೆಗೆದು ಹಾಕುವಂತೆ ಮೈಸೂರಿನ ಬೆಟ್ಟದಪುರ ಪೊಲೀಸರಿಗೆ ನ್ಯಾಯಾಧೀಶ ಗುರುರಾಜ್‌ ಸೋಮಕ್ಕಳವರ್‌ ಸೂಚನೆ ನೀಡಿದ್ದರು. ಸುರೇಶ್ ಅವರ ಜಾಮೀನು ಬಾಂಡ್‌ ಮತ್ತು ಅವರ ಶ್ಯೂರಿಟಿ ಬಾಂಡ್‌ ಅನ್ನು ರದ್ದುಗೊಳಿಸಲಾಗಿತ್ತುಲ. ಅಲ್ಲದೆ, ಅವರಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿತ್ತು.

ಹೆಚ್ಚಿನ ಪರಿಹಾರ ಕೋರಿ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಸುರೇಶ್, ತನ್ನ ಒಂದೂವರೆ ವರ್ಷದ ಜೀವಿತಾವಧಿ ಮತ್ತು ಸಮಾಜದಲ್ಲಿ ಗೌರವವನ್ನು ಕಳೆದುಕೊಂಡಿದ್ದೇನೆ. ಈ ಅವಧಿಯಲ್ಲಿ ತನ್ನ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ವಾದಿಸಿದ್ದಾರೆ.

ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿ ತಾನು ಜೈಲು ಪಾಲಾಗುವಂತೆ ಮಾಡಿದ ಆರೋಪದ ಮೇಲೆ ಕೇವಲ ಒಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗಿದೆ ಎಂದು ಸುರೇಶ್ ತನ್ನ ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿರುವ ಭಾಗಿಯಾಗಿರುವ ಇತರ ನಾಲ್ವರು ಪೊಲೀಸರ ವಿರುದ್ಧವೂ ಇಲಾಖಾ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಸುರೇಶ್ ನ್ಯಾಯಾಲಯವನ್ನು ಕೋರಿದ್ದಾರೆ.

ಅಲ್ಲದೆ, ನ್ಯಾಯಾಲಯದ ತೀರ್ಪಿನಲ್ಲಿ ತನ್ನನ್ನು ‘ಆರೋಪಿ’ ಎಂದು ಉಲ್ಲೇಖಿಸಿರುವುದನ್ನು ‘ಸಂತ್ರಸ್ತ’ ಎಂದು ಬದಲಾಯಿಸುವಂತೆ ಸುರೇಶ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಸಂತ್ರಸ್ತ ಬುಡಕಟ್ಟು ಸಮುದಾಯದ ಸುರೇಶ್

ಪ್ರಕರಣದ ಹಿನ್ನೆಲೆ : ಸುರೇಶ್ ಅವರ ಪತ್ನಿ ಮಲ್ಲಿಗೆ 2021ರಲ್ಲಿ ನಾಪತ್ತೆಯಾಗಿದ್ದರು. ಅವರನ್ನು ಸುರೇಶ್ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದ ಪೊಲೀಸರು, ಎಫ್‌ಐಆರ್ ದಾಖಲಿಸಿ ಬಂಧಿಸಿದ್ದರು. ಸುರೇಶ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಮೈಸೂರು ಜಿಲ್ಲಾ ನ್ಯಾಯಾಲಯ ಸುರೇಶ್ ಅವರಿಗೆ ಜೈಲು ಶಿಕ್ಷೆ ವಿಧಿಸಿತ್ತು. ಎರಡು ವರ್ಷ ಜೈಲಿನಲ್ಲಿದ್ದ ಸುರೇಶ್ 2023ರಲ್ಲಿ ಜಾಮೀನಿನ ಮೂಲಕ ಬಿಡುಗಡೆಗೊಂಡಿದ್ದರು.

ತಪ್ಪು ಮಾಡದೆ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್, ನಾಪತ್ತೆಯಾದ ತನ್ನ ಪತ್ನಿಯ ಕುರಿತು ಮಾಹಿತಿ ಕಲೆ ಹಾಕಲು ಮುಂದಾಗಿದ್ದರು. ಆಕೆಗಾಗಿ ಹುಡುಕಾಟ ನಡೆಸುತ್ತಿದ್ದರು. ಈ ನಡುವೆ 2025ರ ಏಪ್ರಿಲ್ 1ರಂದು ಸುರೇಶ್ ಅವರ ಪತ್ನಿ ಮಲ್ಲಿಗೆ ಮಡಿಕೇರಿಯ ಹೋಟೆಲ್ ಒಂದರಲ್ಲಿ ಪ್ರಿಯಕರ ಗಣೇಶ್ ಜೊತೆ ಪತ್ತೆಯಾಗಿದ್ದರು. ಈ ವಿಚಾರವನ್ನು ವಕೀಲರ ಮೂಲಕ ಸುರೇಶ್ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ನ್ಯಾಯಾಲಯದ ಆದೇಶದಂತೆ ಗಣೇಶ್‌ ಜೊತೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ದೇವಾಲಯಕ್ಕೆ ತೆರಳುತ್ತಿದ್ದಾಗ ಮಡಿಕೇರಿ ಪೊಲೀಸರು ಮಲ್ಲಿಗೆಯನ್ನು ವಶಕ್ಕೆ ಪಡೆದು, ಕುಶಾಲನಗರ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಮೈಸೂರು ಜಿಲ್ಲಾ ಸೆಷನ್ಸ್‌ ನ್ಯಾಯಾಲವು ಪ್ರಕರಣದ ಕುರಿತು 15 ದಿನಗಳೊಳಗೆ ವಿವರಣೆ ನೀಡುವಂತೆ ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚಿಸಿತ್ತು. ಪೊಲೀಸ್ ವರಿಷ್ಠಾಧಿಕಾರಿಯ ವಿಚಾರಣಾ ವರದಿಯನ್ನು ಬೈಲುಕುಪ್ಪೆ ವೃತ್ತ ನಿರೀಕ್ಷಕ ದೀಪಕ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಿ.ಜಿ.ಪ್ರಕಾಶ್, ಮಹೇಶ್ ಕುಮಾರ್, ಪ್ರಕಾಶ್ ಎತ್ತಿಮನಿ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು, ದೋಷಾರೋಪ ಪಟ್ಟಿಗೆ ಏನು ಆಧಾರವಿದೆ? ಎಂದು ಪ್ರಶ್ನಿಸಿದ್ದರು.

ಸುರೇಶ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಪಾಂಡು ಪೂಜಾರಿ ಅವರು, ‘ಪೊಲೀಸರು ಉದ್ದೇಶ ಪೂರ್ವಕವಾಗಿ ಬುಡಕಟ್ಟು ಸಮುದಾಯವನ್ನು ಗುರಿಯಾಗಿಸಿ ಸುಳ್ಳು ಕಥೆ ಸೃಷ್ಟಿಸಿದ್ದಾರೆ. ತನಿಖಾಧಿಕಾರಿಗಳ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಲು ನಿರ್ದೇಶನ ನೀಡಬೇಕು’ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ವಾದ ಆಲಿಸಿದ ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿ, ವಿಚಾರಣೆ ಮುಂದೂಡಿದ್ದರು. ಕಾಯ್ದಿರಿಸಿದ ತೀರ್ಪನ್ನು ಏಪ್ರಿಲ್ 23ರಂದು ಪ್ರಕಟಿಸಿದ್ದರು.

ಕುಶಾಲನಗರದ ಮಹಿಳೆ ನಾಪತ್ತೆ…ಮೈಸೂರಿನಲ್ಲಿ ಏಕೆ ಪ್ರಕರಣ?

2021ರ ಜುಲೈನಲ್ಲಿ ಕೊಡಗು ಜಿಲ್ಲೆ ಕುಶಾಲನಗರದ ಬಸವನಹಳ್ಳಿ ಹೊಸ ಬಡಾವಣೆಯ ನಿವಾಸಿ ಮಲ್ಲಿಗೆ ಕಾಣೆಯಾಗಿದ್ದಾರೆಂದು ಪ್ರಕರಣ ದಾಖಲಾಗಿತ್ತು. ಅದೇ ತಿಂಗಳ 18ರಂದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಠಾಣಾ ವ್ಯಾಪ್ತಿಯ ಶಾನುಭೋಗನಹಳ್ಳಿಯ ಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಅದು ಮಗಳದ್ದೇ ಎಂದು ಮಲ್ಲಿಗೆಯ ತಾಯಿ ಗುರುತಿಸಿದ್ದರು. ಪತಿ ಸುರೇಶ್‌ ಅವರನ್ನು ವಿಚಾರಣೆ ನಡೆಸಿದ ಪೊಲೀಸರು, ಆತ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿರುವುದಾಗಿ ತಿಳಿಸಿ, ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ತನ್ನ ಪತ್ನಿ ಕಾಣೆಯಾಗಿದ್ದಾರೆ ಎಂದು ಸುರೇಶ್ ಕುಶಾಲನಗರದಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಯಾರದ್ದೋ ಶವವನ್ನು ಸುರೇಶ್ ಅವರ ಪತ್ನಿಯದ್ದೇ ಎಂದು ಬಿಂಬಿಸಿದ್ದ ಮೈಸೂರಿನ ಬೆಟ್ಟದಪುರ ಪೊಲೀಸರು, ಸುರೇಶ್ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಸುರೇಶ್‌ಗೆ ನ್ಯಾಯ ದೊರಕಿಸಿಕೊಟ್ಟ ವಕೀಲ ಪಾಂಡು ಪೂಜಾರಿ

ಸುರೇಶ್‌ ಜೈಲಿನಲ್ಲಿದ್ದ ಸಮಯದಲ್ಲಿ ಅವರ ತಂದೆ ಗಾಂಧಿ ವಕೀಲ ಪಾಂಡು ಪೂಜಾರಿ ಅವರನ್ನು ಭೇಟಿಯಾಗಿ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿ ಮಗನನ್ನು ಜೈಲಿಗೆ ಹಾಕಿರುವ ಬಗ್ಗೆ ತಿಳಿಸಿದ್ದರು. ಪ್ರಕರಣ ಕೈಗೆತ್ತಿಕೊಂಡ ಪಾಂಡು ಪೂಜಾರಿ ಸುರೇಶ್‌ ಕುಟುಂಬದಿಂದ ಯಾವುದೇ ಶುಲ್ಕ ಪಡೆಯದೆ ವಾದ ಮಂಡಿಸಿ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ವರದಿಗಳು ಹೇಳಿತ್ತು.

ದೇವನಹಳ್ಳಿ ಚಲೋ! ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿ: ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ಪತ್ರಿಕಾ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...