Homeಕರ್ನಾಟಕಬೆಂಗಳೂರು | ಮಹಿಳೆಗೆ ಆ್ಯಸಿಡ್ ಎರಚುವ ಬೆದರಿಕೆ : ಆರೋಪಿ ಕೆಲಸದಿಂದ ವಜಾ, ಪ್ರಕರಣ ದಾಖಲು

ಬೆಂಗಳೂರು | ಮಹಿಳೆಗೆ ಆ್ಯಸಿಡ್ ಎರಚುವ ಬೆದರಿಕೆ : ಆರೋಪಿ ಕೆಲಸದಿಂದ ವಜಾ, ಪ್ರಕರಣ ದಾಖಲು

- Advertisement -
- Advertisement -

ಮಹಿಳೆಯೊಬ್ಬರಿಗೆ ಆ್ಯಸಿಡ್ ಎರಚುವುದಾಗಿ ಬೆದರಿಕೆ ಹಾಕಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ಕಂಪನಿಯಿಂದ ವಜಾಗೊಳಿಸಲಾಗಿದ್ದು, ಆತನ ವಿರುದ್ದ ದೂರು ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವಸ್ತ್ರಧಾರಣೆಯ ವಿಷಯವನ್ನು ಮುಂದಿಟ್ಟಕೊಂಡು ನಿಕಿತ್ ಶೆಟ್ಟಿ ಎಂಬಾತ ಪತ್ರಕರ್ತ ಶಹಬಾಝ್ ಅನ್ಸಾರ್ ಎಂಬವರ ಪತ್ನಿಗೆ ಆ್ಯಸಿಡ್ ಎರಚುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಿದ್ದ.

ಈ ವಿಷಯವನ್ನು ಸ್ಕ್ರೀನ್‌ ಶಾಟ್ ಸಹಿತ ಎಕ್ಸ್‌ನಲ್ಲಿ ಬರೆದುಕೊಂಡಿದ್ದ ಪತ್ರಕರ್ತ ಶಹಬಾಝ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಟ್ಯಾಗ್ ಮಾಡಿದ್ದರು. ಆತನ ವಿರುದ್ದ ತಕ್ಷಣ ಕ್ರಮ ಕೈಗೊಂಡು ಯಾವುದೇ ದುರ್ಘಟನೆ ನಡೆಯದಂತೆ ತಡೆಯಿರಿ ಎಂದು ಕೋರಿದ್ದರು.

ಶಹಬಾಝ್ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಪೊಲೀಸರು, ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಸೂಚಿಸಿದ್ದರು. ಅನೇಕ ಜನರು ಶಹಬಾಝ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿ ನಿಕಿತ್ ಶೆಟ್ಟಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು. ಆತ ಕೆಲಸ ಮಾಡುತ್ತಿರುವ ಕಂಪನಿಯಿಂದ ತೆಗೆದು ಹಾಕುವಂತೆ ಆಗ್ರಹಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಹೆಸರು ಉಲ್ಲೇಖಿಸಿ ಚರ್ಚೆ ಹೆಚ್ಚಾಗುತ್ತಿದ್ದಂತೆ ಇನ್‌ಸ್ಟಾಗ್ರಾಂ ಮೂಲಕ ಪ್ರತಿಕ್ರಿಯಿಸಿರುವ ಇಟಿಯೋಸ್ ಸರ್ವಿಸಸ್ ಎಂಬ ನಿಕಿತ್ ಶೆಟ್ಟಿ ಕೆಲಸ ಮಾಡುತ್ತಿದ್ದ ಕಂಪನಿ, ಆತನನ್ನು ಕೆಲಸದಿಂದ ವಜಾಗೊಳಿಸಿ ಪೊಲೀಸ್ ದೂರು ದಾಖಲಿಸಿರುವುದಾಗಿ ತಿಳಿಸಿದೆ.

ಕಂಪನಿಯ ಕ್ಷಿಪ್ರ ಕ್ರಮಕ್ಕೆ ಅನೇಕರು ಧನ್ಯವಾದ ಹೇಳಿದ್ದಾರೆ. ಈ ಕುರಿತು ಬರೆದುಕೊಂಡಿರುವ ಶಹಬಾಝ್ ” “ನನ್ನ ಪತ್ನಿ ಖ್ಯಾತಿ ಶ್ರೀಗೆ ಆ್ಯಸಿಡ್ ದಾಳಿಯ ಬೆದರಿಕೆ ಹಾಕಿದ್ದ ವ್ಯಕ್ತಿ ತನ್ನ ಕೆಲಸವನ್ನು ಕಳೆದುಕೊಂಡಿದ್ದಾನೆ. ಕಂಪನಿಯು ತಕ್ಷಣ ಕ್ರಮಕೈಗೊಂಡು ಆತನನ್ನು ವಜಾಗೊಳಿಸಿದೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಅವರು ಹೇಳಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 124 ಆ್ಯಸಿಡ್ ಸೇರಿದಂತೆ ಅದಕ್ಕೆ ಸಮನಾದ ದಾಳಿಯ ಅಪರಾಧದ ಶಿಕ್ಷೆಯ ಬಗ್ಗೆ ವಿವರಿಸುತ್ತದೆ. ಆ್ಯಸಿಡ್ ದಾಳಿಯ ಮೂಲಕ ಯಾವುದೇ ವ್ಯಕ್ತಿಗೆ ಶಾಶ್ವತ ಅಥವಾ ತೀವ್ರವಾದ ಹಾನಿ ಉಂಟು ಮಾಡಿದರೆ, ಅಪರಾಧಿಗೆ ಬಲಿಪಶುವಿನ ವೈದ್ಯಕೀಯ ವೆಚ್ಚ ಸರಿದೂಗಿಸಲು ದಂಡ ಮತ್ತು ಜೀವಾವಧಿ ಶಿಕ್ಷೆ ವಿಧಿಸಬಹುದು.

ಇದನ್ನೂ ಓದಿ : ಬಿಜೆಪಿ ಆಡಳಿತಾವಧಿಯ ಕೋವಿಡ್-19 ವಂಚನೆ; ಎಸ್‌ಐಟಿ ತನಿಖೆಗೆ ಸಚಿವ ಸಂಪುಟ ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...