Homeಮುಖಪುಟಬಲವಂತದ ದುಡಿಮೆಗೆ ನಿರಾಕರಣೆ : ಸಾರ್ವಜನಿಕವಾಗಿ ವ್ಯಕ್ತಿಯ ತಲೆ ಬೋಳಿಸಿ ದೌರ್ಜನ್ಯ

ಬಲವಂತದ ದುಡಿಮೆಗೆ ನಿರಾಕರಣೆ : ಸಾರ್ವಜನಿಕವಾಗಿ ವ್ಯಕ್ತಿಯ ತಲೆ ಬೋಳಿಸಿ ದೌರ್ಜನ್ಯ

- Advertisement -
- Advertisement -

ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರ ತಲೆಯನ್ನು ಸಾರ್ವಜನಿಕ ಸ್ಥಳದಲ್ಲಿ ಬಲವಂತವಾಗಿ ಬೋಳಿಸಿ ಅವಮಾನಿಸುವ ಮೂಲಕ ದೌರ್ಜನ್ಯವೆಸಗಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಾಂಗ್ರೆಸ್ ಸೇರಿದಂತೆ ಅನೇಕರು ವಿಡಿಯೋ ಹಂಚಿಕೊಂಡು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿಗಳ ಪ್ರಕಾರ, ಉತ್ತರ ಪ್ರದೇಶದ ಝಾನ್ಸಿಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಪ್ರಭಾವಿ ಕುಟುಂಬವೊಂದು ತಮ್ಮ ಪ್ರಾಣಿಗಳಿಗೆ ಆಹಾರ, ನೀರು ಕೊಡುವುದು ಸೇರಿದಂತೆ ಅವುಗಳನ್ನು ನೋಡಿಕೊಳ್ಳಲು ಸಂತ್ರಸ್ತ ವ್ಯಕ್ತಿಗೆ ಹೇಳಿತ್ತು, ಅವರು ಅದಕ್ಕೆ ಒಪ್ಪಿರಲಿಲ್ಲ. ಈ ಕಾರಣಕ್ಕೆ ತಲೆ ಬೋಳಿಸಿ ದೌರ್ಜನ್ಯ ನಡೆಸಲಾಗಿದೆ.

ಪತ್ರಕರ್ತ ರಣವಿಜಯ್ ಸಿಂಗ್ ಎಂಬವರು ಮೊದಲು ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು. ಆ ಬಳಿಕ ಅದು ವೈರಲ್ ಆಗಿದೆ. ರಣವಿಜಯ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಝಾನ್ಸಿ ಪೊಲೀಸರು ” ಇದು ಸಿಪ್ರಿ ಬಝಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ. ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕೆಲ ವ್ಯಕ್ತಿಗಳು ಕ್ಷುಲ್ಲಕ ಕಾರಣಕ್ಕೆ ಅಕ್ಟೋಬರ್ 22ರಂದು ಮಧ್ಯಾಹ್ನ 2.30ರ ಸುಮಾರಿಗೆ ನನಗೆ ಥಳಿಸಿ ದೌರ್ಜನ್ಯ ನಡೆಸಿದ್ದು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಕ್ಟೋಬರ್ 23ರಂದು ಬಾಬಾ ಎಂಬವರು ದೂರು ನೀಡಿದ್ದಾರೆ. ದೂರಿನ ಅನ್ವಯ ನಾಲ್ಕು ಮಂದಿಯ ವಿರುದ್ದ ಸಂಬಂಧಿತ ಸೆಕ್ಷನ್‌ಗಳಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಅವರ ಶೀಘ್ರ ಬಂಧನಕ್ಕೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ಸಾಮಾಜಿಕ ಜಾಲತಾಣಗಳ ಮೂಲಕ ದೌರ್ಜನ್ಯದ ವಿಡಿಯೋ ಬೆಳಕಿಗೆ ಬಂದಿದೆ. ಅದರಲ್ಲಿ ದೂರುದಾರನ ತಲೆ ಬೋಳಿಸಿರುವುದು ಕಂಡು ಬಂದಿದೆ. ಅದನ್ನೂ ಪರಿಗಣಿಸಿ ಈಗಾಗಲೇ ದಾಖಲಾದ ಪ್ರಕರಣದಲ್ಲಿ ಸೇರಿಸಲಾಗುವುದು. ಸೂಕ್ತ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕಾಂಗ್ರೆಸ್ “ಉತ್ತರ ಪ್ರದೇಶದ ಝಾನ್ಸಿಯಿಂದ ವಿಡಿಯೋವೊಂದು ವೈರಲ್ ಆಗುತ್ತಿದೆ. ಅದರಲ್ಲಿ ವ್ಯಕ್ತಿಯೊಬ್ಬರ ತಲೆಯನ್ನು ಬಲವಂತವಾಗಿ ಬೋಳಿಸುತ್ತಿರುವುದು ಕಾಣಬಹುದು. ವಿಡಿಯೋದಲ್ಲಿರುವ ವ್ಯಕ್ತಿ ಮಾಡಿರುವ ತಪ್ಪೆಂದರೆ ಬಲವಂತದ ದುಡಿಮೆಗೆ ನಿರಾಕರಿಸಿರುವುದು. ಇಷ್ಟಕ್ಕೆ ದುರಹಂಕಾರಿಗಳು ಅವರಿಗೆ ಹೊಡೆದು, ಮರಕ್ಕೆ ತಲೆಕೆಳಗಾಗಿ ನೇತುಹಾಕಿ, ಅವರ ಕೂದಲನ್ನು ಕತ್ತರಿಸಿ ಗ್ರಾಮದಲ್ಲಿ ಮೆರವಣಿಗೆ ನಡೆಸಿದ್ದಾರೆ. ಬಡ ಮತ್ತು ಅಸಹಾಯಕ ಕಾರ್ಮಿಕರ ಘನತೆ ಮತ್ತು ಸ್ವಾಭಿಮಾನವನ್ನು ಬಹಿರಂಗವಾಗಿ ತುಳಿಯುವ ಬಿಜೆಪಿಯ ಜಂಗಲ್ ರಾಜ್‌ನ ಹೃದಯವಿದ್ರಾವಕ ಚಿತ್ರಣ ಇದಾಗಿದೆ. ಅಲ್ಲಿ ಪೊಲೀಸರು, ಆಡಳಿತ ಮತ್ತು ಸರ್ಕಾರ ಕೇವಲ ರೌಡಿಗಳ ಮತ್ತು ಅಪರಾಧಿಗಳ ರಕ್ಷಣೆಗಾಗಿ ಕೆಲಸ ಮಾಡುತ್ತದೆ. ಆದರೆ, ಬಡವರ ಬಗ್ಗೆ ಕೇಳುವುದೇ ಇಲ್ಲ. ನಾಚಿಕೆಗೇಡು” ಎಂದು ಬರೆದುಕೊಂಡಿದೆ.

ಇದನ್ನೂ ಓದಿ : ಕಡಪ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಅಧಿಕಾರಿ; ಪೋಕ್ಸೋ ಕೇಸ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...