Homeಮುಖಪುಟಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂ. ಕಳೆದುಕೊಂಡ ವ್ಯಕ್ತಿ : ಹಣ ಮರುಪಾವತಿ, ವಂಚನೆ...

ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂ. ಕಳೆದುಕೊಂಡ ವ್ಯಕ್ತಿ : ಹಣ ಮರುಪಾವತಿ, ವಂಚನೆ ತಡೆಗೆ ಮಾರ್ಗಸೂಚಿ ಕೋರಿ ಸುಪ್ರೀಂ ಮೊರೆ

- Advertisement -
- Advertisement -

ಸೈಬರ್ ವಂಚನೆಯಾದ ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂಪಾಯಿ (22.92 ಕೋಟಿ) ಕಳೆದುಕೊಂಡ 82 ವರ್ಷದ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್ ಬ್ಯಾಂಕ್, ಸಿಬಿಐ ಮತ್ತು 7 ಖಾಸಗಿ ಬ್ಯಾಂಕ್‌ಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಇದು ಬಹುಶಃ ದೇಶದ ಅತಿದೊಡ್ಡ ವೈಯಕ್ತಿಕ ಡಿಜಿಟಲ್ ವಂಚನೆ ಪ್ರಕರಣ ಎನ್ನಲಾಗ್ತಿದೆ. ಹಣ ಕಳೆದುಕೊಂಡ ವ್ಯಕ್ತಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಸುಪ್ರೀಂ ಕೋರ್ಟ್, ಸರ್ಕಾರ ಮತ್ತು ಇತರ ಪಕ್ಷಕಾರರಿಗೆ ನೋಟಿಸ್ ಜಾರಿ ನೀಡಿದೆ.

ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಕೆ. ಪರಮೇಶ್ವರ್ ಅವರು, ಅರ್ಜಿದಾರರ ಮಕ್ಕಳು ವಿದೇಶದಲ್ಲಿದ್ದಾಗ ಈ ಘಟನೆ ನಡೆದಿದೆ. ಇದು ಸಂಬಂಧಪಟ್ಟ ಬ್ಯಾಂಕುಗಳ ‘ತೀವ್ರ ನಿರ್ಲಕ್ಷ್ಯ’ದ ಪ್ರಕರಣವಾಗಿದೆ. ಅರ್ಜಿದಾರರು ಬ್ಯಾಂಕುಗಳ ವಿರುದ್ಧ ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಆಯೋಗವನ್ನು ಸಂಪರ್ಕಿಸುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಬ್ಯಾಂಕುಗಳು ಕೂಡ ಕೆಲವು ಕರ್ತವ್ಯಗಳನ್ನು ನಿರ್ವಹಿಸಬೇಕಾಗಿದೆ, ಅವರು (ಅರ್ಜಿದಾರರು) ವೀಲ್‌ಚೇರ್‌ನಲ್ಲಿ ಓಡಾಡುವವರು. ಅವರಿಗೆ ಸುಮಾರು 82 ವರ್ಷ ವಯಸ್ಸಾಗಿದೆ. ಇಷ್ಟು ದೊಡ್ಡ ವಹಿವಾಟು ಪತ್ತೆಯಾದಾಗ ಬ್ಯಾಂಕುಗಳು ಕೂಡ ಜಾಗರೂಕತೆಯನ್ನು ತೋರಿಸಬೇಕು ಎಂದು” ಅರ್ಜಿದಾರರ ಪರ ವಕೀಲ ವಾದಿಸಿದ್ದಾರೆ.

ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಸೈಬರ್ ವಂಚಕರು ಬಳಸುವ ಮ್ಯೂಲ್ ಖಾತೆಗಳನ್ನು (ವಂಚನೆಯ ಹಣ ವರ್ಗಾಯಿಸಲು ಬಳಸುವ ಖಾತೆ) ಗುರುತಿಸಲು ನಿರ್ದೇಶನಗಳನ್ನು ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ನ್ಯಾಯಾಲಯವು ಅರ್ಜಿದಾರರು ಗ್ರಾಹಕರ ಪರಿಹಾರ ಆಯೋಗದ ಮೊರೆ ಹೋಗಲು ಅವಕಾಶ ನೀಡಿದೆ.

ತಾನು ಕಳೆದುಕೊಂಡ ಹಣವನ್ನು ವಂಚಕರಿಂದ ಮರಳಿ ಪಡೆದು ಅದನ್ನು ಒಂದು ಎಸ್ಕ್ರೋ ಖಾತೆಗೆ ಅಂದರೆ, ಒಂದು ಸುರಕ್ಷಿತ, ತಾತ್ಕಾಲಿಕ ಖಾತೆ ಅಥವಾ ನ್ಯಾಯಾಲಯದ ನಿಯಂತ್ರಣದಲ್ಲಿರುವ ಖಾತೆಗೆ ಜಮೆ ಮಾಡಬೇಕು. ಬಳಿಕ ಅದನ್ನು ತನಗೆ ಬಿಡುಗಡೆ ಮಾಡುವಂತೆ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಕೋರಿದ್ದಾರೆ. ಕೋಟಕ್ ಮಹೀಂದ್ರಾ ಬ್ಯಾಂಕ್, ಹೆಚ್‌ಡಿಎಫ್‌ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಇಂಡಸ್‌ಲ್ಯಾಂಡ್‌ ಬ್ಯಾಂಕ್, ಸಿಟಿ ಯೂನಿಯನ್ ಬ್ಯಾಂಕ್ ಮತ್ತು ಯೆಸ್‌ ಬ್ಯಾಂಕ್‌ಗಳನ್ನು ಪ್ರತಿವಾದಿಗಳಾಗಿ ಉಲ್ಲೇಖಿಸಿದ್ದಾರೆ.

ರಿಟ್‌ ಅರ್ಜಿ ಪ್ರಕಾರ, ಅರ್ಜಿದಾರ 82 ವರ್ಷದ ಹಿರಿಯ ನಾಗರಿಕರಾಗಿದ್ದು, ಅವರು ಮನೆಯಲ್ಲಿ ಒಂಟಿಯಾಗಿದ್ದಾಗ ಕಾನೂನು ಜಾರಿ ಅಧಿಕಾರಿಗಳಂತೆ ನಟಿಸಿದ ಸೈಬರ್ ವಂಚಕರು, ಸುಪ್ರೀಂ ಕೋರ್ಟ್‌ ನೀಡಿದೆ ಎಂದು ನಕಲಿ ಆದೇಶಗಳನ್ನು ವಾಟ್ಸಾಪ್ ಮತ್ತು ವಿಡಿಯೋ ಕಾನ್ಫರೆನ್ಸ್ ಮೂಲಕ ಹಂಚಿಕೊಂಡು ಬ್ಯಾಂಕ್ ಖಾತೆಯಿಂದ ಹಣ ದೋಚಿದ್ದಾರೆ.

ನನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಬೆದರಿಸಿ, ನಕಲಿ ನ್ಯಾಯಾಂಗದ ದಾಖಲೆಗಳನ್ನು ತೋರಿಸಿ ನನ್ನ ಜೀವಮಾನದ ಸಂಪೂರ್ಣ ಉಳಿತಾಯವನ್ನು ವಂಚಕರು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಅರ್ಜಿದಾರ ನ್ಯಾಯಾಲಯದ ಮುಂದೆ ಅಳಲು ತೋಡಿಕೊಂಡಿದ್ದಾರೆ ಎಂದು ಲೈವ್‌ಲಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...