Homeಮುಖಪುಟಉದ್ಧವ್ ಠಾಕ್ರೆ ಬಣದ ನಾಯಕನ ಹತ್ಯೆ ಆರೋಪಿ ನಾಲ್ಕು ದಿನಗಳ ಹಿಂದೆ ಸಿಎಂ ಏಕನಾಥ್ ಶಿಂದೆಯನ್ನು...

ಉದ್ಧವ್ ಠಾಕ್ರೆ ಬಣದ ನಾಯಕನ ಹತ್ಯೆ ಆರೋಪಿ ನಾಲ್ಕು ದಿನಗಳ ಹಿಂದೆ ಸಿಎಂ ಏಕನಾಥ್ ಶಿಂದೆಯನ್ನು ಭೇಟಿಯಾಗಿದ್ದ: ಸಂಜಯ್ ರಾವುತ್ ಆರೋಪ

- Advertisement -
- Advertisement -

ಮಹಾರಾಷ್ಟ್ರದ ಶಿವಸೇನೆ ಉದ್ದವ್ ಬಾಳ ಸಾಹೇಬ್ ಠಾಕ್ರೆ (ಯುಬಿಟಿ) ಪಕ್ಷದ ನಾಯಕ ವಿನೋದ್ ಘೋಸಾಲ್ಕರ್‌ ಅವರ ಪುತ್ರ ಅಭಿಷೇಕ್ ಘೋಸಾಲ್ಕರ್‌ ಅವರನ್ನು ಫೇಸ್‌ಬುಕ್‌ ಲೈವ್‌ನಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮುಂಬೈನ ಉಪನಗರ ದಹಿಸಾರ್‌ನಲ್ಲಿ ನಿನ್ನೆ (ಫೆ.8) ಸಂಜೆ ನಡೆದ ಈ ಘಟನೆ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಸಿದೆ. ಅಭಿಷೇಕ್ ಘೋಸಾಲ್ಕರ್‌ಗೆ ಗುಂಡಿಕ್ಕಿದ ಬಳಿಕ ಆರೋಪಿ ಮೌರಿಸ್ ನೊರೊನ್ಹಾ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಶಿವಸೇನೆ ಯುಬಿಟಿ ನಾಯಕ ಸಂಜಯ್ ರಾವುತ್ ಎಕ್ಸ್‌ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಸಿಎಂ ಏಕನಾಥ್ ಶಿಂಧೆ ಜೊತೆ ಆರೋಪಿ ಮೌರಿಸ್ ನೊರೊನ್ಹಾ ಇರುವುದು ಕಂಡು ಬಂದಿದೆ.

“ಮುಖ್ಯಮಂತ್ರಿಗಳ ಅಧಿಕೃತ ನಿವಾಸ ವರ್ಷ ಭೂಗತ ಪಾತಕಿಗಳ ಪಾಲಿಗೆ ಸ್ವರ್ಗವಾಗಿ ಬದಲಾಗಿದೆ. ಗೃಹ ಖಾತೆಯನ್ನೂ ಹೊಂದಿರುವ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿರುವುದರಿಂದ ಅವರು ಕೂಡಲೇ ರಾಜೀನಾಮೆ ನೀಡಬೇಕು” ಎಂದು ಫೋಟೋ ಜೊತೆಗೆ ಸಂಜಯ್ ರಾವುತ್ ಬರೆದುಕೊಂಡಿದ್ದಾರೆ.

ಗುಂಡೇಟಿಗೆ ಬಲಿಯಾದ ಮಾಜಿ ಕಾರ್ಪೋರೇಟರ್ ಅಭಿಷೇಕ್ ಘೋಸಾಲ್ಕರ್‌ ಸಾಮಾಜಿಕ ಕಾರ್ಯಕರ್ತ ಎಂದು ಹೇಳಲಾಗಿರುವ ಆರೋಪಿ ನೊರೊನ್ಹಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಫೇಸ್‌ಬುಕ್‌ ಲೈವ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಲೈವ್‌ನ ಕೊನೆಯಲ್ಲಿ ನೊರೊನ್ಹಾ ಎದ್ದು ಹೋಗಿದ್ದಾನೆ. ಆತನ ಹಿಂದೆಯೇ ಅಭಿಷೇಕ್ ಘೋಸಾಲ್ಕರ್‌ ಎದ್ದು ಹೋಗಲು ಅನಿಯಾದಾಗ ಗುಂಡಿನ ದಾಳಿ ನಡೆದಿದೆ. ಅಭಿಷೇಕ್ ಅವರಿಗೆ ಗುಂಡೇಟು ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ, ಆ ಕಡೆಯಿಂದ ಯಾರು ಗುಂಡಿಕ್ಕಿದ್ದಾರೆ ಎಂದು ಗೊತ್ತಾಗಿಲ್ಲ. ಅಭಿಷೇಕ್ ಘೋಸಾಲ್ಕರ್‌ಗೆ ಅವರ ಜೊತೆಯಿದ್ದ ಮೌರಿಸ್ ನೊರೊನ್ಹಾ ಗುಂಡಿಕ್ಕಿದ್ದು, ಬಳಿಕ ಆತನ ಕೂಡ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: ಈಶ್ವರಪ್ಪ ‘ಗುಂಡಿಕ್ಕಿ ಕೊಲ್ಲಿ’ ಹೇಳಿಕೆ: ಗೋಡ್ಸೆ ಸಂತತಿಯವರ ಭಯೋತ್ಪಾದಕ ಮನಸ್ಥಿತಿ ಅನಾವರಣ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....