Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಬಿಜೆಪಿ ಟಿಕೆಟ್ ನೀಡುತ್ತೇವೆ ಎಂದು ಹಿರಿಯ ಮುಖಂಡರು ಘೋಷಿಸಿದ್ದರು. ಆದರೆ ಸದ್ಯ ಬಿಡುಗಡೆಯಾಗಿರುವ ಬಿಜೆಪಿಯ ಮೊದಲ 189 ಅಭ್ಯರ್ಥಿಗಳ ಪಟ್ಟಿಯಲ್ಲಿ ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳಿಗೂ ಟಿಕೆಟ್ ಘೋಷಿಸಿದ್ದು ಅದರಲ್ಲಿ ಸಾಮಾನ್ಯ ಕಾರ್ಯಕರ್ತರ ಹೆಸರು ಮಿಸ್ ಆಗಿದ್ದು, ಬೇರೆ ಪಕ್ಷಗಳಿಂದ ವಲಸೆ ಬಂದವರಿಗೆ ಮಣೆ ಹಾಕಿರುವುದು ಸ್ಪಷ್ಟವಾಗಿದೆ.

ಮಂಡ್ಯ, ನಾಗಮಂಗಲ, ಕೆ.ಆರ್ ಪೇಟೆ ಮತ್ತು ಮದ್ದೂರಿನಲ್ಲಿ ಜೆಡಿಎಸ್‌ನಿಂದ ವಲಸೆ ಬಂದವರಿಗೆ ಹಾಗೂ ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಬಂದವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮಂಡ್ಯ: ಅಶೋಕ್ ಎಸ್‌.ಡಿ ಜಯರಾಂ

ಅಶೋಕ್ ಎಸ್‌.ಡಿ ಜಯರಾಂರವರು ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. 2013ರ ಚುನಾವಣೆ ವೇಳೆಗೆ ಮಂಡ್ಯದಲ್ಲಿ ಹಾಲಿ ಶಾಸಕ ಎಂ.ಶ್ರೀನಿವಾಸ್ ಜೆಡಿಎಸ್‌ನಿಂದ ಕಣಕ್ಕಿಳಿಯುತ್ತಾರೆ. ಜೆಡಿಎಸ್ ಟಿಕೆಟ್ ಸಿಗದಿದ್ದರಿಂದ ಅಶೋಕ್ ಜಯರಾಂ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ. ಕೊನೆ ಕ್ಷಣದಲ್ಲಿ ಜೆಡಿಎಸ್ ಪಕ್ಷವು ಎಸ್.ಡಿ ಜಯರಾಂರವರನ್ನು ಸಮಾಧಾನ ಪಡಿಸಿ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸುವಂತೆ ಮಾಡುತ್ತದೆ. ಇನ್ನು 2018ರಲ್ಲಿಯೂ ಎಂ.ಶ್ರೀನಿವಾಸ್‌ರವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದ್ದರಿಂದ ಬೇಸೆತ್ತ ಅವರು ಬಿಜೆಪಿ ಸೇರಿದ್ದಾರೆ.

ಮದ್ದೂರು – ಎಸ್‌.ಪಿ ಸ್ವಾಮಿ

ಮದ್ದೂರಿನಲ್ಲಿ ಜೆಡಿಎಸ್ ಟಿಕೆಟ್ ಸಿಗುವುದಿಲ್ಲ ಎಂಬುದನ್ನು ಅರಿತು ಪಕ್ಷ ತೊರೆದು ಬಿಜೆಪಿ ಸೇರಿರುವ ಮುನ್ಮುಲ್ ನಿರ್ದೇಶಕ ಎಸ್.ಪಿ ಸ್ವಾಮಿಯವರು ಬಿಜೆಪಿ ಟಿಕೆಟ್ ಘೋಷಿಸಿದೆ. ಇದು ಅವರ ಮೊದಲ ವಿಧಾನಸಭಾ ಚುನಾವಣೆಯಾಗಿದೆ. ಮಂಡ್ಯ ಜಿ.ಪಂ ಅಧ್ಯಕ್ಷರಾಗಿದ್ದ ಅವರ ಪತ್ನಿ ನಾಗರತ್ನರವರ ಜೊತೆಗೂಡಿ ನಾಲ್ಕು ಜಿ.ಪಂ ಸದಸ್ಯರು ಇವರೊಡನೆ ಬಿಜೆಪಿ ಸೇರಿದ್ದಾರೆ.

ಶ್ರೀರಂಗಪಟ್ಟಣ – ಸಚ್ಚಿದಾನಂದ

2013 ರಲ್ಲಿ ಶ್ರೀರಂಗಪಟ್ಟಣದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಎಸ್.ಎಲ್ ಲಿಂಗರಾಜುರವರ ಅಳಿಯ, ಕೆಪಿಸಿಸಿ ಸದಸ್ಯರಾಗಿದ್ದ ಸಚ್ಚಿದಾನಂದ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಅಭ್ಯರ್ಥಿಯಾಗಿದ್ದಾರೆ.

ನಾಗಮಂಗಲ – ಸುಧಾ ಶಿವರಾಮೇಗೌಡ

ಎರಡು ಸಲ ಶಾಸಕರಾಗಿದ್ದ ಎಲ್.ಆರ್ ಶಿವರಾಮೇಗೌಡರು 2018ರಲ್ಲಿ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಜಯ ಗಳಿಸಿದ್ದರು. ಆದರೆ ಅವರು ಕಳೆದ ವರ್ಷ ಜಿ.ಮಾದೇಗೌಡರ ವಿರುದ್ಧ ಹಗುರವಾಗಿ ಮಾತನಾಡಿದ ಕಾರಣದಿಂದ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಅವರು ಕಳೆದ ವಾರದಲ್ಲಿ ಬಿಜೆಪಿ ಸೇರಿದ್ದರು. ಅವರೇ ಅಭ್ಯರ್ಥಿ ಎನ್ನಲಾಗುತ್ತಿತ್ತು. ಆದರೆ ಅವರು ತಮ್ಮ ಪತ್ನಿ ಸುಧಾ ಶಿವರಾಮೇಗೌಡರಿಗೆ ಟಿಕೆಟ್ ತಂದಿದ್ದಾರೆ.

ಕೆ.ಆರ್ ಪೇಟೆ – ಕೆ.ಸಿ ನಾರಾಯಣಗೌಡ

ನಾರಾಯಣಗೌಡರು 2008ರಲ್ಲಿ ಕೆ.ಆರ್ ಪೇಟೆಯಲ್ಲಿ ಬಿಎಸ್‌ಪಿಯಿಂದ ಸ್ಪರ್ಧಿಸಿ ಸೋತಿದ್ದರು. ಆನಂತರ ಜೆಡಿಎಸ್ ಸೇರಿ 2013, 2018ರಲ್ಲಿ ಗೆಲುವು ಸಾಧಿಸಿದ್ದರು. ಆದರೆ 2019 ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಜಯ ಕಂಡಿದ್ದರು. ಅವರಿಗೆ ಈ ಬಾರಿಯೂ ಬಿಜೆಪಿ ಟಿಕೆಟ್ ನೀಡಿದೆ.

ಮೇಲುಕೋಟೆ – ಡಾ.ಇಂದ್ರೇಶ್ ಕುಮಾರ್

ಮೇಲುಕೋಟೆಯಲ್ಲಿ ಬಿಜೆಪಿಗೆ ನೆಲೆ ಇಲ್ಲ. ಆದರೂ ಒಂದಷ್ಟು ಸಂಖ್ಯೆಯ ಓಟುಗಳನ್ನು ಪಡೆದು ತಾವೂ ನೆಲೆ ಕಂಡು, ಪಕ್ಷಕ್ಕೂ ನೆಲೆ ಕಾಣಿಸಲು ಡಾ.ಇಂದ್ರೇಶ್‌ ಕುಮಾರ್ ಮುಂದಾಗಿದ್ದಾರೆ. ಔಷಧಿ ಕಂಪನಿ ನಡೆಸುವ ಅವರಿಗೆ ಬಿಜೆಪಿ ಟಿಕೆಟ್ ಲಭಿಸಿದೆ.

ಮಳವಳ್ಳಿ – ಮುನಿರಾಜು

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಮಳವಳ್ಳಿಯಲ್ಲಿ ಭೋವಿ ಸಮುದಾಯದ ಜಿ.ಮುನಿರಾಜುರವರು 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ 26,397 ಮತಗಳನ್ನು ಪಡೆದಿದ್ದರು. ಆದರೆ ಕಳೆದ ಚುನಾವಣೆಯ ಸಮಯದಲ್ಲಿ ಮಾಯವಾಗಿದ್ದ ಅವರು ಇತ್ತೀಚೆಗೆ ಮತ್ತೆ ಪ್ರತ್ಯಕ್ಷರಾಗಿದ್ದು ಸಮಾಜಸೇವೆ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದರು. ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಆದರೆ ಅವರು ಮೂಲ ಮಳವಳ್ಳಿಯವರಲ್ಲ, ಬೆಂಗಳೂರಿನ ಕೆಂಗೇರಿಯವರು ಎಂದು ಕೆಲವರು ಆರೋಪ ಮಾಡುತ್ತಾರೆ.

ಇದನ್ನೂ ಓದಿ; 8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಇಲ್ಲಿದೆ ಪಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...