Homeಮುಖಪುಟಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

- Advertisement -
- Advertisement -

ಮಧ್ಯಪ್ರದೇಶದ ಗುನಾ ಜಿಲ್ಲೆಯಿಂದ ಬುಡಕಟ್ಟು ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ಅಪಹರಿಸಿ ರಾಜಸ್ಥಾನಕ್ಕೆ ಕರೆದೊಯ್ದು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ, ಮಹಿಳೆಯರ ಉಡುಪಿನಲ್ಲಿ ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆ ನಡೆದಿದೆ.

ಸಂತ್ರಸ್ತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಸಂತ್ರಸ್ತನ ಕುಟುಂಬಸ್ಥರನ್ನು ಒಳಗೊಂಡ ಗುಂಪು ಈ ಕೃತ್ಯವನ್ನು ನಡೆಸಿದೆ. ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹಾಕಿ, ಪಾದರಕ್ಷೆಗಳ ಮಾಲೆಯನ್ನು ತೊಡುವಂತೆ ಬಲವಂತ ಮಾಡಲಾಗಿದೆ. ಮಹೇಂದ್ರ ಸಿಂಗ್ ಎಂಬ ಸಂತ್ರಸ್ತ ಆರಂಭದಲ್ಲಿ ತನ್ನ ದೂರನ್ನು ದಾಖಲಿಸಲಿಲ್ಲ. ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಯ ಗಮನಕ್ಕೆ ತಂದ ನಂತರ ಫತೇಘರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಸಿನ್ಹಾ, ಈ ಘಟನೆಯು ಮೇ 22ರಂದು ನಡೆದಿದ್ದು, ರಾಜಸ್ಥಾನದಲ್ಲಿ ಹಲ್ಲೆ ನಡೆದಿದ್ದರೂ, ಈ ಬಗ್ಗೆ ಸೋಮವಾರ ತಡರಾತ್ರಿ ಗುಣಾದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ, ಏಕೆಂದರೆ ಅಲ್ಲಿಂದ ಅವರನ್ನು ಅಪಹರಿಸಲಾಗಿದೆ ಎಂದು ತಿಳಿಸಿದ್ದಾರೆ.

ದೂರಿನ ಪ್ರಕಾರ ಆರೋಪಿಗಳು ಚಿತ್ರಹಿಂಸೆಯ ವೀಡಿಯೊವನ್ನು ಚಿತ್ರೀಕರಿಸಿ ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಇದಲ್ಲದೆ ಸಂತ್ರಸ್ತನನ್ನು ರಾಜಸ್ಥಾನದ ವಿವಿಧ ಸ್ಥಳಗಳಿಗೆ ಕರೆದೊಯ್ಯಲಾಗಿತ್ತು. ಆತನನ್ನು ಬಿಡುಗಡೆ ಮಾಡಲು ಅಪಹರಣಕಾರರು ಆತನ ತಂದೆ ಫೂಲ್ ಸಿಂಗ್ ಅವರಿಂದ 25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಫೂಲ್ ಸಿಂಗ್ ಪೊಲೀಸರನ್ನು ಸಂಪರ್ಕಿಸಿದಾಗ, ಅವರು ಕ್ರಮ ಕೈಗೊಳ್ಳುವ ಬದಲು ಹಣ ನೀಡುವಂತೆ ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ನ್ಯಾಯಕ್ಕಾಗಿ ಸಂತ್ರಸ್ತ ಕುಟುಂಬ ಹೈಕೋರ್ಟ್ ಮೊರೆ ಹೋಗಲು ಮುಂದಾಗಿದೆ.

ಆರೋಪಿಗಳಾದ ಸೌದನ್ ಸಿಂಗ್, ಗುಮಾನ್ ಸಿಂಗ್ ಮತ್ತು ಓಂಕಾರ್ ಸೇರಿಂದತೆ 10-12 ಮಂದಿಯಿದ್ದ ಗುಂಪು ನನ್ನನ್ನು ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಅವರು ನನ್ನ ತಲೆಯನ್ನು ಬೋಳಿಸಿ, ಮೂತ್ರ ಕುಡಿಯುವಂತೆ ಬಲವಂತ ಮಾಡಿದರು, ಪಾದರಕ್ಷೆಯಿಂದ ಮಾಡಿದ ಮಾಲೆಯನ್ನು ಧರಿಸುವಂತೆ ಮಾಡಿದರು ಮತ್ತು ನನ್ನ ಮುಖಕ್ಕೆ ಕಪ್ಪು ಬಣ್ಣವನ್ನು ಬಳಿದಿದ್ದಾರೆ. ಬಳಿಕ ಅವರು ನನ್ನನ್ನು ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿದರು. ನಂತರ ನನ್ನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ಆದ್ದರಿಂದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಆತ್ಮಹತ್ಯೆ ಹೊರತು ನನಗೆ ಬೇರೆ ದಾರಿ ಕಾಣಿಸುತ್ತಿಲ್ಲ ಎಂದು ದೂರುದಾರ ಹೇಳಿದ್ದಾರೆ.

ವ್ಯಕ್ತಿಯನ್ನು ಜೀಪಿನಲ್ಲಿ ಅಪಹರಿಸಿ, ಥಳಿಸಿ, ಚಪ್ಪಲಿ ಹಾರವನ್ನು ಹಾಕಿ, ಮಹಿಳೆಯ ಬಟ್ಟೆಗಳನ್ನು ಧರಿಸುವಂತೆ ಮಾಡಿದರು ಮತ್ತು ಮೂತ್ರ ಕುಡಿಸುವಂತೆ ಒತ್ತಾಯಿಸಿದರು. ಆರೋಪಿಗಳು ಮೂರು ದಿನಗಳಲ್ಲಿ 20 ಲಕ್ಷ ರೂ.ಗಳನ್ನು ಪಾವತಿಸುವ ಷರತ್ತಿನ ಮೇಲೆ ಕೊನೆಗೆ ವ್ಯಕ್ತಿಯನ್ನು ಬಿಡುಗಡೆ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೀಗ ಪ್ರಕರಣಕ್ಕೆ ಸಂಬಂಧಿಸಿ 7 ಮಂದಿ ಆರೋಪಿಗಳ ವಿರುದ್ಧ 506 (ಕ್ರಿಮಿನಲ್ ಬೆದರಿಕೆ), 365 (ಅಪಹರಣ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಪಿ ಸಿಂಗ್ ಹೇಳಿದ್ದಾರೆ.

ಇದನ್ನು ಓದಿ: ‘ಆಲ್ ಐಸ್ ಆನ್ ರಫಾ’: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...