Homeಕರ್ನಾಟಕಕಡ್ಡಾಯ ಕನ್ನಡ ನಾಮಫಲಕ ಅಭಿಯಾನ: ಬೆಂಗಳೂರಿನಲ್ಲಿ ತೀವ್ರಗೊಂಡ ಕನ್ನಡಪರ ಕಾರ್ಯಕರ್ತರ ಹೋರಾಟ

ಕಡ್ಡಾಯ ಕನ್ನಡ ನಾಮಫಲಕ ಅಭಿಯಾನ: ಬೆಂಗಳೂರಿನಲ್ಲಿ ತೀವ್ರಗೊಂಡ ಕನ್ನಡಪರ ಕಾರ್ಯಕರ್ತರ ಹೋರಾಟ

- Advertisement -
- Advertisement -

ಸರ್ಕಾರ ಹಲವು ಬಾರಿ ಎಚ್ಚರಿಕೆ ನೀಡಿದ ನಂತರವೂ ರಾಜ್ಯದ ಹಲವು ವಾಣಿಜ್ಯ ಸಂಸ್ಥೆಗಳು ಹಾಗೂ ಉತ್ತರ ಭಾರತದ ಅಂಗಡಿ ಮಾಲೀಕರು ಕನ್ನಡ ನಾಮಫಲಕ ಅಳವಡಿಸಿಕೊಂಡಿಲ್ಲ. ನಾಮಫಲಕಗಳಲ್ಲಿ ಶೇ. 60% ರಷ್ಟು ಕನ್ನಡ ಇರಬೇಕು ಎಂಬ ಆದೇಶವನ್ನು ಬಹುತೇಕರು ಪಾಲನೆ ಮಾಡುತ್ತಿಲ್ಲ. ಅನ್ಯ ರಾಜ್ಯಗಳ ಅಂಗಡಿ ಮಾಲೀಕರು ಕನ್ನಡ ವಿರೋಧಿ ನಡೆ ವಿರೊಧಿಸಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಇಂದು ಹೋರಾಟಕ್ಕೆ ಧುಮುಕಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹಲವು ಸಂಘಟನೆಗಳ ಕಾರ್ಯಕರ್ತರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಬ್ಬನ್‌ ಪಾರ್ಕ್‌ ವರೆಗೆ ಅಳವಡಿಸಿರುವ ಇಂಗ್ಲಿಷ್ ನಾಮಫಲಕಗಳನ್ನು ತೆರವುಗೊಳಿಸುವ ಕೆಲಸ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿಯೂ ಕನ್ನಡಪರ ಕಾರ್ಯಕರ್ತರು ಕಡ್ಡಾಯ ಕನ್ನಡ ನಾಮಫಲಕ ಅಭಿಯಾನ ಕೈಗೊಂಡಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ನಡೆಸಿದ ಪ್ರತಿಭಟನೆ ತೀವ್ರಗೊಂಡಿದ್ದು, ತಮ್ಮ ಸೈನ್ ಬೋರ್ಡ್‌ಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕೆಂದು ಒತ್ತಾಯಿಸಿ, ಖಾಸಗಿ ಹೋಟೆಲ್ ಇಂಗ್ಲಿಷ್ ನಾಮಫಲಕವನ್ನು ಧ್ವಂಸಗೊಳಿಸಿದರು.

ಬೆಂಗಳೂರಿನ ಬೀದಿಗಳಲ್ಲಿ ಅಳವಡಿಸಿದ್ದ ಇಂಗ್ಲಿಷ್ ಪೋಸ್ಟರ್‌ಗಳನ್ನು ಸಹ ಹರಿದು ಹಾಕಿದರು. 2024ರ ಫೆಬ್ರವರಿ 28ರೊಳಗೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸುವಂತೆ ರಾಜಧಾನಿಯ ವಾಣಿಜ್ಯ ಸಂಸ್ಥೆಗಳಿಗೆ ಬಿಬಿಎಂಪಿ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.

ಕೂಡಲೇ ಕನ್ನಡ ಭಾಷೆಯಲ್ಲಿ ಜಾಹೀರಾತು ಫಲಕಗಳನ್ನು ಹಾಕಬೇಕು ಎಂದು ಕನ್ನಡ ಪರ ಕಾರ್ಯಕರ್ತರು ಅಂಗಡಿ ಮಾಲೀಕರಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಎಲ್ಲ ಸಂಸ್ಥೆಗಳು ಮತ್ತು ಅಂಗಡಿಗಳು ಫೆಬ್ರವರಿ 28 ರ ಮೊದಲು ಕಡ್ಡಾಯ ಕನ್ನಡ ನಾಮಫಲಕ ಆದೇಶವನ್ನು ಪಾಲಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

‘ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ. ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ’ ಎಂದು ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಚಿಕ್ಕಪೇಟೆ, ಅವಿನ್ಯೂ ರಸ್ತೆ ಹಾಗೂ ಅಕ್ಕಪಕ್ಕದ ವ್ಯಾಪಾರ ಸ್ಥಳಗಳಲ್ಲಿ ಅಂಗಡಿ ತೆರೆದಿರುವ ಉತ್ತರ ಭಾರತದವರು ಕನ್ನಡ ನಾಮಫಲಕಗಳ ಬದಲಿಗೆ ಇಂಗ್ಲಿಷ್ ಬಳಸಿದ್ದಾರೆ. ಇದನ್ನು ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುತಿಸಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ಕನ್ನಡ ಪರ ಹೋರಾಟಗಾರರನ್ನು ಭೇಟಿ ಮಾಡಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ‘ಫೆಬ್ರವರಿ 28ರ ಮೊದಲು ಬೆಂಗಳೂರಿನ ಎಲ್ಲಾ ವಾಣಿಜ್ಯ ಸಂಸ್ಥೆಗಳು ಕನ್ನಡದಲ್ಲಿ ಫಲಕಗಳನ್ನು ಸ್ಥಾಪಿಸುವುದನ್ನು ಖಚಿತಪಡಿಸಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

‘ಬೆಂಗಳೂರಿನಲ್ಲಿ 1,400 ಕಿ.ಮೀ. ಮತ್ತು ಎಲ್ಲ ವಾಣಿಜ್ಯ ಸಂಸ್ಥೆಗಳನ್ನು ವಲಯವಾರು ಸಮೀಕ್ಷೆ ಮಾಡಲಾಗುವುದು. ನಾಮಫಲಕಗಳಲ್ಲಿ ಕನ್ನಡ ಬಳಸದವರಿಗೆ ನಾವು ನೋಟಿಸ್ ನೀಡುತ್ತೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಮಣಿಪುರದಿಂದ ಮುಂಬೈ; ‘ಭಾರತ ನ್ಯಾಯ ಯಾತ್ರೆ’ ಆರಂಭಿಸಲಿರುವ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...