Homeಕರ್ನಾಟಕಶಾಸಕ‌ ಡಾ. ಅಜಯಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ

ಶಾಸಕ‌ ಡಾ. ಅಜಯಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಜೇವರ್ಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ‌ ಡಾ. ಅಜಯಸಿಂಗ್ ಅವರ ಮನೆಯ ಆವರಣದಲ್ಲಿ ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಪಟ್ಟಣಾ ಗ್ರಾಮದ ನಿವಾಸಿ ದೇವಪ್ಪ (33) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ಕಲಬುರಗಿಯ ಶರಣ ನಗರ ಬಡಾವಣೆಯಲ್ಲಿರುವ ಶಾಸಕರ ಮೆನೆಯ ಆವರಣದಲ್ಲಿ ಈ ಘಟನೆ ನಡೆದಿದೆ.

ಬುಧವಾರ ತಡ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಗುರುವಾರ ಬೆಳಿಗ್ಗೆ ಅಜಯ್ ಸಿಂಗ್ ಅವರ ಮನೆಯ ಅಡುಗೆ ತಯಾರಕ ಮರದಲ್ಲಿನ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶಾಸಕ ಅಜಯ್​ ಸಿಂಗ್​ ಅವರ ಮನೆಯ ಆವರಣದಲ್ಲಿ ದೇವಪ್ಪ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? ಶಾಸಕರಿಗೆ ಮತ್ತು ಮೃತರಿಗೆ ಇರುವ ಸಂಬಂಧಗಳೇನು ಎಂಬ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.

ದೇವಪ್ಪ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬ್ರಹ್ಮಪುರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

ಡಾ. ಅಜಯಸಿಂಗ್ ಅವರು  ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷರು ಕೂಡ ಆಗಿದ್ದಾರೆ.

ಇದನ್ನು ಓದಿ: ರಾಮನಗರ: ಮೈಮೇಲೆ ಮಲ ಸುರಿದುಕೊಂಡು  ಪೌರಕಾರ್ಮಿಕರ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ಪಿಎ ಹಲ್ಲೆ ಪ್ರಕರಣ: ಸ್ವಾತಿ ಮುಖದ ಮೇಲೆ ಆಂತರಿಕ ಗಾಯ; ಹೇಳಿಕೆ ಪಡೆದ...

0
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್‌ನಿಂದ ಹಲ್ಲೆಗೆ ಒಳಗಾಗಿರುವ, ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ, ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮುಖದ ಮೇಲೆ ಆಂತರಿಕ ಗಾಯಗಳಾಗಿರುವುದು ವೈದ್ಯಕೀಯ...