Homeಮುಖಪುಟಕಳ್ಳತನ ಶಂಕೆಯಲ್ಲಿ ವ್ಯಕ್ತಿಯನ್ನು ಥಳಿಸಿ ಹತ್ಯೆಗೈದ ಗುಂಪು

ಕಳ್ಳತನ ಶಂಕೆಯಲ್ಲಿ ವ್ಯಕ್ತಿಯನ್ನು ಥಳಿಸಿ ಹತ್ಯೆಗೈದ ಗುಂಪು

- Advertisement -
- Advertisement -

ಟ್ರ್ಯಾಕ್ಟರ್ ಕದ್ದ ಶಂಕೆ ಮೇಲೆ ವ್ಯಕ್ತಿಯೊಬ್ಬನನ್ನು ಥಳಿಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಬಿಹಾರದ ಮುಝಪ್ಫರ್‌ಪುರದಲ್ಲಿ ನಡೆದಿದೆ.

ಬಿಹಾರದ ರಾಜಧಾನಿ ಪಾಟ್ನಾದಿಂದ ಸುಮಾರು 70 ಕಿ.ಮೀ ದೂರದ ಮುಝಫ್ಪರ್‌ಪುರದ ಉತ್ತರ ರಾಜ್‌ಖಂಡ್‌ ಪಂಚಾಯತ್ ವ್ಯಾಪ್ತಿಯ ಯೋಗಿಯ ಗ್ರಾಮದಿಂದ ಈ ಘಟನೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಶಂಭು ಸಾಹ್ನಿ ಎಂದು ಗುರುತಿಸಲಾಗಿದ್ದು, ಇವರೊಂದಿಗೆ ಇನ್ನೂ ಮೂವರು ಇದ್ದರು. ಅವರು ಸ್ಥಳದಿಂದ ಪರಾರಿಯಾಗಿದ್ದಾರೆ. ಸಿಕ್ಕಿಬಿದ್ದ ಶಂಭು ಸಾಹ್ನಿಗೆ ಸ್ಥಳೀಯರು ಮೈ ಕೊರೆಯುವ ಚಳಿಯಲ್ಲಿ ಕೈಕಾಲು ಕಟ್ಟಿಹಾಕಿ ರಾತ್ರಿಯಿಡೀ ಥಳಿಸಿದ್ದಾರೆ. ಇದರಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಎನ್‌ಡಿ ಟಿವಿ ವರದಿ ಮಾಡಿದೆ.

ಶಂಭು ಸಾಹ್ನಿ ಅವರು ಥಳಿತಕ್ಕೊಳಗಾದ ಮೇಲೆ ಕೈಗಳನ್ನು ಹಗ್ಗದಿಂದ ಕಟ್ಟಿ, ಕಾಲುಗಳನ್ನು ಹಗ್ಗದಿಂದ ಬಿಗಿದು ಟ್ರ್ಯಾಕ್ಟರ್‌ಗೆ ಕಟ್ಟಿದ ರೀತಿಯಲ್ಲಿ ಬಿದ್ದಿರುವ ಫೋಟೋ ವೈರಲ್ ಆಗಿದೆ. ಹಲ್ಲೆಗೊಳಗಾದ ಮೇಲೆ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ, ಅಷ್ಟರಲ್ಲಿ ಮೃತಪಟ್ಟಿದ್ದರು ಎಂದು ವರದಿಗಳು ವಿವರಿಸಿವೆ.

ಗ್ರಾಮಸ್ಥರ ಪ್ರಕಾರ, ಮೃತ ಶಂಭು ಸಾಹ್ನಿ ಮತ್ತು ಅವರ ಮೂವರು ಸ್ನೇಹಿತರು ರಾತ್ರಿ ಹೊತ್ತು ಟ್ರ್ಯಾಕ್ಟರ್ ಕದಿಯಲು ಹೋಗಿದ್ದರು. ಈ ವೇಳೆ ಭಾರೀ ಶಬ್ದ ಕೇಳಿ ನಿದ್ದೆಯಿಂದ ಎದ್ದ ಗ್ರಾಮಸ್ಥರು ಅವರನ್ನು ಹಿಂಬಾಲಿಸಿದ್ದಾರೆ. ಈ ವೇಳೆ ಮೂವರು ತಪ್ಪಿಸಿಕೊಂಡಿದ್ದು, ಶಂಭು ಸಿಕ್ಕಿಬಿದ್ದಿದ್ದಾರೆ.

ಘಟನೆ ಸಂಬಂಧ ಟ್ರ್ಯಾಕ್ಟರ್ ಮಾಲೀಕ ಗಂಗಾ ಸಾಹ್ನಿ ಹಾಗೈ ಅತನ ಸೋದರಳಿಯ ಪುಕಾರ್ ಸಾಹ್ನಿಯನ್ನು ಬಂಧಿಸಲಾಗಿದೆ. ಅವರನ್ನು ಪ್ರಕರಣದ ಪ್ರಮುಖ ಆರೋಪಿಗಳಾಗಿ ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಉಪವಾಸ ಕೊನೆಗೊಳಿಸುವಂತೆ ರೈತ ನಾಯಕ ದಲ್ಲೆವಾಲ್ ಅವರಲ್ಲಿ ಪಂಜಾಬ್ ಡಿಜಿಪಿ-ಎಂಎಚ್‌ಎ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...