Homeಮುಖಪುಟಹಿಮಾಚಲಪ್ರದೇಶ: ಮಾಂಸ ತಿನ್ನುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ವಿದ್ಯಾರ್ಥಿಗಳಿಗೆ ಹೇಳಿದ ಐಐಟಿ ನಿರ್ದೇಶಕ

ಹಿಮಾಚಲಪ್ರದೇಶ: ಮಾಂಸ ತಿನ್ನುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ವಿದ್ಯಾರ್ಥಿಗಳಿಗೆ ಹೇಳಿದ ಐಐಟಿ ನಿರ್ದೇಶಕ

- Advertisement -
- Advertisement -

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ ಮತ್ತು ಮೇಘಸ್ಫೋಟಗಳು ಪ್ರಾಣಿಗಳ ಮೇಲಿನ ಕ್ರೌರ್ಯದಿಂದಾಗಿ ಸಂಭವಿಸುತ್ತಿವೆ ಎಂದು  ಹಿಮಾಚಲ ಪ್ರದೇಶದ ಮಂಡಿ ಐಐಟಿ ನಿರ್ದೇಶಕ ಲಕ್ಷ್ಮೀಧರ್ ಬೆಹೆರಾ ಅವರು ಹೇಳಿದ್ದು, ಮಾಂಸ ತಿನ್ನುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿ ವಿವಾದಕ್ಕೆ ಕಾರಣರಾಗಿದ್ದಾರೆ.

ಪ್ರಾಣಿಗಳ ವಧೆಯನ್ನು ನಿಲ್ಲಿಸದಿದ್ದರೆ ಹಿಮಾಚಲ ಪ್ರದೇಶವು ಅವನತಿ ಹೊಂದುತ್ತದೆ. ಮುಗ್ಧ ಪ್ರಾಣಿಗಳಿಗೆ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧವಿದೆ. ಆದರೂ ಜನರು ತಮ್ಮ ಕೌರ್ಯವನ್ನು ನಿಲ್ಲಿಸುತ್ತಿಲ್ಲ. ಮಾಂಸ ತಿನ್ನುತ್ತಿದ್ದಾರೆ. ಇದೇ ಕಾರಣಕ್ಕೆ ಹಿಮಾಚಲ ಪ್ರದೇಶದಲ್ಲಿ ಮತ್ತೆ ಮತ್ತೆ ಭೂಕುಸಿತಗಳು ಸಂಭವಿಸುತ್ತಿವೆ ಎಂದು ಬೆಹರಾ ಹೇಳಿದ್ದಾರೆ.

ಒಳ್ಳೆಯ ಮನುಷ್ಯರಾಗಲು ನೀವು ಏನು ಮಾಡಬೇಕು? ಎಂದು ಪ್ರಶ್ನಿಸಿದ ಬೆಹೆರಾ, ಮಾಂಸ ತಿನ್ನುವುದು ಬೇಡ ಎಂದು ಹೇಳಿದ್ದಾರೆ. ಅದಲ್ಲದೆ ತನ್ನ ಮಾತನ್ನು ಮುಂದುವರಿಸುತ್ತಾ, ಮಾಂಸವನ್ನು ತಿನ್ನುವುದಿಲ್ಲ ಎಂದು ಪ್ರತಿಜ್ಞೆ ಮಾಡಲು ವಿದ್ಯಾರ್ಥಿಗಳಿಗೆ ಆಗ್ರಹಿಸಿದ್ದಾರೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಲು ಮಂಡಿ ಐಐಟಿ ನಿರ್ದೇಶಕ ಲಕ್ಷೀಧರ್‌ ಬೆಹ್ರಾ ಅವರು ಸಂಪರ್ಕಕ್ಕೆ ಮಾದ್ಯಮಗಳಿಗೆ ಸಿಕ್ಕಿಲ್ಲ.

ಬಯೋಫಿಸಿಕ್‌ ಪ್ರಾಧ್ಯಾಪಕ ಗೌತಮ್‌ ಮೆನನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಐಐಟಿ ಮಂಡಿಯ ನಿರ್ದೇಶಕರ ದೃಷ್ಟಿಕೋನದ ಬಗ್ಗೆ ಬೇಸರವಿದೆ. ಬೆಹ್ರಾ ಅವರು ಈ ರೀತಿಯ ವಿವಾದಿತ ಹೇಳಿಕೆ ನೀಡುವುದು ಇದು ಮೊದಲಲ್ಲ. ಕಳೆದ ವರ್ಷ ತನ್ನ ಸ್ನೇಹಿತನ ಅಪಾರ್ಟ್‌ಮೆಂಟ್‌ನಲ್ಲಿ ದುಷ್ಠ ಶಕ್ತಿಗಳನ್ನು  ಬೆನ್ನಟ್ಟಲು ಮಂತ್ರಗಳನ್ನು ಪಠಿಸಿದ್ದೆ ಎಂದು ಹೇಳಿ ವಿವಾದಕ್ಕೆ ಕಾರಣರಾಗಿದ್ದರು ಎಂದು ಹೇಳಿದ್ದಾರೆ.

ಇದನ್ನು ಓದಿ: ಉದಯನಿಧಿ, ರಾಜಾ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ದೇಶಿಸುವಂತೆ ಸುಪ್ರೀಂಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...