Homeಕರ್ನಾಟಕಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

ಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿರುವ ಇಬ್ಬರು ಮಹಿಳೆಯರ ಮೃತದೇಹಗಳು ಪತ್ತೆಯಾಗಿವೆ. ಮಹಿಳೆಯರನ್ನು ಕೊಲೆ ಮಾಡಿ ಚೀಲದಲ್ಲಿ ಕಟ್ಟಿ ನಾಲೆಗೆ ಎಸೆದಿದ್ದು, ನಾಲೆಯಲ್ಲಿ ತೇಲಿ ಬಂದಿವೆ. ಇಂತಹ ಭಯಾನಕ ಕೊಲೆಗಳನ್ನು ಕಂಡು ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದ್ದಾರೆ.

ಪಾಂಡವಪುರ ಟೌನ್ ಪೊಲೀಸ್ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೃತದೇಹಗಳು ಪತ್ತೆಯಾಇದ್ದು, ಮಹಿಳೆಯರ ಗುರುತು ಇನ್ನು ಪತ್ತೆಯಾಗಿಲ್ಲ. ಹೊಟ್ಟೆ ಭಾಗದಿಂದ ಕೆಳಗೆ ಕತ್ತರಿಸಿದ ದೇಹದ ಭಾಗವನ್ನು ಚೀಲದಲ್ಲಿ ಕಟ್ಟಿ ನಾಲೆಗೆ ಎಸೆಯಲಾಗಿದೆ. ಎಲ್ಲಿಯೋ ಕೊಲೆ ಮಾಡಿ, ಮೃತದೇಹಗಳನ್ನು ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಅರೆ ಕೆರೆ ಗ್ರಾಮದ ಬಳಿಯ ಚಿಕ್ಕದೇವರಾಜ ನಾಲೆಯಲ್ಲಿ‌ 40 ರಿಂದ 45 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ತೇಲಿ ಬಂದು ರೈತನ ಜಮೀನಿನಲ್ಲಿ ಸಿಕ್ಕಿದೆ. ಮತ್ತೊಂದು ಪಾಂಡವಪುರ ತಾಲೂಕಿನ ಬೇಬಿ ಕೆರೆ- ಕೆ.ಬೆಟ್ಟಹಳ್ಳಿ ಮಾರ್ಗ ಮಧ್ಯೆ ಇರುವ ಬೇಬಿ ಕೆರೆಯ ನಾಲೆಯಲ್ಲಿ 30 ರಿಂದ 35 ವರ್ಷದ ಮಹಿಳೆಯ ಶವ ದೊರೆತಿದೆ.

ನಾಲೆಗಳಲ್ಲಿ ಪತ್ತೆಯಾದ ಎರಡೂ ಶವಗಳನ್ನು ಅರ್ಧಭಾಗವನ್ನಾಗಿ ಕತ್ತರಿಸಿ ಚೀಲದಲ್ಲಿ ಹಾಕಿ ಎರಡು ಕಾಲುಗಳನ್ನು ಕಟ್ಟಿ ನೀರಿಗೆ ಎಸೆದಿದ್ದಾರೆ. ಪೊಲೀಸರು ಪ್ಲಾಸ್ಟಿಕ್ ಚೀಲದಿಂದ ದೇಹದ ಭಾಗಗಳನ್ನು ವಶಪಡಿಸಿಕೊಂಡು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಕರಣದಲ್ಲಿ ಹತ್ಯೆಯಾಗಿರುವ ಇಬ್ಬರು ಮಹಿಳೆಯ ಬಗ್ಗೆ ಮಾಹಿತಿ ಕಲೆ ಹಾಕಿ‌ ಈ ಪ್ರಕರಣ ಕಂಡುಹಿಡಿಯಲು ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ.

ನಿನ್ನೆಯಷ್ಟೆ ದಲಿತ ಸಮುದಾಯದ ಹುಡುಗನನ್ನು ಪ್ರೀತಿಸಿದ್ದಕ್ಕಾಗಿ 17 ವರ್ಷದ ಬಾಲಕಿಯನ್ನು ಆಕೆಯ ತಂದೆಯೆ ಕತ್ತು ಹಿಸುಕಿ ಕೊಂದಿರುವ ಹೀನಾಯ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಿಂದ ವರದಿಯಾಗಿದೆ. ಮಗಳನ್ನು ಕೊಂದ ಬಂತರ ಆರೋಪಿ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾನೆ.


ಇದನ್ನೂ ಓದಿ: ಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...