Homeಮುಖಪುಟಉತ್ತರಪ್ರದೇಶ: ಮುಸ್ಲಿಂ ವೃದ್ಧನಿಗೆ ಉಗುಳು ನೆಕ್ಕುವಂತೆ ಬಲವಂತ

ಉತ್ತರಪ್ರದೇಶ: ಮುಸ್ಲಿಂ ವೃದ್ಧನಿಗೆ ಉಗುಳು ನೆಕ್ಕುವಂತೆ ಬಲವಂತ

- Advertisement -
- Advertisement -

ಉತ್ತರಪ್ರದೇಶದಲ್ಲಿ ಅಮಾನವೀಯ ಘಟನೆ ನಡೆದಿದೆ. ಗುಂಪೊಂದು ಮುಸ್ಲಿಂ ಸಮದಾಯದ ವೃದ್ಧ ವ್ಯಕ್ತಿಗೆ ಮುಖಕ್ಕೆ ಶಾಯಿ ಎರಚಿ ಕೊರಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದು, ಉಗುಳು ನೆಕ್ಕುವಂತೆ ಬಲವಂತ ಮಾಡಿದೆ.

ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ತಿಘ್ರಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೊಹಬ್ಬತ್ ಅಲಿ ಎಂಬ ವೃದ್ಧನಿಗೆ ಗುಂಪು ಚಿತ್ರಹಿಂಸೆಯನ್ನು ನೀಡಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ.

ಮೊಹಬ್ಬತ್ ಅಲಿ ಗ್ರಾಮದಲ್ಲಿ ಮಹಿಳೆಯೊಂದಿಗೆ ಮಾತನಾಡಿದ್ದಾರೆ ಎಂದು ಆರೋಪಿಸಿ ಗ್ರಾಮದ ಕಿಡಿಗೇಡಿಗಳ ಗುಂಪು ಅಮಾನವೀಯವಾಗಿ ವರ್ತಿಸಿದ್ದಾರೆ. ವೃದ್ಧನ ಮುಖಕ್ಕೆ ಶಾಹಿ ಎರಚಿ ಕೈಯ್ಯನ್ನು ಹಗ್ಗದಿಂದ ಕಟ್ಟಿ ಹಾಕಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕೊರಳಿಗೆ ಚಪ್ಪಲಿಯ ಹಾರವನ್ನು ಹಾಕಲಾಗಿದೆ. ಉಗುಳು ನೆಕ್ಕುವಂತೆ ಬಲವಂತ ಮಾಡಲಾಗಿದೆ.

ಘಟನೆ ಬಳಿಕ ಪೊಲೀಸ್ ಠಾಣೆಗೆ ತೆರಳಿದ್ದ ವೃದ್ಧ, ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ನಾಲ್ವರು ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.

ಘಟನೆಗೆ ಸಂಬಂಧಿಸಿ ಅಮನ್ ಪಾಂಡೆ, ಅಖಿಲೇಶ್ ಸಾಹ್ನಿ ಮತ್ತು ಘನಶ್ಯಾಮ್ ತಿವಾರಿ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಉದ್ದೇಶಪೂರ್ವಕ ಅವಮಾನ ಮತ್ತು ಕ್ರಿಮಿನಲ್ ಬೆದರಿಕೆ ಆರೋಪ ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಗೋಲ್ಹೌರಾ ಪೊಲೀಸ್ ಠಾಣೆ ಎಸ್‌ಎಚ್‌ಒ ಅಜಯನಾಥ್ ಕನೌಜಿಯಾ ತಿಳಿಸಿದ್ದಾರೆ.

ಘಟನೆಯ ಆಘಾತಕಾರಿ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ವ್ಯಾಪಕವಾಗಿ ಅಕ್ರೋಶ ವ್ಯಕ್ತವಾಗಿದೆ. ಅಮಾನವೀಯವಾಗಿ ವರ್ತಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ.

ಇದನ್ನು ಓದಿ: ವಕ್ಫ್ ಕಾಯಿದೆ ರದ್ದುಗೊಳಿಸಲು ಖಾಸಗಿ ಸದಸ್ಯ ಮಸೂದೆ ರಾಜ್ಯಸಭೆಯಲ್ಲಿ ಮಂಡನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...