Homeಕರ್ನಾಟಕಮಂಡ್ಯ: ಉಪನ್ಯಾಸಕ ಕೆ.ಎಂ.ವಾಸುದೇವರವರ ವರ್ಗಾವಣೆ ರದ್ದುಪಡಿಸುವಂತೆ ವಿದ್ಯಾರ್ಥಿಗಳ ಮನವಿ

ಮಂಡ್ಯ: ಉಪನ್ಯಾಸಕ ಕೆ.ಎಂ.ವಾಸುದೇವರವರ ವರ್ಗಾವಣೆ ರದ್ದುಪಡಿಸುವಂತೆ ವಿದ್ಯಾರ್ಥಿಗಳ ಮನವಿ

ಶೀಳನೆರೆಯ ಗ್ರಾಮಸ್ಥರು, ಕಾಲೇಜಿನ ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -
- Advertisement -

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಶೀಳನೆರೆ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಭಾಷೆಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎಂ.ವಾಸುದೇವ ಅವರ ವರ್ಗಾವಣೆ  ರದ್ದುಪಡಿಸುವಂತೆ ಕೋರಿ ಕಾಲೇಜಿನ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಉಪನ್ಯಾಸಕ ಕೆ.ಎಂ.ವಾಸುದೇವ ಮೇಲೆ ಸಾಕ್ಷಾಧಾರವಿಲ್ಲದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರ್ನಾಡ ಮುಡಿಪು ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆ ಮಾಡಲಾಗಿದೆ. ವಿಷಯ ತಿಳಿದ ಹಳೆಯ ವಿದ್ಯಾರ್ಥಿಗಳು ಮತ್ತು ಹಾಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಾಥಮಿಕ ಮತ್ತುಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‌ಗೆ ಮನವಿ ಸಲ್ಲಿಸಿದ್ದಾರೆ.

’ವರ್ಗಾವಣೆಯ ವಿಚಾರದಲ್ಲಿ ವಿದ್ಯಾರ್ಥಿಗಳು, ಸ್ಥಳೀಯರು, ಹಳೆಯ ವಿದ್ಯಾರ್ಥಿಗಳ ಅಭಿಪ್ರಾಯಗಳನ್ನು ಗಣನೆಗೆ ತೆಗದುಕೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ. ಕೆ.ಎಂ.ವಾಸುದೇವ ಅವರು ಶೀಳನೆರೆಯ ಕಾಲೇಜಿಗೆ ಬಂದ ನಂತರ ಕಾಲೇಜು ಹಾಗೂ ವಿದ್ಯಾರ್ಥಿಗಳ ಸಾಮರ್ಥ್ಯಾಭಿವೃದ್ದಿಗಾಗಿ ಬಹಳಷ್ಟು ಶ್ರಮಿಸಿದ್ದಾರೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಕೆ.ಎಂ.ವಾಸುದೇವ ಅವರು ಈ ಕಾಲೇಜಿನ ಉಪನ್ಯಾಸಕರಾದಾಗಿನಿಂದ ಇಲ್ಲಿಯವರೆಗೂ ಪ್ರತಿ ಶೈಕ್ಷಣಿಕ ವರ್ಷದಲ್ಲಿಯು ಫಲಿತಾಂಶ ಉತ್ತಮ ರೀತಿಯಲ್ಲಿದೆ. ಅಲ್ಲದೆ, ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯದಲ್ಲಿ, ವಿಶೇಷವಾಗಿ ಇಂಗ್ಲಿಷ್ ವಿಷಯದಲ್ಲಿ ವಿದ್ಯಾರ್ಥಿಗಳ ಕಲಿಕೆ ಬಹಳಷ್ಟು ಸುಧಾರಿಸಿದೆ. ಸಮಯವನ್ನು ಲೆಕ್ಕಿಸದೆ ವಿದ್ಯಾರ್ಥಿಗಳಿಗೆ ಭೋಧನೆಯನ್ನು ಮಾಡುವ ಮೂಲಕ ವಿದ್ಯಾರ್ಥಿಗಳ ಹಾಗೂ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಬಿಡುವಿನ ಸಮಯವನ್ನೂ ಕೂಡ ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿಗಾಗಿ ಮೀಸಲಿಟ್ಟು, ದುಡಿದಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಇನ್ನು, ಕೆ.ಆರ್.ಪೇಟೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ (ಶತಮಾನದ ಶಾಲೆ)ಯನ್ನು ಅಭಿವೃದ್ಧಿಗೊಳಿಸಲು ಕೆ.ಎಂ.ವಾಸುದೇವ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೆ, ಅದೇ ಶಾಲೆಗೆ ತಮ್ಮ ಮಗನಾದ ಬುದ್ದದಾಸ್ ಅವರನ್ನು ಸೇರಿಸಿದ್ದು, ಸರ್ಕಾರಿ ನೌಕರರಿಗೆ ಮಾದರಿಯಾಗಿದ್ದಾರೆ. ಶೀಳನೆರೆಯಲ್ಲಿರುವ ಸರ್ಕಾರಿ ಪ್ರಥಾಮಿಕ ಶಾಲೆಯಲ್ಲಿ ಮಕ್ಕಳ ಮನೆ ( ಎಲ್.ಕೆ.ಜಿ. & ಯು.ಕೆ.ಜಿ) ತರಗತಿಗಳನ್ನ ತೆರೆಯುವುದರಲ್ಲಿ ಯಶಸ್ವಿಯಾಗಿದ್ದಾರೆ.

ಅವರ ಸೇವೆಯನ್ನು ಸಹಿಸದ ಕೆಲವು ತಿಳಿಗೇಡಿ-ಭ್ರಷ್ಟ ವ್ಯಕ್ತಿಗಳು ವಾಸುದೇವ ಅವರ ವಿರುದ್ಧ ಪದೇ-ಪದೇ ಮೂಗರ್ಜಿಗಳನ್ನು ಬರೆದಿದ್ದಾರೆ. ಯಾರೋ ಒಬ್ಬರು ದುರುದ್ದೇಶಗಳಿಂದ ಬರೆದ ಅರ್ಜಿಗೆ ಸಂಬಂಧಿಸಿದಂತೆ ಕಾಲೇಜಿನಿಂದಾಗಲಿ, ವಿದ್ಯಾರ್ಥಿಗಳಿಂದಾಗಲಿ ಅಥವಾ ಗ್ರಾಮಸ್ಥರಿಂದಾಗಲಿ ಮಾಹಿತಿಗಳನ್ನು ಪಡೆಯದೆ, ಸಮರ್ಪಕ ವಿಚಾರಣೆ ನಡೆಸದೆ ಕ್ರಮ ವಹಿಸಿರುವುದು ನಮಗೆಲ್ಲ ನೋವುಂಟುಮಾಡಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಅಲ್ಲದೆ, ಇತ್ತೀಚಿಗೆ ಸರ್ಕಾರಿ ಗ್ರಾಮೀಣ ಕಾಲೇಜುಗಳು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುತ್ತಿರುವ ಈ ಸಂಧರ್ಭದಲ್ಲಿ ಕೆ.ಎಂ. ವಾಸುದೇವ ಅವರು ನಮ್ಮೂರಿನಿಂದ ವರ್ಗಾಗೊಂಡರೆ, ಉಪನ್ಯಾಸಕರಿಲ್ಲದ ಕಾರಣ ಈ ನಮ್ಮ ಕಾಲೇಜು ಕೂಡ ಮುಂದಿನ ವರ್ಷಗಳಲ್ಲಿ ಮುಚ್ಚುವ ಸ್ಥಿತಿಗೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹ ಒಬ್ಬ ಉತ್ತಮ ಉಪನ್ಯಾಸಕ ವಾಸುದೇವ ಅವರನ್ನು ಯಾವುದೋ ಒಂದು ಅನಗತ್ಯ ಆರೋಪದ ಮೇಲೆ ವರ್ಗಾವಣೆ ಮಾಡಿರುವುದು ಸರ್ಕಾರದ ತಪ್ಪು ನಡೆಯಾಗಿದ್ದು, ಅವರ ವರ್ಗಾವಣೆಯನ್ನು ರದ್ದುಪಡಿಸಿ, ಶೀಳನೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿಯೇ ಸೇವೆಯನ್ನು ಮುಂದುವರೆಸಲು ಅನುವು ಮಾಡಿಕೊಡಬೇಕೆಂದು ನಾವು ಕೇಳಿಕೊಳ್ಳುತ್ತಿದ್ದೇವೆ ಎಂದು ಮಂಡ್ಯ ಜಿಲ್ಲಾಧಿಕಾರಿಗಳ ಮೂಲಕ ಸಚಿವರಿಗೆ ಮನವಿ ಸಲ್ಲಿಸಲಾಗಿದೆ.


ಇದನ್ನೂ ಓದಿ: 3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...