Homeಕರ್ನಾಟಕಮಂಡ್ಯ | ಗಣೇಶ ಮೂರ್ತಿ ಮೆರವಣಿಗೆ ವೇಳೆ ಹಿಂಸಾಚಾರ; 46 ಮಂದಿಯ ಬಂಧನ

ಮಂಡ್ಯ | ಗಣೇಶ ಮೂರ್ತಿ ಮೆರವಣಿಗೆ ವೇಳೆ ಹಿಂಸಾಚಾರ; 46 ಮಂದಿಯ ಬಂಧನ

- Advertisement -
- Advertisement -

ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದ ಎರಡು ಗುಂಪುಗಳ ನಡುವಿನ ಹಿಂಸಾತ್ಮಕ ಘರ್ಷಣೆಗೆ ಸಂಬಂಧಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಘರ್ಷಣೆ ವೇಳೆ ನಡೆದ ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬುಧವಾರ ರಾತ್ರಿ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಆದಾಗ್ಯೂ, ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದ್ದು, ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸೆಪ್ಟೆಂಬರ್ 14 ರವರೆಗೆ ಈ ಪ್ರದೇಶದಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರು ಸೇರುವುದನ್ನು ತಡೆಯುವ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬುಧವಾರದ ಘಟನೆಗೆ ಸಂಬಂಧಿಸಿದಂತೆ ನಾವು 46 ಜನರನ್ನು ಬಂಧಿಸಿದ್ದೇವೆ. ಪರಿಸ್ಥಿತಿ ಈಗ ಸಹಜ ಸ್ಥಿತಿಗೆ ಮರಳಿದೆ. ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿದ್ದು, ಅಂಗಡಿಗಳು ತೆರೆದಿವೆ. ನಾವು ಸಿವಿಲ್ ಪೊಲೀಸ್ ಅಧಿಕಾರಿಗಳು ಸೇರಿದಂತೆ ರಾಜ್ಯ ಮೀಸಲು ಪೊಲೀಸರೊಂದಿಗೆ ಹೆಚ್ಚುವರಿ ಪಡೆಯನ್ನು ನಿಯೋಜಿಸಿದ್ದೇವೆ.” ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಪಿಟಿಐಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಅಕ್ರಮ ಸಭೆ, ಕೊಲೆ ಯತ್ನ, ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು, ಸಾರ್ವಜನಿಕ ಆಸ್ತಿ ನಾಶ ಮತ್ತು ಭಾರತೀಯ ನ್ಯಾಯ ಸಂಹಿತೆಯ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಕೇಂದ್ರದಿಂದ ತೆರಿಗೆ ಹಂಚಿಕೆ ತಾರತಮ್ಯ : 8 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬುಧವಾರ ಬದರಿಕೊಪ್ಪಲು ಗ್ರಾಮದ ಜನರ ಗಣೇಶ ಮೂರ್ತಿ ಮೆರವಣಿಗೆ ಪೂಜಾ ಸ್ಥಳಕ್ಕೆ ತಲುಪಿದಾಗ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದ್ದು, ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವಿನ ಘರ್ಷಣೆಯ ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ದುಷ್ಕರ್ಮಿಗಳು ಅಂಗಡಿಗಳನ್ನು ಧ್ವಂಸಗೊಳಿಸಿದ್ದು, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಇದೇ ವೇಳೆ ಮೆರವಣಿಗೆ ನಡೆಸಿದ ಯುವಕರ ಗುಂಪು ಹಿಂಸಾಚಾರಕ್ಕೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸಿದ್ದಾರೆ.

ವಿಡಿಯೊ ನೋಡಿ:ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...