Homeಮುಖಪುಟಮಧ್ಯ ಪ್ರದೇಶ: ಧ್ವನಿ ಬದಲಿಸುವ ಆ್ಯಪ್‌ನಿಂದ ಶಿಕ್ಷಕಿಯಂತೆ ಮಾತನಾಡಿ 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಮಧ್ಯ ಪ್ರದೇಶ: ಧ್ವನಿ ಬದಲಿಸುವ ಆ್ಯಪ್‌ನಿಂದ ಶಿಕ್ಷಕಿಯಂತೆ ಮಾತನಾಡಿ 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಸಂತ್ರಸ್ತೆಯರ ಪೈಕಿ ಬಹುತೇಕರು ಬುಡಕಟ್ಟು ಸಮುದಾಯದವರು ಎಂದು ವರದಿಗಳು ಹೇಳಿವೆ. 

- Advertisement -
- Advertisement -

ವ್ಯಕ್ತಿಯೊಬ್ಬ ಧ್ವನಿ ಬದಲಾಯಿಸುವ ಆ್ಯಪ್ ಬಳಸಿ, ಶಿಕ್ಷಕಿಯಂತೆ ಬಿಂಬಿಸಿಕೊಂಡು ಏಳು ಮಂದಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ತೆಯರ ಪೈಕಿ ಬಹುತೇಕರು ಬುಡಕಟ್ಟು ಸಮುದಾಯದವರು ಎಂದು ವರದಿಗಳು ಹೇಳಿವೆ.

ಪ್ರಕರಣ ಸಂಬಂಧ ಪೊಲೀಸರು 30 ವರ್ಷದ ಕಾರ್ಮಿಕ ಬ್ರಜೇಶ್ ಪ್ರಜಾಪತಿ ಮತ್ತು ಆತನ ಮೂವರು ಸಹಚರರನ್ನು ಬಂಧಿಸಿದ್ದಾರೆ. ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಆದೇಶದ ಮೇರೆಗೆ ರಚಿಸಲಾದ ಒಂಬತ್ತು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ.

ಐವರು ಸಂತ್ರಸ್ತೆಯರನ್ನು ಒಳಗೊಂಡ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಈ ಪೈಕಿ ನಾಲ್ವರು ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಬಾಲಕಿಯರಲ್ಲಿ ಒಬ್ಬಳು ಅಪ್ರಾಪ್ತೆ ಎಂದು ಸಿಧಿಯ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ ಹೇಳಿದ್ದಾರೆ.

ಸಿಧಿಯ ಮಜೌಲಿ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್‌ಗಳಾದ 376 (2) (ಎನ್‌), 354,506,342,366, ಮತ್ತು 294ರ ಅಡಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಸಂಬಂಧಿಸಿದ ಪ್ರಕರಣದಲ್ಲಿ 2012ರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 3/4 ಅನ್ನು ಅನ್ವಯಿಸಲಾಗಿದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

ನಾಲ್ವರು ಬುಡಕಟ್ಟು ವಿದ್ಯಾರ್ಥಿನಿಯರಲ್ಲದೆ, ಇತರ ಮೂವರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಎಸ್‌ಐಟಿಯ ಭಾಗವಾಗಿರುವ ಮಜೌಲಿ ಪೊಲೀಸ್ ಠಾಣೆಯ ಉಸ್ತುವಾರಿ ದೀಪಕ್ ಬಾಘೇಲ್ ಹೇಳಿದ್ದಾರೆ.

ಬ್ರಜೇಶ್ ಪ್ರಜಾಪತಿ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿದ್ದು, ಸಂದೀಪ್ ಪ್ರಜಾಪತಿ, ರಾಹುಲ್ ಪ್ರಜಾಪತಿ, ಮತ್ತು ಲವ್ಕುಶ್ ಪ್ರಜಾಪತಿ ಆತನಿಗೆ ಸಹಾಯ ಮಾಡಿದ್ದಾರೆ ಎಂದು ಎಸ್‌ಐಟಿಯ ನೇತೃತ್ವ ವಹಿಸಿರುವ ಡಿಎಸ್‌ಪಿ ರೋಶ್ನಿ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಅತ್ಯಾಚಾರದ ಬಳಿಕ ಆರೋಪಿಗಳು ವಿದ್ಯಾರ್ಥಿನಿಯರಿಂದ ಮೊಬೈಲ್ ಫೋನ್ ಸೇರಿದಂತೆ ಇತರೆ ಬೆಲೆಬಾಳುವ ವಸ್ತುಗಳನ್ನು ಕಿತ್ತುಕೊಂಡು ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 16 ಮೊಬೈಲ್ ಫೋನ್‌ಗಳು ಮತ್ತು ಹಲವಾರು ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಠಾಕೂರ್ ಹೇಳಿದ್ದಾರೆ.

ಪ್ರಕರಣದ ವಿವರಣೆ: ಆರೋಪಿಗಳಲ್ಲಿ ಒಬ್ಬನಾದ ಲವ್ಕುಶ್ ಪ್ರಜಾಪತಿ ಎರಡು ವರ್ಷಗಳ ಹಿಂದೆಯಷ್ಟೆ ಪದವಿ ಮುಗಿಸಿದ್ದ. ಆದ್ದರಿಂದ ಆತ ವಿದ್ಯಾರ್ಥಿಗಳ ವಾಟ್ಸಾಪ್ ಗುಂಪಿನಲ್ಲಿದ್ದ. ಅಲ್ಲಿಂದ ಒಬ್ಬಳು ವಿದ್ಯಾರ್ಥಿನಿಯ ಫೋನ್ ನಂಬರ್ ಅನ್ನು ಪ್ರಮುಖ ಆರೋಪಿ ಬ್ರಜೇಶ್ ಪ್ರಜಾಪತಿಗೆ ನೀಡಿದ್ದ. ಆತ ವಿದ್ಯಾರ್ಥಿನಿಯನ್ನು ಬಲೆಗೆ ಬೀಳಿಸಿಕೊಂಡಿದ್ದ. ಬಳಿಕ ಆ ವಿದ್ಯಾರ್ಥಿನಿಯ ಮೊಬೈಲ್ ಕಸಿದುಕೊಂಡು ಇತರ ವಿದ್ಯಾರ್ಥಿನಿಯರ ನಂಬರ್ ಪಡೆದುಕೊಂಡಿದ್ದ.

ಯೂಟ್ಯೂಬ್ ನೋಡಿ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಗ್ಗೆ ತಿಳಿದುಕೊಂಡಿದ್ದ ಬ್ರಜೇಶ್ ಪ್ರಜಾಪತಿ, ಆ ಆ್ಯಪ್ ಅನ್ನು ತನ್ನ ಮೊಬೈಲ್‌ನಲ್ಲಿ ಡೌನ್ಲೋಡ್‌ ಮಾಡಿಕೊಂಡಿದ್ದ. ಅದರ ಸಹಾಯದಿಂದ ಮಹಿಳೆಯರಂತೆ ಧ್ವನಿ ಬದಲಾಯಿಸಿ ವಿದ್ಯಾರ್ಥಿನಿಯರಿಗೆ ಕರೆ ಮಾಡುತ್ತಿದ್ದ. ತನ್ನನ್ನು ತಾನು ‘ರಂಜನಾ ಮೇಡಂ ಎಂದು ಹೇಳಿಕೊಂಡಿದ್ದ. 18 ವರ್ಷದ ಕಳೆದ ವಿದ್ಯಾರ್ಥಿನಿಯರಿಗೆ ಕರೆ ಮಾಡಿ ಸರ್ಕಾರದಿಂದ ಸ್ಕಾಲರ್ ಶಿಪ್ ಇದೆ ಎಂದು ತನ್ನ ಬಳಿಗೆ ಕರೆಸಿಕೊಳ್ಳುತ್ತಿದ್ದ. ತನ್ನ ಬಳಿಗೆ ಬಂದ ವಿದ್ಯಾರ್ಥಿನಿಯರಿಗೆ ತಾನು ರಂಜನಾ ಮೇಡಂ ಮಗ ಎಂದು ಮನೆಗೆ ಕರೆದುಕೊಂಡು ಹೋಗುತ್ತಿದ್ದ. ಅಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗುತ್ತಿದ್ದ. ವಿದ್ಯಾರ್ಥಿನಿಯರ ಮುಖತಃ ಭೇಟಿಯ ವೇಳೆ ಆರೋಪಿ ಬಟ್ಟೆ ಅಥವಾ ಹೆಲ್ಮೆಟ್‌ನಿಂದ ಮುಖ ಮುಚ್ಚಿಕೊಳ್ಳುತ್ತಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶ : ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗೆ ಗೃಹ ಬಂಧನ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...