Homeಮುಖಪುಟಪಂಜಾಬ್ : ಶಿರೋಮಣಿ ಅಕಾಲಿ ದಳದ ನಾಯಕ ಸುಖಬೀರ್ ಸಿಂಗ್ ಬಾದಲ್‌ ಮೇಲೆ ಗುಂಡಿನ ದಾಳಿ

ಪಂಜಾಬ್ : ಶಿರೋಮಣಿ ಅಕಾಲಿ ದಳದ ನಾಯಕ ಸುಖಬೀರ್ ಸಿಂಗ್ ಬಾದಲ್‌ ಮೇಲೆ ಗುಂಡಿನ ದಾಳಿ

- Advertisement -
- Advertisement -

ಪಂಜಾಬ್‌ನ ಅಮೃತಸರದ ಗೋಲ್ಡನ್ ಟೆಂಪಲ್ ಪ್ರವೇಶ ದ್ವಾರದಲ್ಲಿ ಶಿರೋಮಣಿ ಅಕಾಲಿದಳದ (ಎಸ್‌ಎಡಿ) ನಾಯಕ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿರುವ ಘಟನೆ ಇಂದು (ಡಿ.4) ಬೆಳಿಗ್ಗೆ ನಡೆದಿದೆ.

ತಕ್ಷಣ ಸ್ಥಳದಲ್ಲಿದ್ದ ಜನರು ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಪೊಲೀಸರ ಪ್ರಕಾರ, ದಾಳಿ ನಡೆಸಿದ ವ್ಯಕ್ತಿಯನ್ನು ನಾರಾಯಣ ಸಿಂಗ್ ಚೌರಾ ಎಂದು ಗುರುತಿಸಲಾಗಿದ್ದು, ಆತನನ್ನು ತಕ್ಷಣ ವಶಕ್ಕೆ ತೆಗೆದುಕೊಳ್ಳಲಾಗಿದೆ. ದಾಳಿಯ ಉದ್ದೇಶ ಇನ್ನೂ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬಾದಲ್‌ ಅವರು ಸ್ವರ್ಣ ಮಂದಿರದ ಪ್ರವೇಶ ದ್ವಾರದಲ್ಲಿ ನೀಲಿ ಸಮವಸ್ತ್ರ ಧರಿಸಿ ಗಾಲಿ ಕುರ್ಚಿಯಲ್ಲಿ ಕುಳಿತುಕೊಂಡು ಕುತ್ತಿಗೆಗೆ ಫಲಕ ನೇತುಹಾಕಿ, ಕೈಯಲ್ಲಿ ಈಟಿ ಹಿಡಿದುಕೊಂಡು ‘ತನ್ಖಾ’ ಎಂದು ಕರೆಯಲ್ಪಡುವ ಧಾರ್ಮಿಕ ಶಿಕ್ಷೆಯನ್ನು ಅನುಭವಿಸುತ್ತಿದ್ದರು.

ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿಯಾಗಿರುವ ಸುಖ್‌ಬೀರ್‌ ಸಿಂಗ್‌ ಬಾದಲ್‌ ಅವರು ನಿನ್ನೆಯೂ (ಮಂಗಳವಾರ) ಸ್ವರ್ಣ ಮಂದಿರದ ಮುಂಭಾಗದಲ್ಲಿ ಸೇವಾದಾರನಾಗಿ (ಸೇವಕ) ಕರ್ತವ್ಯ ನೆರವೇರಿಸಿದ್ದರು.

ಅಕಾಲಿದಳದ ಮತ್ತೊಬ್ಬ ಹಿರಿಯ ನಾಯಕ ಸುಖ್‌ದೇವ್‌ ಸಿಂಗ್‌ ಢೀಂಡಸಾ ಅವರೂ, ಬಾದಲ್ ಜೊತೆ ಸೇವಾದಾರನಾಗಿ ಶಿಕ್ಷೆ ಅನುಭವಿಸುತ್ತಿದ್ದರು. ಮಾಜಿ ಸಚಿವ ವಿಕ್ರಂ ಸಿಂಗ್‌ ಮಜೀಠಿಯಾ ಅವರು ನಿನ್ನೆ ಸಮುದಾಯ ಭವನದಲ್ಲಿ ಪಾತ್ರೆಗಳನ್ನು ತೊಳೆದಿದ್ದರು.

ಪಂಜಾಬ್‌ನಲ್ಲಿ 2007–2017ರ ನಡುವೆ ‘ಎಸ್‌ಎಡಿ ಸರ್ಕಾರ’ದ ಅವಧಿಯಲ್ಲಿ ಪ್ರಮಾದಗಳನ್ನು ಎಸಗಿದ್ದಕ್ಕಾಗಿ, ಸುಖ್‌ಬೀರ್‌ ಸಿಂಗ್ ಬಾದಲ್ ಹಾಗೂ ಇತರ ನಾಯಕರಿಗೆ ಅಕಾಲ್‌ ತಖ್ತ್‌ನ ಜಾಥೇದಾರರು (ಸಿಖ್‌ ಧರ್ಮದ ಪರಮೋಚ್ಚ ಗುರು) ಸೋಮವಾರ ತನ್ಖಾ(ಧಾರ್ಮಿಕ ಶಿಕ್ಷೆ) ಪ್ರಕಟಿಸಿದ್ದರು.

ಶಿಕ್ಷೆ ಅನುಸಾರ, ಸುಖ್‌ಬೀರ್‌ ಹಾಗೂ ಎಸ್‌ಎಡಿಯ ಇತರ ನಾಯಕರು ಸ್ವರ್ಣಮಂದಿರದಲ್ಲಿ ಸೇವಾದಾರನಾಗಿ ಕೆಲಸ ಮಾಡಬೇಕು. ಒಂದು ಗಂಟೆ ಕೀರ್ತನೆಗಳನ್ನು ಆಲಿಸಬೇಕು, ಪಾತ್ರೆಗಳು ಹಾಗೂ ಭಕ್ತರ ಬೂಟುಗಳನ್ನು ಸ್ವಚ್ಛಗೊಳಿಸಬೇಕೆಂದು ಅಕಾಲ್‌ ತಖ್ತ್‌ನ ಜಾಥೇದಾರ ಜ್ಞಾನಿ ರಘ್‌ಬೀರ್‌ ಸಿಂಗ್‌ ಅವರು ಸೋಮವಾರ ಸೂಚಿಸಿದ್ದರು.

ಇದನ್ನೂ ಓದಿ : ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...