Homeಕರ್ನಾಟಕಮಂಡ್ಯ | ದಲಿತ ಯುವಕನ ಸಜೀವ ದಹನ; ಆರೋಪಿ ನಾಪತ್ತೆ

ಮಂಡ್ಯ | ದಲಿತ ಯುವಕನ ಸಜೀವ ದಹನ; ಆರೋಪಿ ನಾಪತ್ತೆ

- Advertisement -
- Advertisement -

ಹುಲ್ಲಿನ ಮೆದೆಯಲ್ಲಿ ದಲಿತ ಯುವಕನ ಸಜೀವ ದಹನ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ನಡೆದಿದೆ ಎಂದು ಈದಿನ.ಕಾಂ ವರದಿ ಮಾಡಿದೆ. ಪ್ರಕರಣ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಸದರಿ ಗ್ರಾಮದ ಸವರ್ಣಿಯ ಯುವಕ ಅನಿಲ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ನಾಪತ್ತೆಯಾಗಿರುವುದಾಗಿ ವರದಿ ಹೇಳಿದೆ. ಮಂಡ್ಯ | ದಲಿತ

ಕತ್ತರಘಟ್ಟ ಗ್ರಾಮದಲ್ಲಿ ಹುಲ್ಲಿನ ಮೆದೆಗೆ ಬೆಂಕಿ ಹಾಕಿ ದಲಿತ ಯುವಕ ಜಯಕುಮಾರ್‌ನನ್ನು ಜೀವಂತವಾಗಿ ದಹನ ಮಾಡಿರುವ ಸಂಬಂಧ ಗ್ರಾಮದ ಕೃಷ್ಣೆಗೌಡರ ಮಗ ಅನಿಲ್ ಕುಮಾರ್ ವಿರುದ್ಧ ಮೃತನ ಪತ್ನಿ ಲಕ್ಷ್ಮಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೃಷ್ಣರಾಜಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಸಿದ್ದಯ್ಯ ಅವರಿಗೆ ಸೇರಿರುವ ಜಮೀನಿನಲ್ಲಿ ಕೃಷ್ಣೆಗೌಡರ ಮಗ ಅನಿಲ್ ಕುಮಾರ್ ಅಕ್ರಮವಾಗಿ ಹುಲ್ಲಿನ ಮೆದೆಯನ್ನು ಹಾಕಿಕೊಂಡಿದ್ದು, ತನ್ನ ಜಮೀನಿನಲ್ಲಿ ಅಕ್ರಮವಾಗಿ ಹಾಕಿಕೊಂಡಿರುವ ಹುಲ್ಲಿನ ಮೆದೆಯನ್ನು ತೆರವು ಮಾಡಿಕೊಡುವಂತೆ ಗ್ರಾಮದಲ್ಲಿ ರಾಜಿ ಪಂಚಾಯಿತಿ ಮಾಡಿ ಅದು ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮೃತ ಯುವಕ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ತಿಳಿದುಬಂದಿದೆ.

ನಿನ್ನೆಯೂ ಅನಿಲ್ ಮತ್ತು ಜಯಕುಮಾರ್ ನಡುವೆ ತೀವ್ರ ಮಾತಿನ ಚಕಮಕಿ ಹಾಗೂ ಪರಸ್ಪರ ಗಲಾಟೆ, ಗದ್ದಲಗಳು ನಡೆದಿದ್ದು, ʼನಾನು ಹುಲ್ಲಿನ ಮೆದೆಯನ್ನು ತೆರವುಗೊಳಿಸುವುದಿಲ್ಲ, ಮೆದೆಗೆ ಬೆಂಕಿ ಹಾಕ್ತೀನಿ ನೀನು ಬೆಂಕಿಯೊಳಗೆ ಬಿದ್ದು ಸಾಯಿ, ಇಲ್ಲದಿದ್ದರೆ ನಾನೇ ನಿನ್ನನ್ನು ಸಾಯಿಸುತ್ತೇನೆʼ ಎಂದು ಸವರ್ಣೀಯನೊಬ್ಬ ಬೆದರಿಕೆ ಹಾಕಿದ ಎನ್ನಲಾಗಿದೆ. ಮನನೊಂದ ದಲಿತ ಯುವಕ ಜಯಕುಮಾರ್ ಉರಿಯುತ್ತಿರುವ ಹುಲ್ಲಿನ ಮೆದೆಯೊಳಕ್ಕೆ ಹಾರಿ ಸಾವಿಗೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ʼನನ್ನ ಪತಿಯ ಸಾವಿಗೆ ಅನಿಲ್ ಕಾರಣʼ ಎಂದು ಲಕ್ಷ್ಮಿ ದೂರು ನೀಡಿದ್ದಾರೆ.

ಆರೋಪಿ ಅನಿಲ್ ಕುಮಾರ್ ತಲೆ ಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಗ್ರಾಮಾಂತರ ಪೊಲೀಸರು ಬಲೆ ಬೀಸಿದ್ದಾರೆ. ನಾಗಮಂಗಲ ಡಿವೈಎಸ್‌ಪಿ ಚಲುವರಾಜು ಅವರು ಅನಿಲ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದು, ‘ಉರಿಯುವ ಬೆಂಕಿಯಲ್ಲಿ ಕಿರಚಾಟ, ಬೆಂಕಿ ಜ್ವಾಲೆಗೆ ಓಡಾಟ ಇರಬೇಕಿತ್ತು. ಪಕ್ಕದಲ್ಲೇ ಟ್ರಾಕ್ಟರ್‌ನಲ್ಲಿ ಉಳುಮೆ ಮಾಡುತ್ತಿದ್ದವರಿಗೂ ಕೇಳಿಸಿಲ್ಲವೆಂದರೆ, ಮುಂಚೆಯೇ ಕೊಲೆ ಮಾಡಿ ಸುಟ್ಟಿರಬೇಕು’ ಎನ್ನುವ ಮಾತುಗಳು ಕೇಳಿಬಂದಿವೆ.

ಕೃಷ್ಣರಾಜಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಜಯಕುಮಾರ್ ಅವರ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಮೃತ ದೇಹವನ್ನು ಹಸ್ತಾಂತರಿಸಲಾಯಿತು.

ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಮಾಂಬಳ್ಳಿ ಜಯರಾಮ್, ತಾಲೂಕು ಅಧ್ಯಕ್ಷ ಊಚನಹಳ್ಳಿ ನಟರಾಜ್, ದಲಿತ ಹಕ್ಕುಗಳ ಹೋರಾಟಗಾರ ಚನ್ನಕೇಶವ, ರಂಗಸ್ವಾಮಿ, ಬಂಡಿಹೊಳೆ ರಮೇಶ್, ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಆನಂದ್ ಗೌಡ, ದಲಿತ ಯುವರೈತ ಮೃತ ಜಯಕುಮಾರ್ ಪತ್ನಿ ಲಕ್ಷ್ಮಿ, ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಮೃತರ ಬಂಧುಗಳು ಹಾಗೂ ಕತ್ತರಘಟ್ಟ ಗ್ರಾಮಸ್ಥರು ಅಂತ್ಯ ಸಂಸ್ಕಾರದ ವೇಳೆ ಇದ್ದರು. ಮಂಡ್ಯ | ದಲಿತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೋಲಾಪುರದ ಜವಳಿ ಉತ್ಪಾದನಾ ಘಟಕದಲ್ಲಿ ಭೀಕರ ಅಗ್ನಿ ಅವಘಡ: ಮಾಲೀಕ ಸೇರಿ ಮಂದಿ ಸಾವು

ಸೋಲಾಪುರದ ಜವಳಿ ಉತ್ಪಾದನಾ ಘಟಕದಲ್ಲಿ ಭೀಕರ ಅಗ್ನಿ ಅವಘಡ: ಮಾಲೀಕ ಸೇರಿ ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...