Homeಕರೋನಾ ತಲ್ಲಣಮಾನವ ಬಂಧುತ್ವ ವೇದಿಕೆಯಿಂದ 10 ದಿನಗಳ ಅರೋಗ್ಯ ಬಂಧುತ್ವ ವೆಬಿನಾರ್‌ ಸರಣಿ ಆರಂಭ

ಮಾನವ ಬಂಧುತ್ವ ವೇದಿಕೆಯಿಂದ 10 ದಿನಗಳ ಅರೋಗ್ಯ ಬಂಧುತ್ವ ವೆಬಿನಾರ್‌ ಸರಣಿ ಆರಂಭ

- Advertisement -
- Advertisement -

ಸತೀಶ್ ಜಾರಕಿಹೋಳಿ ನೇತೃತ್ವದ ಮಾನವ ಬಂಧುತ್ವ ವೇದಿಕೆಯು ಕೋವಿಡ್‌ ಸಂಬಂಧ ಜಾಗೃತಿ ಮೂಡಿಸಲು 10 ದಿನಗಳ  ಆರೋಗ್ಯ ಬಂಧುತ್ವ ಅಭಿಯಾನ ಎಂಬ ವೆಬಿನಾರ್‌ ಸರಣಿಯನ್ನು ಆರಂಭಿಸಿದೆ.‌ ಜಾಗೃತಿ ಅಭಿಯಾನದ ಮೊದಲ ದಿನವಾದ ನಿನ್ನೆ ಜೂನ್‌ 10 ರ ಗುರುವಾರ ಸಂಜೆ 7 ಗಂಟೆಗೆ ಅಭಿಯಾನದ ಉದ್ಘಾಟನೆ ನಡೆಯಿತು. ಘಟಪ್ರಭಾದ ಡಾ. ಎನ್‌ ಎಸ್‌ ಹರ್ಡೀಕರ್‌ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು.

ಅರೋಗ್ಯ ಬಂಧುತ್ವ ವೆಬಿನಾರ್‌ ಸರಣಿಯ ಮೊದಲ ಕಂತಿನಲ್ಲಿ ಕೋವಿಡ್‌ ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ವಿಚಾರ ಸಂಕೀರ್ಣ ನಡೆಯಿತು. ವಿಜ್ಞಾನಿ ಗಿರೀಶ್‌ ಮೂಡ್‌ ಮಾತನಾಡಿ, “ಪ್ರಕೃತಿಗಿಂತ ಯಾರೂ ದೊಡ್ಡವರಲ್ಲ. ವಿಜ್ಞಾನಿಗಳೂ ಕೂಡ ಪ್ರಕೃತಿಯ ವಿರುದ್ಧ ಹೋಗಲು ಸಾಧ್ಯವಿಲ್ಲ. 2019 ರಲ್ಲಿ ವೂಹಾನ್‌ ನಿಂದ ಕೇರಳಕ್ಕೆ ಭೇಟಿನೀಡಿದ ವ್ಯಕ್ತಿಯಲ್ಲಿ ಮೊಟ್ಟ ಮೊದಲು ಭಾರತದಲ್ಲಿ ಕೊರೋನಾ ವೈರಸ್‌ ಕಾಣಿಸಿಕೊಂಡಿತ್ತು. ಇಂದು ಅದು ಮನುಷ್ಯನಿಗೆ, ವಿಜ್ಞಾನಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕೊರೋನಾ  ವೈರಸ್‌ ಎಲ್ಲಿಗೂ ಹೋಗುವುದಿಲ್ಲ. ನಾವು ಅದನ್ನು ಎದುರಿಸಲು ಕಲಿಯಬೇಕು. ಕೋವಿಡ್‌ ಪಾಸಿಟಿವ್‌ ಅಥವಾ ನೆಗೆಟಿವ್‌ ಇರಲಿ ಸೂಕ್ತ ಜಾಗೃತೆಯನ್ನು ವಹಿಸಬೇಕು” ಎಂದರು.

ಇದನ್ನೂ ಓದಿ : 5 ವರ್ಷದಲ್ಲಿ 14 ಸರ್ಕಾರಿ ಹುದ್ದೆಗೆ ಆಯ್ಕೆಯಾದ ಬಾಗಲಕೋಟೆಯ ಮಹಂತೇಶ್ ಬ್ಯಾಡಗಿ

ಮಾನವ ಬಂಧುತ್ವ ವೇದಿಕೆಯ ವಿಭಾಗೀಯ ಸಂಚಾಲಕರಾದ ಅನಂತ್‌ ನಾಯ್ಕರ್‌ ದಿಕ್ಸೂಚಿ ಮಾತುಗಳನ್ನಾಡಿ ಕೊರೋನಾ ಇಡೀ ಜಗತ್ತನ್ನು ಬಗ್ಗು ಬಡಿಯುತ್ತಿದೆ . ಜನರ ಜೀವನ ತತ್ತರಿಸುತ್ತಿದೆ. ಆಳುವವರ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಮನೋಭಾವವೇ ಕಾರಣ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ರವಿಂದ್ರ ನಾಯ್ಕರ್‌, “ಬಂಧುತ್ವದಿಂದ ಮಾತ್ರ ಇಂತಹ ಸಂಕಷ್ಟಗಳನ್ನು ಎದುರಿಸಲು ಸಾಧ್ಯ. ಆತ್ವವಿಶ್ವಾಸ, ಆತ್ಮಸ್ಥೈರ್ಯ ಹೆಚ್ಚಿಸುವ ಮೂಲಕ ರೋಗವನ್ನು ಹೊಡೆದೋಡಿಸಲು ಸಾಧ್ಯ ಎಂದರು.


 

ಇದನ್ನೂ ಓದಿ : ಸೋಶಿಯಲಿಸಂನನ್ನು ವರಿಸಲಿರುವ ಮಮತಾ ಬ್ಯಾನರ್ಜಿ!: ಸಿದ್ದಾಂತ ಪ್ರೇಮಿಗಳಿಂದಾಗಿ ಗಮನ ಸೆಳೆದ ಮದುವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...