Homeಮುಖಪುಟಮಂಡ್ಯ: ಪದೇ ಪದೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು

ಮಂಡ್ಯ: ಪದೇ ಪದೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು

- Advertisement -
- Advertisement -

ಪಾಕಿಸ್ತಾನದ ವಿದೇಶಾಂಗ ಸಚಿವರ ಹೇಳಿಕೆ ವಿರೋಧಿಸಿ ಮಂಡ್ಯದಲ್ಲಿ ಬಿಜೆಪಿ ವತಿಯಿಂದ ಶನಿವಾರ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಪದೇ ಪದೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಪ್ರಸಂಗ ನಡೆದಿದೆ. ಆ ಸಂದರ್ಭದಲ್ಲಿ ಅವರ ಪಕ್ಕದಲ್ಲಿಯೇ ಇದ್ದ ಬಿಜೆಪಿ ಮುಖಂಡರು ನಗುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಭಾರತದ ಪ್ರಧಾನಿ ನರೇಂದ್ರಮೋದಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಖಂಡಿಸಿ ಮಂಡ್ಯದ ಸಂಜಯ ವೃತ್ತದಲ್ಲಿ ಶನಿವಾರ ಬಿಜೆಪಿ ಪ್ರತಿಭಟನೆ ನಡೆಸಿತು. ಆ ಸಂದರ್ಭದಲ್ಲಿ ಕೆಳಗೆ ಕೂತಿದ್ದವರು ಉದ್ದೇಶಪೂರ್ವಕವಾಗಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗುವುದು ನಂತರ ಇತರ ಮುಖಂಡರು ನಗುತ್ತಾ ಅವರ ಬಾಯಿ ಮುಚ್ಚಿಸುವುದು ಕಂಡುಬಂದಿದೆ.

ಮತ್ತೊಮ್ಮೆ ಮುಖಂಡನೊಬ್ಬ ಜಿಂದಾಬಾದ್, ಜಿಂದಾಬಾದ್ ಎಂದು ಘೋಷಣೆ ಕೂಗಿದಾಗಿ ಬಿಜೆಪಿ ಕಾರ್ಯಕರ್ತನೊಬ್ಬ ಪಾಕಿಸ್ತಾನ್ ಜಿಂದಾಬಾದ್ ಎಂದು ನಗುತ್ತಾ ಘೋಷಣೆ ಕೂಗಿದ್ದಾನೆ. ಅಲ್ಲದೆ ಆತನ ಪಕ್ಕದಲ್ಲಿದ್ದ ಇತ್ತೀಚೆಗೆ ಬಿಜೆಪಿ ಸೇರಿದ ಮುಖಂಡ ಇಂಡುವಾಳು ಸಚ್ಚಿದಾನಂದ ನಕ್ಕಿದ್ದಾರೆ. ಮತ್ತೊಮ್ಮೆ ಬಿಜೆಪಿ ಮುಖಂಡ ಆತನ ವಿರುದ್ಧ ಕೈ ತೋರಿಸುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಆದರೆ ಅಲ್ಲಿ ನೆರೆದಿದ್ದ ಯಾರೊಬ್ಬರೂ ಸಹ ಪಾಕಿಸ್ತಾನ ಜಿಂದಾಬಾದ್ ಎಂದ ಬಿಜೆಪಿ ಕಾರ್ಯಕರ್ತನ ವಿರುದ್ಧ ಮಾತನಾಡಿಲ್ಲ ಎಂಬುದು ಅಚ್ಚರಿ ಎನಿಸಿದೆ.

ಅದಕ್ಕು ಮೊದಲು ಪಾಕಿಸ್ತಾನ ಮುರ್ದಾಬಾದ್ ಎಂದು ಘೋಷಣೆ ಕೂಗಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ಆ ಬಿಜೆಪಿ ಕಾರ್ಯಕರ್ತರು ಎರಡೆರಡು ಬಾರಿ ಪಾಕಿಸ್ತಾನ ಜಿಂದಾಬಾದ್ ಎಂದು ಉದ್ದೇಶಪೂರ್ವಕವಾಗಿ ಕುಚೇಷ್ಟೆಗೆ ಕೂಗಿದ್ದಾರೆ. ಬೇರೆಯವರಿಗೆ ಸದಾ ದೇಶಭಕ್ತಿಯ ಪಾಠ ಹೇಳುವ ಬಿಜೆಪಿ ಪಕ್ಷದ ಕಾರ್ಯಕರ್ತನೇ ಈ ರೀತಿ ಘೋಷಣೆ ಕೂಗಿರುವುದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ಘೋಷಣೆ ಕೂಗಿದ ದೇಶದ್ರೋಹಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕೆಂದು ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಫುಲೆ ದಂಪತಿ, ಶಿವಾಜಿ ಮಹಾರಾಜರಿಗೆ ಅಗೌರವ ಆರೋಪ: ಬಿಜೆಪಿ ವಿರುದ್ಧ ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...