Homeಕರ್ನಾಟಕ'ಸಿಎಂ ಬದಲಾವಣೆ ಚರ್ಚೆಯಿಂದ ಆಡಳಿತಕ್ಕೆ ತೊಡಕಾಗಿದೆ; ಜನ ಭರವಸೆ ಕಳೆದುಕೊಳ್ಳುತ್ತಿದ್ದಾರೆ..'; ರಾಹುಲ್‌ಗೆ ಕಾಂಗ್ರೆಸ್ ನಾಯಕರಿಂದ ಪತ್ರ

‘ಸಿಎಂ ಬದಲಾವಣೆ ಚರ್ಚೆಯಿಂದ ಆಡಳಿತಕ್ಕೆ ತೊಡಕಾಗಿದೆ; ಜನ ಭರವಸೆ ಕಳೆದುಕೊಳ್ಳುತ್ತಿದ್ದಾರೆ..’; ರಾಹುಲ್‌ಗೆ ಕಾಂಗ್ರೆಸ್ ನಾಯಕರಿಂದ ಪತ್ರ

- Advertisement -
- Advertisement -

ಮುಖ್ಯಮಂತ್ರಿ ಬದಲಾವಣೆಯ ಕುರಿತು ಹೇಳಿಕೆ ನೀಡುವಲ್ಲಿ ತೊಡಗಿರುವ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಖಡಕ್ ಸೂಚನೆ ನೀಡುವಂತೆ ಕೋರಿ ಹದಿನೈದು ಜನ ಕಾಂಗ್ರೆಸ್ ನಾಯಕರು ಸೆಪ್ಟೆಂಬರ್ 10ರಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.

ಹಿರಿಯ ಸಚಿವರು ಸೇರಿದಂತೆ ಆರಕ್ಕೂ ಹೆಚ್ಚು ನಾಯಕರು ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಹೋರಾಡುವ ಬದಲು ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಚಲಾಯಿಸುತ್ತಿದ್ದಾರೆ. ಅವರ ಈ ಬಹಿರಂಗ ಹೇಳಿಕೆಗಳಿಂದ ನಮ್ಮ ಅನೇಕ ನಾಯಕರು ಮತ್ತು ಕಾರ್ಯಕರ್ತರು ಹತಾಶರಾಗುತ್ತಿದ್ದಾರೆ. ಸರ್ಕಾರ ಮತ್ತು ಪಕ್ಷದ ಮೇಲಿನ ಭರವಸೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಎಲ್.ಶಂಕರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಎಸ್.ದ್ವಾರಕಾನಾಥ್ ಸೇರಿದಂತೆ ಹಲವರು ಪತ್ರಕ್ಕೆ ಸಹಿ ಹಾಕಿದ್ದಾರೆ.

ಅದೇ ರೀತಿ ನಮ್ಮ ನಾಯಕರ ಒಳಜಗಳ ಮತ್ತು ಅಜಾಗರೂಕ ಹೇಳಿಕೆಗಳಿಂದಾಗಿ ಕರ್ನಾಟಕದ ಜನತೆ ನಮ್ಮ ಪಕ್ಷ ಮತ್ತು ಸರ್ಕಾರದ ಮೇಲಿನ ಭರವಸೆಯನ್ನು ನಿಧಾನವಾಗಿ ಕಳೆದುಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರದ ಆಡಳಿತಕ್ಕೆ ದೊಡ್ಡ ಮಟ್ಟದಲ್ಲಿ ತೊಡಕಾಗಿದೆ. ಆದ್ದರಿಂದ, ನಾವು ನಿಮ್ಮಲ್ಲಿ ವಿನಮ್ರವಾಗಿ ಮನವಿ ಮಾಡುತ್ತೇವೆ, ಈ ನಾಯಕರು ನೀಡಿರುವ ಹೇಳಿಕೆಗಳನ್ನು ಗಮನಿಸಿ ಮತ್ತು ಅವರಿಗೆ ಎಚ್ಚರಿಕೆ ನೀಡಬೇಕು. ಮುಂದೆ ಕಾಂಗ್ರೆಸ್ ಪಕ್ಷ ಮತ್ತು ಕರ್ನಾಟಕ ರಾಜ್ಯದ ಹಿತದೃಷ್ಟಿಯಿಂದ ಇಂತಹ ಹಾನಿಕಾರಕ ಹೇಳಿಕೆಗಳನ್ನು ನೀಡದಂತೆ ನಿರ್ದೇಶನ ನೀಡಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಕರ್ನಾಟಕದ ಜನರು ತುಂಬಾ ಸಂತೋಷವಾಗಿದ್ದಾರೆ ಮತ್ತು ಪಕ್ಷವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಂಬಲಿಸುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ಗಳು ಇದನ್ನು ಗಂಭೀರವಾಗಿ ಪರಿಗಣಿಸಿವೆ, ಕರ್ನಾಟಕದಲ್ಲಿ ನಮ್ಮ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಬಯಸುತ್ತಿವೆ. ಇದ್ದಕ್ಕಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ವಿಚಾರವನ್ನು ತೆಗೆದುಕೊಂಡಿದ್ದಾರೆ. ಇದರಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲ. ಆದರೂ, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17 (ಎ) ಅಡಿಯಲ್ಲಿ ಅವರು ಕರ್ನಾಟಕ ರಾಜ್ಯಪಾಲರಿಂದ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಜಂಟಿಯಾಗಿ ಒತ್ತಾಯಿಸುತ್ತಿದ್ದಾರೆ. ಪತ್ರದ ಪ್ರತಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೂ ಕಳುಹಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ನಾವು ಸಂವಿಧಾನ ಎತ್ತಿಹಿಡಿಯುವ ಮಾತನಾಡುವಾಗ ಬಿಜೆಪಿಗೆ ಯಾಕೆ ಸಮಸ್ಯೆಯಾಗುತ್ತದೆ: ಅಮಿತ್ ಶಾಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...