Homeಕರ್ನಾಟಕಮಂಡ್ಯ: ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ, ಕೊಲೆ ಶಂಕೆ

ಮಂಡ್ಯ: ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ, ಕೊಲೆ ಶಂಕೆ

- Advertisement -
- Advertisement -

ಜನವರಿ 20ರಂದು ನಾಪತ್ತೆಯಾಗಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿಯ ಶಿಕ್ಷಕಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ.

ಮೇಲುಕೋಟೆಯ ಎಸ್‌ಇಟಿ ಶಾಲೆಯ ಶಿಕ್ಷಕಿ ದೀಪಿಕಾ (35) ಮೃತ ಮಹಿಳೆ. ಈಕೆಯ ದೇಹ ಮೇಲುಕೋಟೆಯ ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ದೊರೆತಿದೆ.

ಜನವರಿ 20ರಂದು ಶಾಲೆಗೆ ತೆರಳಿದ್ದ ದೀಪಿಕಾ ವಾಪಸ್‌ ಮನೆಗ ಬಂದಿರಲಿಲ್ಲ. ಕುಟುಂಬಸ್ಥರು ನಾಪತ್ತೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಮೇಲುಕೋಟೆ ಪೊಲೀಸರಿಗೆ ಯೋಗಾನರಸಿಂಹ ಸ್ವಾಮಿ ಬೆಟ್ಟದ ಬಳಿ ದೀಪಿಕಾ ಅವರ ಸ್ಕೂಟರ್‌ ಪತ್ತೆಯಾಗಿತ್ತು. ಅಲ್ಲಿ ಪರಿಶೀಲನೆ ನಡೆಸಿದಾಗ ಹೂತಿಟ್ಟ ಸ್ಥಿತಿಯಲ್ಲಿ ದೀಪಿಕಾ ಅವರ ಮೃತದೇಹ ದೊರೆತಿದೆ. ಪೊಲೀಸರು ಮೃತದೇಹವನ್ನು ಹೊರತೆಗೆಸಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ.

ದೀಪಿಕಾ ಅವರನ್ನು ಕೊಲೆ ಮಾಡಿ ಹೂತಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಯಾರು, ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿಲ್ಲ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಕೈಗೊಂಡಿದ್ದಾರೆ.

“ಕೊಲೆಗೆ ಕಾರಣ ಗೊತ್ತಾಗಿಲ್ಲ. ಇಬ್ಬರು ಕಿಡಿಗೇಡಿಗಳು ದೀಪಿಕಾ ಮೇಲೆ ಹಲ್ಲೆ ಮಾಡಿದ್ದ ದೃಶ್ಯವನ್ನು ಪ್ರವಾಸಿಗರೊಬ್ಬರು ಚಿತ್ರೀಕರಿಸಿ ಕಳುಹಿಸಿದ್ದಾರೆ. ಶೀಘ್ರವೇ ಕೊಲೆಗಾರರನ್ನು ಬಂಧಿಸಲಾಗುವುದು” ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಯುವಕನಿಂದ ಹತ್ಯೆ ಶಂಕೆ:

ಶಿಕ್ಷಕಿ ದೀಪಿಕಾರನ್ನು ಅವರದ್ದೇ ಗ್ರಾಮದ 22 ವರ್ಷದ ಯುವಕ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಯುವಕನ ಮೇಲೆ ದೀಪಿಕಾ ಪತಿ ಲೋಕೇಶ್‌ ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಯುವಕ ದೀಪಿಕಾಳನ್ನು ಅಕ್ಕ ಎಂದು ಕರೆಯುತ್ತಿದ್ದನಂತೆ. ದೀಪಿಕಾಳ ಮೃತದೇಹವು ಸಿಕ್ಕಿದ ದಿನದಿಂದ ಆತ ನಾಪತ್ತೆಯಾಗಿದ್ದಾನೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ; 16 ಜನರ ವಿರುದ್ಧ ಕೇಸ್ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ...

0
ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು...