Homeಕರ್ನಾಟಕಮಂಡ್ಯ: ಟ್ಯೂಷನ್‌ಗೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿಕ್ಷಕ

ಮಂಡ್ಯ: ಟ್ಯೂಷನ್‌ಗೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿಕ್ಷಕ

- Advertisement -
- Advertisement -

ಮಂಡ್ಯದ ಮಳವಳ್ಳಿಯಲ್ಲಿ ಟ್ಯೂಷನ್‌ಗೆಂದು ತೆರಳಿದ್ದ 6ನೇ ತರಗತಿ ವಿದ್ಯಾರ್ಥಿನಿಯೊಬ್ಬರು ನಿರ್ಮಾಣ ಹಂತದ ಮನೆಯ ಮುಂಭಾಗದಲ್ಲಿದ್ದ ನೀರಿನ ಸಂಪ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆಗೆ ತಿರುವು ಲಭಿಸಿದ್ದು, ಟ್ಯೂಷನ್‌ ನೀಡುತ್ತಿದ್ದ ಶಿಕ್ಷಕ ಕಾಂತರಾಜು ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ‘ನುಡಿ ಕರ್ನಾಟಕ’ ಸುದ್ದಿ ಪೋರ್ಟಲ್ ಬುಧವಾರ ವರದಿ ಮಾಡಿದೆ.

ಆರೋಪಿ ಕಾಂತರಾಜು ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದವನಾಗಿದ್ದು, ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದ. ಬಾಲಕಿಯನ್ನು ಆರೋಪಿಯು ಚಾಕೊಲೇಟ್ ನೀಡುವುದಾಗಿ ಪುಸಲಾಯಿಸಿ ಕರೆದೊಯ್ದು, ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾಗಿ ತಿಳಿದು ಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸೆಂಟರ್‌ ನಲ್ಲಿ ಕೆಲಸಕ್ಕಿದ್ದ ಕಾಂತರಾಜು ನಿನ್ನೆ ಮಂಗಳವಾರ ಬಾಲಕಿಗೆ ಕರೆ ಮಾಡಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಟ್ಯೂಷನ್ ಗೆ ಬರುವಂತೆ ತಿಳಿಸಿದ್ದ. ಬಾಲಕಿ  ಟ್ಯೂಷನ್ ಗೆ ಬಂದ ಸಂದರ್ಭದಲ್ಲಿ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಅಲ್ಲಿದ್ದ ಗಲ್ಲಿಯಲ್ಲಿ ಅತ್ಯಾಚಾರ ನಡೆಸಿ, ಕೊಲೆ ಮಾಡಿ ಶವವನ್ನು ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದ ನೀರಿನ ಸಂಪಿಗೆ ಹಾಕಿದ್ದ ಎನ್ನಲಾಗಿದೆ.

ಇದನ್ನೂ ಓದಿ: ವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

ಬಾಲಕಿಯನ್ನು ಹುಡುಕಾಟ ನಡೆಸಿ ನಾಟಕವಾಡಿದ ಆರೋಪಿ

ತಮ್ಮ ಮಗಳು ಬೆಳಿಗ್ಗೆ 11 ಗಂಟೆಗೆ ಟ್ಯೂಷನ್‌ಗೆ ಎಂದು ಮನೆಯಿಂದ ಹೋದವಳು, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಗಾಬರಿಯಾದ ಪೋಷಕರು ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ವಿಚಾರಿಸಿದರೂ ಬಾಲಕಿ ಪತ್ತೆಯಾಗಿರಲಿಲ್ಲ.

ಟ್ಯೂಷನ್ ಸೆಂಟರ್ ನೋಡಿಕೊಂಡಿದ್ದ ಕಾಂತರಾಜು ಕೂಡ ನನಗೆ ಬಾಲಕಿ ಬಗ್ಗೆ ತನಗೆ ಏನೂ ಗೊತ್ತಿಲ್ಲ ಎಂದು ಹೇಳಿ, ಆತನೂ ಬಾಲಕಿಯ ಪಾಲಕರೊಂದಿಗೆ ಹುಡುಕಾಟ ನಡೆಸಿದ್ದ. ಕೊನೆಗೆ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗ ನಾಗರಾಜು ಎಂಬುವವರ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿದ್ದ ನೀರಿನ ಸಂಪ್‌ನಲ್ಲಿ ಬಿದ್ದಿರುವ ಮಾಹಿತಿ ಮೇರೆಗೆ ಪೋಲಿಸರು ನೀರಿನ ಸಂಪ್‌ನಲ್ಲಿ ಪರಿಶೀಲನೆ ನಡೆಸಿದಾಗ ಬಾಲಕಿಯ ಶವ ಪತ್ತೆಯಾಗಿತ್ತು.

ಈ ವೇಳೆಗಾಗಲೆ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದ್ದವು. ಸ್ಥಳಕ್ಕೆ ಡಿವೈಎಸ್ ಪಿ‌ ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಳದೊಂದಿಗೆ ಪರಿಶೀಲನೆ ಕೂಡ ನಡೆಸಿದ್ದರು.

ಇದನ್ನೂ ಓದಿ: ಬೆಂಗಳೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಮುಂದಾದ ದಂಪತಿ ರಕ್ಷಿಸಿದ ಅಗ್ನಿಶಾಮಕ ದಳ

ಮಧ್ಯರಾತ್ರಿ ಸೆರೆಯಾದ ಆರೋಪಿ

ಎಸ್ಐಗಳಾದ ಶೇಷಾದ್ರಿ ಕುಮಾರ್, ಶ್ರೀಧರ್, ಅಶೋಕ್ ಅವರು ಟ್ಯೂಷನ್ ಸೆಂಟರ್‌ ನೋಡಿಕೊಳ್ಳುತ್ತಿದ್ದ ಕಾಂತರಾಜು ಹೇಳಿಕೆಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಅವನನ್ನು ಕರೆತಂದು ವಿಚಾರಣೆ ಮಾಡಿದ ಸಂದರ್ಭದಲ್ಲಿ ಆತನೇ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ‌, ನೀರಿನ ಸಂಪಿಗೆ ಹಾಕಿದ್ದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...