Homeಕರ್ನಾಟಕಮಂಡ್ಯ: ಸಚಿವ ಅಶ್ವಥ್‌ ನಾರಾಯಣ್‌ ವಿರುದ್ಧ ಎಫ್‌ಐಆರ್‌‌; ಆರೋಪಿ ನಂ1

ಮಂಡ್ಯ: ಸಚಿವ ಅಶ್ವಥ್‌ ನಾರಾಯಣ್‌ ವಿರುದ್ಧ ಎಫ್‌ಐಆರ್‌‌; ಆರೋಪಿ ನಂ1

- Advertisement -
- Advertisement -

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇರೆಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಅಭ್ಯರ್ಥಿ ಮೈ.ವಿ. ರವಿಶಂಕರ್ ವಿರುದ್ಧ ಮಂಡ್ಯದ ಪೂರ್ವ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರ ನಿರ್ದೇಶನದ ಮೇರೆಗೆ ಇವರಿಬ್ಬರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘನೆಯಡಿ ಸಚಿವ ಅಶ್ವತ್ಥ್ ನಾರಾಯಣ್ ಒಂದನೇ ಆರೋಪಿಯಾಗಿದ್ದು, ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ ಎರಡನೇ ಆರೋಪಿಯಾಗಿದ್ದಾರೆ. ಐಪಿಸಿ ಸೆಕ್ಷನ್ 1860 (U/s-171C, 171F) ಮತ್ತು REPRESENTATION OF PEOPLE ACT(ಪ್ರಜಾಪ್ರತಿನಿಧಿ ಕಾಯ್ದೆ), 1950,1951,1989 (U/s-123) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೇ 16ರಂದು ಸಚಿವರು ನಗರದ ವಿವಿಧ ಕಾಲೇಜುಗಳಲ್ಲಿ ವಿಧಾನ ಪರಿಷತ್ ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ ಪರವಾಗಿ ಪ್ರಚಾರ ನಡೆಸಿದ್ದರು.

ಅಧಿಕಾರ ದುರ್ಬಳಕೆ ಮಾಡಿಕೊಂಡು ಸಚಿವರು ಪ್ರಚಾರ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ಚುನಾವಣಾಧಿಕಾರಿಗೆ ದೂರು ನೀಡಿದ್ದರು. ಮಂಜುನಾಥ್ ಅವರ ದೂರು ಆಧರಿಸಿ ತನಿಖೆ ನಡೆಸಲಾಗಿತ್ತು.

ಇದನ್ನೂ ಓದಿ: ಮನೆಗೋಗಿ ಅಡುಗೆ ಮಾಡು: ಸುಪ್ರಿಯಾ ಸುಳೆ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ – ತೀವ್ರ ಟೀಕೆ

ಸಚಿವರು ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಚುನಾವಣಾ ನೀತಿ ಸಂಹಿತೆ ತಂಡದ ಮುಖ್ಯಸ್ಥರೂ ಆದ, ಜಿಲ್ಲಾ ಪಂಚಾಯಿತಿ ಸಿಇಒ ಸಹಾಯಕ ಚುನಾವಣಾಧಿಕಾರಿಗೆ ವರದಿ ನೀಡಿದ್ದರು.

ಇಷ್ಟೇ ಅಲ್ಲದೆ, ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಪರಿಶೀಲನೆ ನಡೆಸಿದ ನ್ಯಾಯಾಧೀಶರು ಕೂಡ ಪ್ರಕರಣ ದಾಖಲಿಸಲು ಪೂರ್ವ ಠಾಣೆಯ ಪೊಲೀಸರಿಗೆ ಸೂಚಿಸಿದ್ದರು. ಅದರಂತೆ ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಚಿವ ಅಶ್ವಥ್ ನಾರಾಯಣ್ ಹಾಗೂ ಮೈ.ವಿ. ರವಿಶಂಕರ್ ವಿರುದ್ಧ ಪೂರ್ವ ಠಾಣೆಯ ಪಿಎಸ್ಐ ಕೆ‌.ಎನ್‌.ಕೇಶವಮೂರ್ತಿ ಎಫ್‌ಐಆರ್ ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....