Homeಮುಖಪುಟಟಿಕೆಟ್‌ಗೆ ಹಣವಿಲ್ಲದೆ ರೈಲಿನಡಿ ಕುಳಿತು 250 ಕಿ.ಮೀ ಪ್ರಯಾಣಿಸಿದ ವ್ಯಕ್ತಿ : ರೈಲ್ವೆ ಇಲಾಖೆ ಹೇಳಿದ್ದೇನು?

ಟಿಕೆಟ್‌ಗೆ ಹಣವಿಲ್ಲದೆ ರೈಲಿನಡಿ ಕುಳಿತು 250 ಕಿ.ಮೀ ಪ್ರಯಾಣಿಸಿದ ವ್ಯಕ್ತಿ : ರೈಲ್ವೆ ಇಲಾಖೆ ಹೇಳಿದ್ದೇನು?

- Advertisement -
- Advertisement -

ಟಿಕೆಟ್‌ ಪಡೆಯಲು ಹಣವಿಲ್ಲದ ಕಾರಣ ವ್ಯಕ್ತಿಯೊಬ್ಬರು ರೈಲಿನ ಬೋಗಿಯಡಿ ಅವಿತುಕೊಂಡು ಸುಮಾರು 250 ಕಿಲೋ ಮೀಟರ್ ದೂರ ಪ್ರಯಾಣಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ ಎಂದು ನಿನ್ನೆ (ಡಿ.27) ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಇದನ್ನು ರೈಲ್ವೆ ಇಲಾಖೆ ಅಲ್ಲಗಳೆದಿದೆ.

ಮಧ್ಯಪ್ರದೇಶದ ನರ್ಮಾದಾಪುರ್‌ ಜಿಲ್ಲೆಯ ನಗರವಾದ ಇಟಾರ್ಸಿಯಿಂದ ಜಬಲ್ಪುರ್‌ವರೆಗೆ 250 ಕಿ.ಮೀ ದೂರ ಎಕ್ಸ್‌ಪ್ರೆಸ್ ರೈಲಿನ ಬೋಗಿಯಡಿ ಚಕ್ರಗಳ (ವೀಲ್‌ಗಳ) ನಡುವೆ ವ್ಯಕ್ತಿ ಪ್ರಯಾಣ ಮಾಡಿದ್ದಾರೆ. ಜಬಲ್ಪುರ ನಿಲ್ದಾಣದಲ್ಲಿ ಅವರು ರೈಲಿನಡಿಯಿಂದ ಹೊರ ಬಂದಾಗ ವಿಷಯ ಗೊತ್ತಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿತ್ತು.

ಅದಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿತ್ತು. ಡಿಸೆಂಬರ್ 24ರಂದು ದಾನಪುರ್‌ ಎಕ್ಸ್‌ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿತ್ತು.

ಆದರೆ, ಮಾಧ್ಯಮ ವರದಿಗಳು ಸುಳ್ಳು ಎಂದು ರೈಲ್ವೆ ಇಲಾಖೆ ಹೇಳಿದೆ. ರೈಲಿನ ಆಕ್ಸೆಲ್ ನಿರಂತರ ವೇಗವಾಗಿ ತಿರುಗುತ್ತಿರುತ್ತದೆ. ಹೀಗಿರುವಾಗ ವ್ಯಕ್ತಿಯೊಬ್ಬ ಚಕ್ರಗಳು ಮತ್ತು ಆಕ್ಸೆಲ್ ನಡುವೆ ಕುಳಿತು ಪ್ರಯಾಣಿಸುವುದು ಅಸಾಧ್ಯ. ಚಕ್ರಗಳ ನಡುವೆ ಕುಳಿತು ಪ್ರಯಾಣಿಸಿದ್ದಾರೆ ಎನ್ನಲಾದ ವ್ಯಕ್ತಿ ‘ಮಾನಸಿಕ ಅಸ್ವಸ್ಥ’ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಕೇಂದ್ರ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಪ್ರೆಸ್ ಇನ್ಫರ್ಮೇಶನ್ ಬ್ಯೂರೋ (ಪಿಐಬಿ) ಕೂಡ ಎಕ್ಸ್‌ನಲ್ಲಿ ಫ್ಯಾಕ್ಟ್‌ಚೆಕ್ ಪೋಸ್ಟ್‌ ಮಾಡಿ ‘ಮಾಧ್ಯಮಗಳಲ್ಲಿ ಬಂದಿರುವ ವರದಿ’ ದಾರಿ ತಪ್ಪಿಸುವಂತದ್ದು ಎಂದು ಹೇಳಿದೆ.

ವರದಿಗಳ ಪ್ರಕಾರ, ಜಬಲ್ಪುರ ನಿಲ್ದಾಣದಲ್ಲಿ ರೈಲು ನಿಂತಾಗ ವ್ಯಕ್ತಿಯೊಬ್ಬರು ಬೋಗಿಯ ಅಡಿಯಿಂದ ಹೊರ ಬಂದಿದ್ದಾರೆ. ಜನರು ಅವರನ್ನು ಮಾತನಾಡಿಸಿದಾಗ, ಟಿಕೆಟ್ ಪಡೆಯಲು ದುಡ್ಡಿಲ್ಲದ ಕಾರಣ ತಾನು 250 ಕಿ.ಮೀ ದೂರದ ಇಟಾರ್ಸಿಯಿಂದ ಬೋಗಿಯ ಅಡಿ ಕುಳಿತು ಬಂದಿರುವುದಾಗಿ ಹೇಳಿದ್ದಾರೆ. ತಕ್ಷಣ ಆ ವ್ಯಕ್ತಿಯನ್ನು ರೈಲ್ವೆ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತಿದ್ದು, ಅಜಾಗರೂಕತೆಯಿಂದ ವರ್ತಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಮಧ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ತೀವ್ರಗೊಂಡ ಬಿಹಾರ ನಾಗರಿಕ ಸೇವಾ ಪರೀಕ್ಷೆಯ ವಿರುದ್ಧದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೆಸರುಗಳನ್ನು ತೆಗೆದುಹಾಕುವುದು ಕಳ್ಳತನವಲ್ಲ’; ಎಸ್‌ಐಆರ್ ಬಗ್ಗೆ ಪ್ರತಿಪಕ್ಷಗಳು ಗೊಂದಲ ಹರಡುತ್ತಿವೆ: ಸಂಬಿತ್ ಪಾತ್ರ

ವಾರಾಣಸಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಪುರಿ ಸಂಸದ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ...

ರಾಮಮಂದಿರ ದೇಣಿಗೆ ದುರುಪಯೋಗ: ವಿಚಾರಣೆಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಬಿಟ್ಟ ಸುಪ್ರೀಂ: ಆರೋಪಗಳ ಅರ್ಹತೆ ಬಗ್ಗೆ ಪ್ರತಿಕ್ರಿಯೆ ಇಲ್ಲ

ನವದೆಹಲಿ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ದುರುಪಯೋಗವಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಪಟ್ಟಿ...

ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ಜನಪರ ಸಂಘಟನೆಗಳ ಒತ್ತಾಯ

ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿರುವ ಎಸ್‌ಐಆರ್‌ (ಎಸ್‌ಐಆರ್) ಅಂತಿಮ ಮತದಾರರ ಪಟ್ಟಿಯನ್ನು ಕರ್ನಾಟಕ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಬೇಕು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈ ಪಟ್ಟಿಯನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ವಿಡಿಯೋ ಪ್ರಕರಣ: ಪವರ್ ಟಿವಿ ರಾಕೇಶ್ ಶೆಟ್ಟಿ ಮನೆ, ಕಚೇರಿ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಸಿದ್ಧಪಡಿಸಲಾಗಿದೆ ಎನ್ನಲಾದ ವಿವಾದಾತ್ಮಕ ಸ್ಟಿಂಗ್ ವಿಡಿಯೋ ಪ್ರಕರಣದ ತನಿಖೆಯನ್ನು ಬೆಂಗಳೂರು ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಪ್ರಕರಣದ ಪ್ರಮುಖ ಶಂಕಿತರಾಗಿರುವ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ...

ಮರ ಕತ್ತರಿಸುವ ಯಂತ್ರದಿಂದ ದಾಳಿ ಪ್ರಕರಣ : ಗಾಯಾಳು ಆಂಧ್ರ ವಿದ್ಯಾರ್ಥಿನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ, ಆರೋಪಿಗೆ ಪೊಲೀಸರಿಂದ ಗುಂಡೇಟು

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಪ್ತಾಡುವಿನ ಸರ್ಕಾರಿ ಶಾಲೆಯ ತರಗತಿಯೊಳಗೆ ಹೇಮಂತ್ ಎಂಬಾತ ಮರ ಕತ್ತರಿಸುವ ಯಂತ್ರದಿಂದ ನಡೆಸಿದ ಭೀಕರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಗೋಪಿಕಾಳನ್ನು, ಘಟನೆ ನಡೆದ ಕೆಲವೇ...

“ಮೋದಿ ಎಂಬ ರಾವಣನನ್ನು ಕೆಳಗಿಳಿಸಲು ವಾನರ ಸೇನೆ ಬಂದಿದೆ”: ದೆಹಲಿಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಾಗ್ದಾಳಿ!

ದೇಶದಲ್ಲಿ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೂಲಕ ಸದ್ದಿಲ್ಲದೆ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲ್ಲಾಡಿಸಲಾಗುತ್ತಿದೆ ಎಂಬ ಆರೋಪಗಳ ನಡುವೆ, ರಾಜಧಾನಿ ನವದೆಹಲಿ ಬೃಹತ್ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಯಿತು. 'ಇಂಡಿಯಾ' (INDIA) ಒಕ್ಕೂಟ...

ಕರ್ನಾಟಕ SIR | ಎರಡು ಫಾರಂ-6 ಹಾಕಿದ ವ್ಯಕ್ತಿಗೆ 5 ವೋಟರ್ ಐಡಿ ನೀಡಿದ ಚು. ಆಯೋಗ!

ವಿಶೇಷ ತೀವ್ರ ಪರಿಷ್ಕರಣೆಯ ಬಳಿಕ ಕರ್ನಾಟಕದ ಮತದಾರರ ಪಟ್ಟಿ ಶುದ್ದವಾಗಿದೆ. ಅನರ್ಹ ಮತದಾರರ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಒ) ಅನ್ಬುಕುಮಾರ್ ಪ್ರತಿಪಾದಿಸುತ್ತಿದ್ದಾರೆ. ಆದರೆ, ಅಕ್ಟೋಬರ್ 27ರಂದು ಅಂತಿಮ...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್: ವಿಡಿಯೋ ಅಪ್‌ಲೋಡ್‌ಗೆ ಬಳಸಿದ ಫೋನ್ ಕುಮಾರಸ್ವಾಮಿ ದೆಹಲಿ ನಿವಾಸದಲ್ಲಿ ಹಸ್ತಾಂತರ: ಬೆಂಗಳೂರು ಪೊಲೀಸ್ ಆಯುಕ್ತರ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ವೈರಲ್ ಆಗಿದ್ದ ವಿವಾದಾತ್ಮಕ ‘ಸ್ಟಿಂಗ್ ಆಪರೇಷನ್’ ವಿಡಿಯೊವನ್ನು ಅಪ್‌ಲೋಡ್ ಮಾಡಲು ಬಳಸಿದ್ದ ಮೊಬೈಲ್ ಫೋನ್ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನವದೆಹಲಿಯ ಅಧಿಕೃತ ನಿವಾಸದಲ್ಲಿ...

‘ಗ್ಯಾನೇಶ್ ಕುಮಾರ್ ನಂತರ ನಿಮ್ಮ ಸರದಿ’: ಮತಗಳ್ಳತನಕ್ಕೆ ಮೋದಿ, ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ; ರಾಹುಲ್ ಗಾಂಧಿ ಎಚ್ಚರಿಕೆ

ನವದೆಹಲಿ: ಮತಗಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ನಂತರ...

‘ಅಗತ್ಯಬಿದ್ದರೆ ನಿಮ್ಮನ್ನು ನೆಲದಿಂದಲೇ ಕಿತ್ತು ಹಾಕುತ್ತೇವೆ’: ಸಿಇಸಿ ಗ್ಯಾನೇಶ್ ಕುಮಾರ್‌ಗೆ ಖರ್ಗೆ ಎಚ್ಚರಿಕೆ; ಹೋರಾಟ ಮುಂದುವರಿಸುವ ಪ್ರತಿಜ್ಞೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆ ಪಡೆಯುವವರೆಗೂ ವಿರೋಧ ಪಕ್ಷಗಳ ಹೋರಾಟ ನಿಲ್ಲುವುದಿಲ್ಲ. ಅಗತ್ಯ ಬಿದ್ದರೆ ನಿಮ್ಮನ್ನು ನೆಲದಿಂದಲೇ ಕಿತ್ತು ಹಾಕುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...